ಅಕ್ರಮವಾಗಿ ಗೋವು ಸಾಗಾಟ 
ರಾಜ್ಯ

ಬೆಳಗಾವಿ: ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಚಾಲಕನಿಗೆ ಹಿಂದೂ ಕಾರ್ಯಕರ್ತರಿಂದ ಹಿಗ್ಗಾಮುಗ್ಗ ಥಳಿತ!

ಬೆಳಗಾವಿಯ ಸುವರ್ಣಸೌಧದ ಮುಂಭಾಗದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಲಾರಿ ಚಾಲಕನಿಗೆ 50ಕ್ಕೂ ಹೆಚ್ಚು ಹಿಂದೂಪರ ಕಾರ್ಯಕರ್ತರು ಥಳಿಸಿದ್ದಾರೆ.

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಮುಂಭಾಗದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಲಾರಿ ಚಾಲಕನಿಗೆ 50ಕ್ಕೂ ಹೆಚ್ಚು ಹಿಂದೂಪರ ಕಾರ್ಯಕರ್ತರು ಥಳಿಸಿದ್ದಾರೆ.

ಮಹಾರಾಷ್ಟ್ರದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಲಾರಿಯನ್ನು ಹೆದ್ದಾರಿಯಲ್ಲಿ ತಡೆದ ಹಿಂದೂ ಕಾರ್ಯಕರ್ತರು ಚಾಲಕನನ್ನು ಲಾರಿಯಿಂದ ಹೊರಗೆಳೆದು ತೀವ್ರವಾಗಿ ಥಳಿಸಿದ್ದಾರೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಕಾಸರಗೋಡು ಮೂಲದ ಲಾರಿ ಚಾಲಕ ಉಮರ್ ಮೋಯಿದ್ದೀನ್ ನನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ದೌಡಾಯಿಸಿದ ಡಿಸಿಪಿ ರೋಹನ್ ಜಗದೀಶ್ ಪರಿಶೀಲನೆ ನಡೆಸಿದ್ದು ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳುತ್ತೇವೆ. ಸಂಜೆ ಗೋವುಗಳನ್ನು ಸಾಗಿಸುತ್ತಿದ್ದ ವಾಹನ ತಡೆದ ಹಿಂದೂ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಚಾಲಕ ಹಾಗೂ ಕ್ಲೀನರ್ ಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರೋಹನ್ ಜಗದೀಶ್ ಹೇಳಿದ್ದಾರೆ.

ಅಕ್ರಮವಾಗಿ ಗೋವು ಸಾಗಿಸುತ್ತಿದ್ದರೆ ಅವರ ವಿರುದ್ಧ ಪ್ರಕರಣ ದಾಖಲಾಗಿಸಲಾಗುತ್ತದೆ. ಹಲ್ಲೆ ಮಾಡಿದವರ ಮೇಲೆಯೂ ಕೇಸ್ ದಾಖಲಿಸಿ ತನಿಖೆ ಮಾಡುತ್ತೇವೆ ಎಂದು ರೋಹನ್ ಜಗದೀಶ್ ತಿಳಿಸಿದ್ದಾರೆ. ಸದ್ಯ ಲಾರಿಯಲ್ಲಿದ್ದ 28 ಗೋವುಗಳನ್ನು ಕಮಕಾರಟ್ಟಿಯಲ್ಲಿರುವ ಮಹಾವೀರ ಗೋ ಶಾಲೆಗೆ ಶಿಫ್ಟ್ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ