ಮಳೆ (ಸಾಂದರ್ಭಿಕ ಚಿತ್ರ)
ಮಳೆ (ಸಾಂದರ್ಭಿಕ ಚಿತ್ರ) 
ರಾಜ್ಯ

Karnataka Rains: ಉತ್ತರ ಕರ್ನಾಟಕದಲ್ಲಿ 'ಭಾರಿ ಮಳೆ' ಮುನ್ಸೂಚನೆ; ಬೆಂಗಳೂರಿನ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು?

Srinivasamurthy VN

ಬೆಂಗಳೂರು: ಬಿರು ಬೇಸಿಗೆಯಿಂದ ಬಸವಳಿದಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಕೊನೆಗೂ ಸಿಹಿ ಸುದ್ದಿ ನೀಡಿದ್ದು, ಮುಂದಿನ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಸಂಜೆಯಿಂದಲೇ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರಮುಖವಾಗಿ ಉತ್ತರ ಕರ್ನಾಟಕ ಒಳಭಾಗದಲ್ಲಿ ಮುಂದಿನ ಮೂರು ದಿನಗಳವರೆಗೆ ಎಡೆಬಿಡದೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇಂದು ಕರಾವಳಿ ಜಿಲ್ಲೆಗಳನ್ನ ಹೊರತುಪಡಿಸಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆ ಸೇರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್ 19ರಂದು ಅಂದರೆ ನಾಳೆ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಹಾಸನ, ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು ಜಿಲ್ಲೆಗಳಲ್ಲಿ ಕೂಡಾ ಭಾರೀ ಮಳೆಯಾಗುವ ಸಂಭವ ಇದೆ.

ಬೆಂಗಳೂರಿನಲ್ಲೂ ಮಳೆ ಸಾಧ್ಯತೆ

ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ ಕೊಡಗು, ಮಂಡ್ಯ, ಮೈಸೂರು, ರಾಮನಗರ ತುಮಕೂರು ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆ ಸಾಧ್ಯತೆ ಇದೆ.

ಏಪ್ರಿಲ್ 20 ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಬೀದರ್, ಗದಗ, ಕಲಬುರ್ಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ ಹಾಸನದಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

SCROLL FOR NEXT