ಸಾಂದರ್ಭಿಕ ಚಿತ್ರ 
ರಾಜ್ಯ

T20 World Cup: ಐರ್ಲೆಂಡ್, ಸ್ಕಾಟ್ಲೆಂಡ್ ಕ್ರಿಕೆಟ್ ತಂಡಗಳಿಗೆ ಕೆಎಂಎಫ್ ಪ್ರಾಯೋಜಕತ್ವ: ಪರ-ವಿರೋಧ ಚರ್ಚೆ

ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಹಕಾರ ಹಾಲು ಉತ್ಪಾದರಕ ಮಹಾಮಂಡಳ (ಕೆಎಂಎಫ್) 2024ರ ಟಿ20 ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ಪ್ರಾಯೋಜಕತ್ವ ನೀಡಲು ತೀರ್ಮಾನಿಸಿದ್ದು, ಕೆಎಂಎಫ್‌ನ ಈ ನಡೆ ವಿರುದ್ಧ ಟೀಕೆ ವ್ಯಕ್ತವಾಗಿದೆ.

ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಹಕಾರ ಹಾಲು ಉತ್ಪಾದರಕ ಮಹಾಮಂಡಳ (ಕೆಎಂಎಫ್) 2024ರ ಟಿ20 ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ಪ್ರಾಯೋಜಕತ್ವ ನೀಡಲು ತೀರ್ಮಾನಿಸಿದ್ದು, ಕೆಎಂಎಫ್‌ನ ಈ ನಡೆ ವಿರುದ್ಧ ಟೀಕೆ ವ್ಯಕ್ತವಾಗಿದೆ.

'ಹೌದು, ನಾವು ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ಪ್ರಾಯೋಜಕತ್ವ ನೀಡುತ್ತಿದ್ದೇವೆ. ಅವರು ಪಂದ್ಯಗಳ ಸಮಯದಲ್ಲಿ ನಮ್ಮ ಬ್ರ್ಯಾಂಡ್ ಅನ್ನು ಪ್ರದರ್ಶಿಸಲಿದ್ದಾರೆ' ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂಕೆ ಜಗದೀಶ್ ಭಾನುವಾರ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.'ನಂದಿನಿಯನ್ನು ಜಾಗತಿಕ ಬ್ರಾಂಡ್ ಮಾಡಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಮಧ್ಯಪ್ರಾಚ್ಯದಲ್ಲಿ ಈಗಾಗಲೇ ನಮ್ಮ ಮಳಿಗೆಗಳಿವೆ. ನಮ್ಮ ಉಪಸ್ಥಿತಿಯು ಸಿಂಗಾಪುರದಲ್ಲೂ ಇದೆ. ನಾವು ನಮ್ಮ ಸಿಹಿತಿಂಡಿಗಳನ್ನು ಅಮೆರಿಕದಲ್ಲಿ ಕೂಡ ಮಾರಾಟ ಮಾಡುತ್ತಿದ್ದೇವೆ' ಎಂದು ಜಗದೀಶ್ ವಿವರಿಸಿದರು.

ಇನ್ಫೋಸಿಸ್‌ನ ಮಾಜಿ ಮುಖ್ಯ ಹಣಕಾಸು ಅಧಿಕಾರಿ ಟಿವಿ ಮೋಹನ್‌ದಾಸ್ ಪೈ ಕೆಎಂಎಫ್‌ನ ಈ ಕ್ರಮವನ್ನು ಟೀಕಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, 'ಎಂತಹ ದೊಡ್ಡ ಅವಮಾನ! ಅವರು ಕರ್ನಾಟಕದ ರೈತರಿಗೆ ಸೇರಿದ, ಕನ್ನಡಿಗರಾದ ಗ್ರಾಹಕರು ಪಾವತಿಸುವ ಹಣವನ್ನು ವಿದೇಶಿ ತಂಡಗಳಿಗೆ ಪ್ರಾಯೋಜಿಸಲು ಏಕೆ ಬಳಸುತ್ತಿದ್ದಾರೆ? ಅದು ಯಾವ ಮೌಲ್ಯವನ್ನು ನೀಡುತ್ತದೆ? ಬಡ ರೈತರಿಗೆ ಪಾವತಿಸುವುದು ಉತ್ತಮ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರೇ ಇದು ಕರ್ನಾಟಕ ಮೂಲದ ಸಹಕಾರ ಒಕ್ಕೂಟಕ್ಕೆ ಆಗುವ ವ್ಯರ್ಥ ನಡೆ!' ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಜಗದೀಶ್, 'ನಮ್ಮ ಆದಾಯದ ಶೇ 85 ರಷ್ಟು ರೈತರಿಗೆ ಹೋಗುತ್ತದೆ. ಉಳಿದಿದ್ದನ್ನು ನಮ್ಮ ಉತ್ಪನ್ನದ ಪ್ರಚಾರಕ್ಕಾಗಿ ಪ್ರಾಯೋಜಿಸುತ್ತಿದ್ದೇವೆ. ನಾವು ಜಾಗತಿಕವಾಗಿ ಹೋಗಬೇಕಾಗಿದೆ' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT