ಆರ್‌ಸಿಬಿ 
ರಾಜ್ಯ

ಗೋ ಗ್ರೀನ್ ಅಭಿಯಾನ: ನಗರದ ಕೆರೆಗಳಿಗೆ ಮರುಜೀವ ನೀಡಿ, ಕನ್ನಡಿಗರ ಮನಗೆದ್ದ RCB!

ಐಪಿಎಲ್ ಆಟದಲ್ಲಿ ಮುಗ್ಗರಿಸಿದ್ದರೂ ಸಾಮಾಜಿಕ ಕಾರ್ಯಗಳ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಕನ್ನಡಿಗರ ಮನಗೆದ್ದಿದೆ.

ಬೆಂಗಳೂರು: ಐಪಿಎಲ್ ಆಟದಲ್ಲಿ ಮುಗ್ಗರಿಸಿದ್ದರೂ ಸಾಮಾಜಿಕ ಕಾರ್ಯಗಳ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಕನ್ನಡಿಗರ ಮನಗೆದ್ದಿದೆ.

ಬೆಂಗಳೂರಿನ ಎರಡು ಪ್ರಮುಖ ಕೆರೆಗಳ ಪುನರುಜ್ಜೀವನ ಕಾರ್ಯವನ್ನು ಆರ್‌ಸಿಬಿ ಪೂರ್ಣಗೊಳಿಸಿದೆ. ಈ ಕೆರೆಗಳ ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸಿದೆ ಮತ್ತು ಮೂರನೇ ಕೆರೆಯಲ್ಲಿ ನಾಗರಿಕ ಸೌಲಭ್ಯಗಳನ್ನು ಹೆಚ್ಚಿಸಿದೆ. ಇಂಡಿಯಾ ಕೇರ್ಸ್‌ ಫೌಂಡೇಶನ್‌ ಈ ಕುರಿತು ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇಟ್ಟಗಲ್ಪುರ ಕೆರೆ ಮತ್ತು ಸಾದೇನಹಳ್ಳಿ ಕೆರೆಯ ಹೂಳೆತ್ತುವ ಮತ್ತು ಅಭಿವೃದ್ಧಿಪಡಿಸುವತ್ತ ಗಮನ ಹರಿಸಿ ಆರ್‌ಸಿಬಿ 2023ರ ಅಕ್ಟೋಬರ್‌ನಲ್ಲಿ ಇಎಸ್‌ಜಿ ಬದ್ಧತೆಯ ಭಾಗವಾಗಿ ಕೆರೆಗಳ ಸುಧಾರಣಾ ಕಾರ್ಯ ಯೋಜನೆಯನ್ನು ಕೈಗೆತ್ತಿಕೊಂಡಿತ್ತು.

1000 ರಿಂದ 1500 ಅಡಿಗಳವರೆಗಿನ ಬೋರ್‌ವೆಲ್‌ ಆಳವನ್ನು ಹೊಂದಿರುವ ಈ ಕೆರೆಗಳನ್ನು ಹೆಚ್ಚು ನೀರಿನ ಒತ್ತಡದ ಪ್ರದೇಶಗಳಾಗಿ ಆಯ್ಕೆ ಮಾಡಲಾಗಿದೆ. ಈ ಪ್ರದೇಶಗಳು ಕಾವೇರಿ ನದಿಯ ನೀರಿನ ಲಭ್ಯತೆಯನ್ನು ಹೊಂದಿಲ್ಲ ಮತ್ತು ಸಂಪೂರ್ಣವಾಗಿ ಅಂತರ್ಜಲ ಮತ್ತು ಮೇಲ್ಮೈ ನೀರಿನ ಮೇಲೆ ಅವಲಂಬಿತವಾಗಿವೆ.

ವರದಿಯ ಪ್ರಕಾರ, ಇಟ್ಟಗಲ್ಪುರ ಕೆರೆ ಮತ್ತು ಸಾದೇನಹಳ್ಳಿ ಕೆರೆಯಲ್ಲಿ 1.20 ಲಕ್ಷ ಟನ್‌ ಹೂಳು ಮತ್ತು ಮರಳನ್ನು ತೆಗೆಯಲಾಗಿದ್ದು, ಇದನ್ನು ಕೆರೆಗಳಿಗೆ ಅಡ್ಡಲಾಗಿ ಕಟ್ಟೆಗಳು ಮತ್ತು ಮಾರ್ಗಗಳನ್ನು ನಿರ್ಮಿಸಲು ಬಳಸಲಾಗಿದೆ ಮತ್ತು 52 ರೈತರು ಮಣ್ಣನ್ನು ತಮ್ಮ ಹೊಲಗಳಿಗೆ ಮೇಲ್ಮಣ್ಣು ಆಗಿ ಬಳಸಿದ್ದಾರೆ. ಇದರಿಂದಾಗಿ ಈ ಕೆರೆಗಳ ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ 17 ಎಕರೆಗಳಷ್ಟು ಹೆಚ್ಚಾಗಿದೆ.

ಏತನ್ಮಧ್ಯೆ, ಜೀವವೈವಿಧ್ಯವನ್ನು ಸುಧಾರಿಸುವ ಉದ್ದೇಶದಿಂದ ಕಣ್ಣೂರು ಕೆರೆಯ ಸುತ್ತಲೂ ಔಷಧೀಯ ಸಸ್ಯಗಳ ಉದ್ಯಾನವನ, ಬಿದಿರಿನ ಉದ್ಯಾನವನ ಮತ್ತು ಚಿಟ್ಟೆ ಪಾರ್ಕ್‌ಗಳನ್ನು ನಿರ್ಮಿಸಲಾಗಿದೆ. ಆರ್​ಸಿಬಿಯ ಈ ಕೆಲಸಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT