ತುಷಾರ್ ಗಿರಿನಾಥ್  
ರಾಜ್ಯ

ಮತಗಟ್ಟೆಗಳಲ್ಲಿ ಜಾಗರೂಕತೆಯಿಂದ ಕಾರ್ಯನಿರ್ವಹಿಸಿ; Micro observer ಗಳಿಗೆ ತುಷಾರ್ ಗಿರಿನಾಥ್ ಸೂಚನೆ

ಲೋಕಸಭಾ ಚುನಾವಣೆ ವೇಳೆ ಮತಗಟ್ಟೆಗಳಲ್ಲಿ ಜಾಗರೂಕತೆಯಿಂದ ಕಾರ್ಯನಿರ್ವಹಿಸಿ ಎಂದು ಮೈಕ್ರೋ ಅಬ್ಸರ್ವರ್ಸ್'ಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶನಿವಾರ ಸೂಚನೆ ನೀಡಿದರು.

ಬೆಂಗಳೂರು: ಲೋಕಸಭಾ ಚುನಾವಣೆ ವೇಳೆ ಮತಗಟ್ಟೆಗಳಲ್ಲಿ ಜಾಗರೂಕತೆಯಿಂದ ಕಾರ್ಯನಿರ್ವಹಿಸಿ ಎಂದು ಮೈಕ್ರೋ ಅಬ್ಸರ್ವರ್ಸ್'ಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶನಿವಾರ ಸೂಚನೆ ನೀಡಿದರು.

ಲೋಕಸಭಾ ಚುನಾವಣೆ-2024ರ ಸಂಬಂಧ ನಿಯಮಾನುಸಾರ ಮೈಕ್ರೋ ಅಬ್ಸರ್ವರ್ಸ್ (Micro observer) ಗಳಿಗೆ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದಲ್ಲಿ ಶನಿವಾರ ತರಬೇತಿ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಹಾಜರಿದ್ದ ತುಷಾರ್ ಗಿರಿನಾತ್ ಅವರು ಅಗತ್ಯ ಮಾಹಿತಿಯನ್ನು ನೀಡಿದರು.

ಮತದಾನದ ದಿನದಂದು ಎಲ್ಲಾ ಮೈಕ್ರೋ ಅಬ್ಸರ್ವರ್ಸ್'ಗಳು ತಮಗೆ ನಿಯೋಜಿಸಲಾದ ಮತಗಟ್ಟೆಗಳ ಮೇಲೆ ನಿಗಾ ಇಡಬೇಕು. ಮತಗಟ್ಟೆಗಳಲ್ಲಿ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕೆಂದು ಹೇಳಿದರು.

ನಗರದ ಮೂರು ಲೋಕಸಭಾ ಕ್ಷೇತ್ರಗಳ 24 ವಿಧಾನಸಭಾ ಕ್ಷೇತ್ರಗಳು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಒಂದು ವಿಧಾನಸಭಾ ಕ್ಷೇತ್ರ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೂರು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಒಟ್ಟು 28 ವಿಧಾನಸಭಾ ಕ್ಷೇತ್ರಗಳಲ್ಲಿ 305 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಇದಕ್ಕಾಗಿ 365 ಮೈಕ್ರೋ ಅಬ್ಸರ್ವರ್‌ಗಳನ್ನು ನಿಯೋಜಿಸಲಾಗುತ್ತಿದೆ. ಜೊತೆಗೆ ವೀಡಿಯೊ ಮತ್ತು ವೆಬ್ ಕಾಸ್ಟಿಂಗ್ ಅನ್ನು ಸಹ ಮಾಡಲಾಗುತ್ತಿದೆ. ಮೈಕ್ರೋ ಅಬ್ಸರ್ವರ್ಸ್'ಗಳು ಮತಗಟ್ಟೆಗಳ ಬಳಿ ನಡೆಯುವ ಪ್ರಕ್ರಿಯೆಗಳ ಮೇಲೆ ನಿಗಾವಹಿಸಬೇಕು. ಮತದಾನದ ನಂತರ ಆ ಮತಗಟ್ಟೆಯಲ್ಲಿ ನಡೆದ ಚಟುವಟಿಕೆಗಳ ಬಗ್ಗೆ ವರದಿ ನೀಡಬೇಕು ಎಂದು ಸೂಚನೆ ನೀಡಿದರು.

ಬೆಂಗಳೂರು ದಕ್ಷಿಣದ ಜನರಲ್ ಅಬ್ಸರ್ವರ್ ಮಕರಂದ್ ಪಾಂಡುರಂಗ್ ಮಾತನಾಡಿ, ಮತದಾನದ ದಿನದಂದು ಮೈಕ್ರೋ ಅಬ್ಸರ್ವರ್‌ಗಳ ಪಾತ್ರ ಪ್ರಮುಖ ಪಾತ್ರ ವಹಿಸಲಿದೆ. ಬೆಳಿಗ್ಗೆ ಅಣಕು ಮತದಾನ ಪ್ರಕ್ರಿಯೆಯಿಂದ ಸಂಜೆ ಮತದಾನ ಪ್ರಕ್ರಿಯೆ ಮುಗಿಯುವವರೆಗೆ ಮತಗಟ್ಟೆಗಳಲ್ಲಿನ ಚಲನವಲನಗಳ ಮೇಲೆ ನಿಗಾ ವಹಿಸಬೇಕು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT