ಮುಸ್ಲಿಂ ಯುವಕರ ಪುಂಡಾಟ 
ರಾಜ್ಯ

ಬೆಂಗಳೂರು: ರಾಮನವಮಿ ಮುಗಿಸಿ ಹೋಗುತ್ತಿದ್ದವರನ್ನು ಅಡ್ಡಗಟ್ಟಿ ಅಲ್ಲಾಹು ಅಕ್ಬರ್ ಎಂದ ಯುವಕರು, ವಿಡಿಯೋ ವೈರಲ್

ದೇಶಾದ್ಯಂತ ಹಿಂದೂಗಳು ರಾಮ ನವಮಿಯನ್ನು ಅದ್ದೂರಿಯಾಗಿ ಆಚರಿಸಿದ್ದು ಇನ್ನು ರಾಮನವಮಿಯನ್ನು ಮುಗಿಸಿಕೊಂಡು ಕಾರಿನಲ್ಲಿ ಹೋಗುತ್ತಿದ್ದವರನ್ನು ಅಡ್ಡಗಟ್ಟಿದ ಮುಸ್ಲಿಂ ಯುವಕರು ಪುಂಡಾಟ ನಡೆಸಿದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದ ಬೆಟ್ಟಳ್ಳಿ ಮಸೀದಿ ಬಳಿ ನಡೆದಿದೆ.

ಬೆಂಗಳೂರು: ದೇಶಾದ್ಯಂತ ಹಿಂದೂಗಳು ರಾಮ ನವಮಿಯನ್ನು ಅದ್ದೂರಿಯಾಗಿ ಆಚರಿಸಿದ್ದು ಇನ್ನು ರಾಮನವಮಿಯನ್ನು ಮುಗಿಸಿಕೊಂಡು ಕಾರಿನಲ್ಲಿ ಹೋಗುತ್ತಿದ್ದವರನ್ನು ಅಡ್ಡಗಟ್ಟಿದ ಮುಸ್ಲಿಂ ಯುವಕರು ಪುಂಡಾಟ ನಡೆಸಿದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದ ಬೆಟ್ಟಳ್ಳಿ ಮಸೀದಿ ಬಳಿ ನಡೆದಿದೆ.

ಕಾರನ್ನು ತಡೆದು ನಿಲ್ಲಿಸಿದ ಪುಂಡರು ಕಾರಿನ ಬಳಿ ಬಂದು ಜೈ ಶ್ರೀರಾಮ್ ಎಂದು ಹೇಳಬೇಕಾ, ಜೈ ಶ್ರೀ ರಾಮ್ ಅಲ್ಲ. ಓನ್ಲೀ ಅಲ್ಲಾಹು ಅಕ್ಬರ್ ಎಂದು ಕೂಗಿದ್ದಾರೆ. ಅಷ್ಟೇ ಅಲ್ಲದೆ ಕಾರಿನಲ್ಲಿ ಇದ್ದವರಿಗೆ ಅವಾಚ್ಯವಾಗಿ ನಿಂದಿಸಿದ್ದು ಅಲ್ಲದೆ ಹಲ್ಲೆ ಕೂಡ ನಡೆಸಿದ್ದಾರೆ.

ಯುವಕರ ಪುಂಡಾಟದಿಂದ ಗರಂ ಆದ ಕಾರಿನಲ್ಲಿದ್ದ ಯುವಕರು ನಿಮ್ಮ ಹಬ್ಬದಲ್ಲಿ ನಾವು ಹೀಗೆ ಮಾಡುತ್ತೀವಾ ಎಂದು ಪ್ರಶ್ನೆ ಮಾಡಿದ್ದಾರೆ. ಆಗ ಅಲ್ಲೆ ಇದ್ದ ಮತ್ತೆ ಇಬ್ಬರು ಸೇರಿಕೊಂಡು ಮೂವರು ಹಿಂದು ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸದ್ಯ ಪುಂಡಾಟ ಮಾಡಿದವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video