ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ 
ರಾಜ್ಯ

Bengaluru Rain: ಬೆಂಗಳೂರಿನಲ್ಲಿ 38.2 ಡಿಗ್ರಿ ಸೆಲ್ಸಿಯಸ್ ತಾಪಮಾನ, ಇಂದು ನಗರದಲ್ಲಿ ಮಳೆ ಸಾಧ್ಯತೆ

Ramyashree GN

ಬೆಂಗಳೂರು: ಬೆಂಗಳೂರು ಗ್ರಾಮಾಂತರದಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಗುರುವಾರ ಗರಿಷ್ಠ 38.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ನಗರದಲ್ಲಿ ಗರಿಷ್ಠ 37.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಶುಕ್ರವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಹೇಳುವಂತೆ ವಿಮಾನ ನಿಲ್ದಾಣದಲ್ಲಿ ಇದುವರೆಗಿನ ಗರಿಷ್ಠ ತಾಪಮಾನ ಇದಾಗಿದ್ದು, ಏಪ್ರಿಲ್ 17 ರಂದು ನಗರದಲ್ಲಿ ಗರಿಷ್ಠ 37.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಏಪ್ರಿಲ್ 8 ರಂದು ಬೆಂಗಳೂರಿನಲ್ಲಿ 37.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಐಎಂಡಿ ಮಾಹಿತಿಯ ಪ್ರಕಾರ, ನಗರದಲ್ಲಿ ಕಳೆದ ವರ್ಷ ಏಪ್ರಿಲ್ 19 ರಂದು ಗರಿಷ್ಠ 36.5 ಡಿಗ್ರಿ ಸೆಲ್ಸಿಯಸ್ ಮತ್ತು 2022ರ ಏಪ್ರಿಲ್ 30 ರಂದು ಗರಿಷ್ಠ 36.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಮಳೆಯಾಗುವ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

SCROLL FOR NEXT