ನೇಹಾ-ಫಯಾಜ್ 
ರಾಜ್ಯ

ನೇಹಾ ಹತ್ಯೆ ಪ್ರಕರಣ: ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ: ಇಜಾರಿ ಘೋಷಣೆ

ಹುಬ್ಬಳ್ಳಿ ಕಾಂಗ್ರೆಸ್‌ ಕಾರ್ಪೊರೇಟರ್ ನಿರಂಜನ್ ಹಿರೇಮಠ ಪುತ್ರಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ ಮುಖಂಡ ಇಜಾರಿ ಘೋಷಣೆ ಮಾಡಿದ್ದಾರೆ.

ಹುಬ್ಬಳ್ಳಿ: ಹುಬ್ಬಳ್ಳಿ ಕಾಂಗ್ರೆಸ್‌ ಕಾರ್ಪೊರೇಟರ್ ನಿರಂಜನ್ ಹಿರೇಮಠ ಪುತ್ರಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ ಮುಖಂಡ ಇಜಾರಿ ಘೋಷಣೆ ಮಾಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆರೋಪಿ ಫಯಾಜ್‌ಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ನಾಳೆ ಹುಬ್ಬಳ್ಳಿ ಬಂದ್ ಮಾಡುತ್ತೇವೆ. ಯಾರ ಮನೆಯಲ್ಲಿ ಹೆಣ್ಮಕ್ಕಳು ಇದ್ದಾರೋ ಅವರೆಲ್ಲಾ ಬಂದ್ ಬೆಂಬಲಿಸಿ ಎಂದು ಇಜಾರಿ ಹೇಳಿದ್ದು ನಾಳೆ ಬಂದ್ ಅಂಗವಾಗಿ ಬಿವಿಬಿ ಕಾಲೇಜಿನಿಂದ ಮೆರವಣಿಗೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

ನೇಹಾ ಹತ್ಯೆ ಖಂಡಿಸಿ ಇಂದು ಎಬಿವಿಪಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಮಾತನಾಡಿದ ಎಬಿವಿಪಿ ಕಾರ್ಯದರ್ಶಿ ಸಚಿನ್, ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪೂರ್ವ ನಿಯೋಜಿತ ಕೃತ್ಯ. ಮೇಲ್ನೋಟಕ್ಕೆ ಇದೊಂದು ಲವ್ ಜಿಹಾದ್ ಪ್ರಕರಣ ಎನಿಸುತ್ತಿದೆ. ಕಾಲೇಜು ಕ್ಯಾಂಪಸ್‌ನೊಳಗೆ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮುಖ್ಯಮಂತ್ರಿಗಳು, ಗೃಹಮಂತ್ರಿ ಅದು ಹೇಗೆ ಆಕಸ್ಮಿಕ ಘಟನೆ ಅಂತಿದಾರೋ ಗೊತ್ತಿಲ್ಲ. ಅವರ ಹೇಳಿಕೆ ನಮಗೆ ಅಚ್ಚರಿ ಮೂಡಿಸಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್