ರೌಡಿ ಶೀಟರ್ ಕುಣಿಗಲ್ ಗಿರಿ ಹತ್ಯೆಗೆ ಸುಪಾರಿ: ಇಬ್ಬರ ಬಂಧನ
ಕುಖ್ಯಾತ ರೌಡಿ ಶೀಟರ್ ಕುಣಿಗಲ್ ಗಿರಿ ಕೊಲೆಗೆ ಸುಪಾರಿ ಪಡೆದಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಕುಖ್ಯಾತ ರೌಡಿ ಶೀಟರ್ ಕುಣಿಗಲ್ ಗಿರಿ ಕೊಲೆಗೆ ಸುಪಾರಿ ಪಡೆದಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯದ ರೌಡಿ ಶೀಟರ್ ಕುಣಿಗಲ್ ಗಿರಿ ಕೊಲೆಗೆ ಜೈಲಿನಿಂದಲೇ ಸ್ಕೆಚ್ ಹಾಕಿದ್ದು, ರಾಬರಿ ಕಿಟ್ಟಿಯಿಂದ ಸುಪಾರಿ ಪಡೆದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಸಿಲಿಂಡರ್ ಸುನಿಲ ಹಾಗೂ ಅವಿನಾಶ್ ಬಂಧಿತ ರೌಡಿಗಳು.
ರೌಡಿ ಕುಣಿಗಲ್ ಗಿರಿ ಬಂಧನ
ಸೂರಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ರಾಬರಿ ಕಿಟ್ಟಿ, ಕುಣಿಗಲ್ ಗಿರಿಯನ್ನು ಮುಗಿಸಬೇಕೆಂದು ತನ್ನ ಶಿಷ್ಯನಾದ ಸಿಲಿಂಡರ್ ಸುನಿಲನಿಗೆ ಸುಪಾರಿ ನೀಡಿದ್ದ. ಈ ಸಿಲಿಂಡರ್ ಸುನಿಲ ಕೆಂಗೇರಿ ಠಾಣೆಯ ರೌಡಿಶೀಟರ್ ಆಗಿದ್ದಾನೆ.
ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಆರೋಪಿಗಳನ್ನು ಸಿಸಿಬಿ ಬಂಧಿಸಿದೆ. ಪರಾರಿಯಾಗಿರುವ ಮತ್ತಿಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.