ಪೊಲೀಸ್ (ಸಾಂಕೇತಿಕ ಚಿತ್ರ) 
ರಾಜ್ಯ

ನಡುರಾತ್ರಿ ಕಳ್ಳ-ಪೊಲೀಸ್ ಚೇಸಿಂಗ್! ಆಟೋದಿಂದ ASI ಕೆಳಗೆ ತಳ್ಳಿದ ಖದೀಮ!

ನಡುರಾತ್ರಿ ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಕದಿಯುತ್ತಿದ್ದ ಆರೋಪಿಗಳನ್ನು ಸಿನಿಮಾ ಶ್ಯೆಲಿಯಲ್ಲಿ ಬೆನ್ನಟ್ಟಿದ ಎಚ್‌ಎಸ್‌ಆರ್‌ ಲೇಔಟ್‌ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು: ನಡುರಾತ್ರಿ ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಕದಿಯುತ್ತಿದ್ದ ಆರೋಪಿಗಳನ್ನು ಸಿನಿಮಾ ಶ್ಯೆಲಿಯಲ್ಲಿ ಬೆನ್ನಟ್ಟಿದ ಎಚ್‌ಎಸ್‌ಆರ್‌ ಲೇಔಟ್‌ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯಲ್ಲಿ ಎಚ್‌ಎಸ್‌ಆರ್‌ ಲೇಔಟ್‌ ಪೊಲೀಸ್‌ ಠಾಣೆಗೆ ಸೇರಿದ ಎಎಸ್ಐ ಶಂಕರ್‌ ಅವರು ಗಾಯಗೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಅಲ್ಲಾ ಬಕ್ಷ್ (22) ಎಂದು ಗುರ್ತಿಸಲಾಗಿದೆ. ಹೆಚ್‌ಎಸ್‌ಆರ್‌ ಲೇಔಟ್‌ ಸೆಕ್ಟರ್‌ 6ರಲ್ಲಿ ಸೋಮವಾರ ಮಧ್ಯರಾತ್ರಿ 12.30ರಿಂದ 1ರ ನಡುವೆ ಘಟನೆ ನಡೆದಿದೆ.

ಕಟ್ಟಡ ನಿರ್ಮಾಣದ ಸಾಮಗ್ರಿಗಳನ್ನು ಕದ್ದು ಆರೋಪಿ ಆಟೋದಲ್ಲಿ ಪರಾರಿಯಾಗುತ್ತಿದ್ದ. ಇದನ್ನು ಸ್ಥಳದಲ್ಲಿ ಗಸ್ತು ತಿರುಗುತ್ತಿದ್ದ ಎಎಸ್‌ಐ ಎಲ್.ಎಂ.ಶಂಕರ್ (47) ಅವರು ಗಮನಿಸಿದ್ದಾರೆ. ಕೂಡಲೇ ಹತ್ತಿರ ಹೋಗಿ ಪ್ರಶ್ನೆ ಮಾಡಿ ಆಟೋ ಹತ್ತಿದ್ದಾರೆ. ಆದರೆ, ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಆಟೋವನ್ನು ಡಿವೈಡರ್ ಒಂದಕ್ಕೆ ಗುದ್ದಿದ್ದಾನೆ. ಈ ವೇಳೆ ಎಎಸ್ಐ ಶಂಕರ್ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಆದರೂ ಮರಳಿ ಆಟೋ ಹತ್ತುವ ಮೂಲಕ ಆರೋಪಿ ತಪ್ಪಿಸಿಕೊಳ್ಳುವ ಯತ್ನವನ್ನು ವಿಫಲಗೊಳಿಸಿದ್ದಾರೆ. ಬಳಿಕ ತಮ್ಮ ಸಹೋದ್ಯೋಗಿಗಳ ನೆರವಿನೊಂದಿಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!