ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿಯಲ್ಲಿ ಬಿರುಗಾಳಿ‌ ಸಹಿತ ಭಾರಿ ಮಳೆ; ಸಿಡಿಲು ಬಡಿದು 12 ವರ್ಷದ ಬಾಲಕ ಸಾವು

Lingaraj Badiger

ಕಲಬುರಗಿ: ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಕಲಬುರಗಿ ಜಿಲ್ಲೆಯಲ್ಲಿ ಶನಿವಾರ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಆಳಂದ ತಾಲೂಕಿನ ನರೋಣಾ ಗ್ರಾಮದಲ್ಲಿ ಸಿಡಿಲು ಬಡಿದು 12 ವರ್ಷದ ಬಾಲಕ ಸಾವನ್ನಪ್ಪಿದ್ದಾರೆ ಮತ್ತು ಆತನ ತಂದೆಗೆ ಗಂಭೀರ ಸುಟ್ಟ ಗಾಯಗಳಾಗಿವೆ.

ಮೃತ ಬಾಲಕನನ್ನು ಮಹೇಶ ತೆಗ್ಗಿನಮನಿ(12) ಎಂದು ಗುರುತಿಸಲಾಗಿದೆ. ಸಿಡಿಲು ಬಡಿದು ತಂದೆ ನಾಗರಾಜ್ ಅವರಿಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಅವರನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿರುಗಾಳಿ ಸಹಿತ ಭಾರಿ ಮಳೆಯಿಂದ ಆಳಂದ ತಾಲೂಕಿನ ಖಜೂರಿ ಗ್ರಾಮದ ಬಳಿ ಲಾರಿಯೊಂದು ಪಲ್ಟಿಯಾಗಿದ್ದು, ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಗುಲ್ಬರ್ಗ ವಿಶ್ವವಿದ್ಯಾನಿಲಯ ಆವರಣದಲ್ಲಿ ಗಾಳಿಯ ರಭಸಕ್ಕೆ ಹಲವು ಮರಗಳ ಕೊಂಬೆಗಳು ನೆಲಕ್ಕುರುಳಿವೆ.

ಮಳೆ ಗಾಳಿಯಿಂದಾಗಿ ಇಡೀ ಕಲಬುರಗಿ ನಗರದಲ್ಲಿ ಇಂದು ಮಧ್ಯಾಹ್ನ 1 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಾಲ್ಕು ಗಂಟೆಗಳ ಕಾಲ ವಿದ್ಯುತ್ ಇರಲಿಲ್ಲ.

ವರದಿಗಳ ಪ್ರಕಾರ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ಸಹ ಶನಿವಾರ ಕೆಲವು ಗಂಟೆಗಳ ಕಾಲ ಭಾರಿ ಮಳೆಯಾಗಿದೆ.

SCROLL FOR NEXT