ನಿರಂಜನ್ ಹಿರೇಮಠ್ ಅವರಿಗೆ ಸಾಂತ್ವನ ಹೇಳಿದ ಜೆಪಿ ನಡ್ಡಾ 
ರಾಜ್ಯ

ನೇಹಾ ಹಿರೇಮಠ್ ಹತ್ಯೆ: ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಬೇಕು- ಜೆಪಿ ನಡ್ಡಾ

ಗುರುವಾರ ಪ್ರತಿಷ್ಠಿತ ಬಿವಿಬಿ ಕಾಲೇಜ್ ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಭಾನುವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ನೇಹಾ ಹಿರೇಮಠ್ ಅವರ ತಂದೆ ಕಾಂಗ್ರೆಸ್ ಕೌನ್ಸಿಲರ್ ನಿರಂಜನ ಹಿರೇಮಠ ಅವರಿಗೆ ಸಾಂತ್ವನ ಹೇಳಿದರು.

ಹುಬ್ಬಳ್ಳಿ: ಗುರುವಾರ ಪ್ರತಿಷ್ಠಿತ ಬಿವಿಬಿ ಕಾಲೇಜ್ ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಭಾನುವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ನೇಹಾ ಹಿರೇಮಠ್ ಅವರ ತಂದೆ ಕಾಂಗ್ರೆಸ್ ಕೌನ್ಸಿಲರ್ ನಿರಂಜನ ಹಿರೇಮಠ ಅವರಿಗೆ ಸಾಂತ್ವನ ಹೇಳಿದರು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಪಿ ನಡ್ಡಾ, "ಇದೊಂದು ಆಘಾತಕಾರಿ ಘಟನೆಯಾಗಿದ್ದು, ನಾವು ಖಂಡಿಸುತ್ತೇವೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ ಪರಮೇಶ್ವರ ಅವರ ಹೇಳಿಕೆಗಳು ಆಕ್ಷೇಪಾರ್ಹವಾಗಿವೆ. ಅವರ ಹೇಳಿಕೆಗಳು ತನಿಖೆಯನ್ನು ದುರ್ಬಲಗೊಳಿಸುತ್ತವೆ. ತುಷ್ಟೀಕರಣ ರಾಜಕಾರಣಕ್ಕೆ ಪ್ರಸ್ತುತ ಸರ್ಕಾರವನ್ನು ರಾಜ್ಯದ ಜನರು ಬಿಡುವುದಿಲ್ಲ ಎಂದರು.

ನಿರಂಜನ್ ಹಿರೇಮಠ್ ಅವರಿಗೆ ರಾಜ್ಯ ಪೊಲೀಸರ ಮೇಲಿನ ನಂಬಿಕೆ ಕಡಿಮೆಯಾಗಿದ್ದು, ರಾಜ್ಯ ಪೊಲೀಸರು ತನಿಖೆ ನಡೆಸಲು ಅಸಮರ್ಥರಾಗಿದ್ದರೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಜೆ.ಪಿ. ನಡ್ಡಾ ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video