ಮೃತ ವೃದ್ಧೆ ಯಶೋದಾ 
ರಾಜ್ಯ

ಉಡುಪಿ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣಬಿಟ್ಟ ವೃದ್ಧೆ!

ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ.

ಉಡುಪಿ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ.

ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ ನಾರಾಯಣ ಉಪಾಧ್ಯ (83) ಮೃತಪಟ್ಟವರು. ಸಾವಿನ ಮುನ್ನ ಹಕ್ಕು ಚಲಾಯಿಸಿದ ನಿರ್ವಹಿಸಿದ ಹಿರಿಯ ನಾಗರಿಕರ ಈ ಕರ್ತವ್ಯಪ್ರಜ್ಞೆಗೆ ಶ್ಲಾಘನೆ ವ್ಯಕ್ತವಾಗಿದೆ.

ಯಶೋಧಾ ಅವರು ಬ್ರಹ್ಮಾವರ ತಾಲೂಕು ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದ ನಿವಾಸಿಯಾಗಿದ್ದು, ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯ ಅವರ ಪತ್ನಿಯಾಗಿದ್ದಾರೆ. ಹಿರಿಯ ನಾಗರಿಕರಿಗಾಗಿ ರೂಪಿಸಲಾಗಿರುವ ಮನೆಯಿಂದ ಮತ ಕಾರ್ಯಕ್ರಮದಡಿ ಮನೆಯಿಂದಲೇ ಮತದಾನ ಮಾಡಿದ್ದರು.

ಮತದಾನಕ್ಕೂ ಮುನ್ನ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಆದರೆ ಮತದಾನ ಮಾಡಿಯೇ ಆಸ್ಪತ್ರೆಗೆ ತೆರಳಲು ಅವರು ನಿಶ್ಚಯಿಸಿದ್ದರು. ಮತದಾನ ಮಾಡಿದ ಬಳಿಕವೇ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ತೆರಳಿ ಅಲ್ಲಿ ದಾಖಲಾಗಿದ್ದರು. ರಾತ್ರಿ 9 ಗಂಟೆ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೆ ಯಶೋದಮ್ಮ ಮೃತಪಟ್ಟಿದ್ದಾರೆ. ಮೃತರು ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಲೋಕಸಭೆ ಚುನಾವಣೆಯ ಅಂಚೆ ಮತದಾನ ಕಾರ್ಯಕ್ರಮ ಏಪ್ರಿಲ್‌ 13ರಿಂದ ಆರಂಭವಾಗಿದ್ದು, ಏಪ್ರಿಲ್ 18ರವರೆಗೆ ನಡೆಯುತ್ತಿದೆ. 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಹಾಗೂ ವಿಶೇಷ ಚೇತನರಿಗೆ ಮನೆಯಿಂದಲೇ ಅಂಚೆ ಮತದಾನ ಮಾಡುವ ಸೌಲಭ್ಯ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್