ಮಗಳೊಂದಿಗೆ ನಿರಂಜನ್ ಹಾಗೂ ಸಿದ್ದರಾಮಯ್ಯ 
ರಾಜ್ಯ

ವೈಯಕ್ತಿಕ ಕಾರಣಕ್ಕೆ ನನ್ನ ಮಗಳ ಹತ್ಯೆಯಾಗಿಲ್ಲ, ಮುಖ್ಯಮಂತ್ರಿಗಳೇ.. ನಮ್ಮ ಮರ್ಯಾದೆ ತೆಗಿಬೇಡಿ: ಕಾಂಗ್ರೆಸ್​ ಕಾರ್ಪೊರೇಟರ್​ ನಿರಂಜನ್​

ಕಾಂಗ್ರೆಸ್​ ಕಾರ್ಪೊರೇಟರ್​ ನಿರಂಜನ್​ ಹಿರೇಮಠ ಅವರು, ತಮ್ಮ ಮಗಳ ಕೊಲೆ ಹಿಂದೆ ದೊಡ್ಡ ಗ್ಯಾಂಗ್ ಇದೆ ಎಂದು ಹೇಳಿದ್ದಾರೆ.

ಹುಬ್ಬಳ್ಳಿ: ವೈಯಕ್ತಿಕ ಕಾರಣಕ್ಕೆ ನೇಹಾ ಕೊಲೆ ಆಗಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ನೇಹಾ ತಂದೆ, ಕಾಂಗ್ರೆಸ್​ ಕಾರ್ಪೊರೇಟರ್​ ನಿರಂಜನ್​ ಹಿರೇಮಠ ಅವರು, ತಮ್ಮ ಮಗಳ ಕೊಲೆ ಹಿಂದೆ ದೊಡ್ಡ ಗ್ಯಾಂಗ್ ಇದೆ ಎಂದು ಹೇಳಿದ್ದಾರೆ.

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಕಾರ್ಪೊರೇಟರ್ ಆಗಿರುವ ನಿರಂಜನ್ ಹಿರೇಮಠ ಅವರು, ಸಿಎಂ ಸಿದ್ದರಾಮಯ್ಯ ನಮ್ಮ ಕುಟುಂಬಕ್ಕೆ ಕಳಂಕ ತರುವ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಗಳೇ ನಮ್ಮ ಮರ್ಯಾದೆ ತೆಗಿಬೇಡಿ ಎಂದು ಕಿಡಿ ಕಾರಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ನಿರಂಜನ್ ಹಿರೇಮಠ, ಬಂಧಿತ ಆರೋಪಿ ಫಯಾಜ್ ಕೊಂಡಿಕೊಪ್ಪ ಸೇರಿ ನಾಲ್ವರು ಪ್ರಕರಣದಲ್ಲಿ ಭಾಗಿಯಾಗಿದ್ದು, ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ನಿಮ್ಮ ಮೇಲೆ ರಾಜ್ಯದ ಜನತೆಗೆ ಅಪಾರ ಗೌರವವಿದ್ದು, ಅದಕ್ಕಾಗಿ ಚುನಾವಣೆಯಲ್ಲಿ ಗೆಲ್ಲಿಸಿದ್ದಾರೆ. ಈಗಾಗಲೇ ಒಬ್ಬನನ್ನ ಅರೆಸ್ಟ್ ಮಾಡಿದ್ದೀರಿ. ಈ ಕೊಲೆಯ ಹಿಂದೆ ಇನ್ನೂ ನಾಲ್ಕು ಜನರಿದ್ದು, ಅವರನ್ನು ಬಂಧಿಸುವ ಕೆಲಸ ಆಗಬೇಕು. ಬಂಧಿತನಾಗಿರುವ ಯುವಕನನ್ನು ಎನ್​​ಕೌಂಟರ್ ಮಾಡಬೇಕು ಎಂದು ನಿರಂಜನ್ ಹಿರೇಮಠ ಸರ್ಕಾರವನ್ನು ಆಗ್ರಹಿಸಿದರು.

"ನಾವು ಎಲ್ಲಾ ನಾಲ್ವರ ಹೆಸರುಗಳನ್ನು ಪೊಲೀಸರಿಗೆ ನೀಡಿದ್ದೇವೆ ಮತ್ತು ತನಿಖೆ ನಡೆಸಲಾಗುತ್ತಿದೆ". “ಆ ನಾಲ್ವರು ಹೊರಗಿನವರು. ಈ ಘಟನೆ ಕೇವಲ ಒಂದೇ ದಿನದಲ್ಲಿ ನಡೆದಿದ್ದಲ್ಲ. ಗ್ಯಾಂಗ್ ಬಹಳ ದಿನಗಳಿಂದ ಸಂಚು ರೂಪಿಸಿತ್ತು. ಅವರು ನನ್ನ ಮಗಳನ್ನು ಬಲೆಗೆ ಬೀಳಿಸಲು ಅಥವಾ ಅವಳನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು. ಈ ಹಿನ್ನೆಲೆಯಲ್ಲಿ ಆಕೆಗೆ ಬೆದರಿಕೆ ಹಾಕಿದ್ದಾರೆ. ಆದರೆ, ಅವರ ಬೆದರಿಕೆಗೆ ನನ್ನ ಮಗಳು ಸೊಪ್ಪು ಹಾಕಿರಲಿಲ್ಲ' ಎಂದು ನಿರಂಜನ್ ಹೇಳಿದ್ದಾರೆ.

ಮಾನ್ಯ ಸಿದ್ದರಾಮಯ್ಯನವರೇ ನಿಮ್ಮನ್ನು ಯಾರೋ ದಾರಿ ತಪ್ಪಿಸುತ್ತಿದ್ದಾರೆ. ನಾನು ಕಾಂಗ್ರೆಸ್ ಕಾರ್ಪೊರೇಟರ್. ಇದನ್ನು ನೀವು ಅರ್ಥ ಮಾಡಿಕೊಳ್ಳಬೇಕು. ನನ್ನ ಕುಟುಂಬದ ಬಗ್ಗೆ ನೀವೇ ಹೀಗೆ ಮಾತನಾಡಿದ್ರೆ ಹೇಗೆ? ನಾವು ಕಣ್ಣೀರು ಹಾಕುತ್ತಿದ್ದೇವೆ. ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ನನ್ನ ಕುಟುಂಬದ ಮರ್ಯಾದೆ ತೆಗಿಬೇಡಿ'' ಎಂದು ಮನವಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಆಯೋಗದ ವಿವಾದ: CEC Gyanesh Kumar ಭಾಗಿಯಾಗಬೇಕಿದ್ದ ಯುವಕರೊಂದಿಗಿನ ಕಾರ್ಯಕ್ರಮ ದಿಢೀರ್ ರದ್ದು!

'ಯಾರು ಚಿತ್ರೀಕರಿಸುತ್ತಿದ್ದರು?': ಜಮುಯಿ ದುರಂತಕ್ಕೆ ವಿಪಕ್ಷಗಳೇ ಕಾರಣ-ಬಿಜೆಪಿ ಸಚಿವ

ವಿಶ್ವಸಂಸ್ಥೆ ಸುಧಾರಣೆ ವಿರೋಧಿಸುವವರಿಗೆ ಜಾಗತಿಕ ವೇದಿಕೆ ಬಗ್ಗೆ ಕಾಳಜಿಯಿಲ್ಲ, ಕೇವಲ ಸ್ವಾರ್ಥಕ್ಕೆ ಬಳಕೆ: ಎಸ್. ಜೈಶಂಕರ್ ವಾಗ್ದಾಳಿ

ಬಿಹಾರದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ? ಮಂದಾರ್ ಬೆಟ್ಟದಲ್ಲಿ ಯುವತಿಗೆ ಕಾಮುಕರಿಂದ ಕಿರುಕುಳ; ಒಂದೇ ವಾರದಲ್ಲಿ 3ನೇ ಪ್ರಕರಣ..!

ಸಿಕ್ಕಿಂನಲ್ಲಿ ವರುಣನ ಆರ್ಭಟ: Rimbi ಗ್ರಾಮದಲ್ಲಿ ಭೀಕರ ಭೂಕುಸಿತ; ಹಲವು ಮನೆಗಳು, ಸರ್ಕಾರಿ ವಸತಿ ಗೃಹಗಳು ಧ್ವಂಸ..!