ಸಂಗ್ರಹ ಚಿತ್ರ 
ರಾಜ್ಯ

ಕಾರವಾರ: ಕಾಳಿ ನದಿಗೆ ಬಿದ್ದ ಮಗುವನ್ನು ರಕ್ಷಿಸಲು ಹೋಗಿ ಅಹ್ಮದ್ ಕುಟುಂಬದ 6 ಮಂದಿ ದುರ್ಮರಣ

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಕಾಳಿ ನದಿಯಲ್ಲಿ ಒಂದೇ ಕುಟುಂಬದ ಆರು ಪ್ರವಾಸಿಗರು ಮುಳುಗಿ ಸಾವನ್ನಪ್ಪಿರುವಂತಹ ದಾರುಣ ಘಟನೆ ಸಂಭವಿಸಿದೆ.

ಕಾರವಾರ(ಉತ್ತರ ಕನ್ನಡ): ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಕಾಳಿ ನದಿಯಲ್ಲಿ ಒಂದೇ ಕುಟುಂಬದ ಆರು ಪ್ರವಾಸಿಗರು ಮುಳುಗಿ ಸಾವನ್ನಪ್ಪಿರುವಂತಹ ದಾರುಣ ಘಟನೆ ಸಂಭವಿಸಿದೆ.

ಮೃತರನ್ನು 40 ವರ್ಷದ ನಜೀರ್ ಅಹ್ಮದ್, 38 ವರ್ಷದ ರೇಷಾ ಉನ್ನಿಸಾ, 15 ವರ್ಷದ ಇಫ್ರಾ‌ ಅಹ್ಮದ್, 12 ವರ್ಷದ ಅಬೀದ್ ಅಹ್ಮದ್, 10 ವರ್ಷದ ಅಲ್ಛೀಯಾ ಅಹ್ಮದ್ ಮತ್ತು 6 ವರ್ಷದ ಮೋಹಿನ್ ಎಂದು ಗುರುತಿಸಲಾಗಿದೆ.

ಪ್ರವಾಸಕ್ಕೆ ತೆರಳಿದ್ದಾಗ ಅಹ್ಮದ್ ಕುಟುಂಬ ಊಟ ಮಾಡಿ ಕಾಳಿ ನದಿ ದಡದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಚಿಕ್ಕ ಮಗುವೊಂದು ಆಕಸ್ಮಿಕವಾಗಿ ನೀರಿಗೆ ಬಿದ್ದಿದೆ. ಆಗ ಮಗುವನ್ನು ರಕ್ಷಿಸಲು ಒಬ್ಬರ ಹಿಂದೆ ಒಬ್ಬರು ಹೋಗಿ 6 ಜನರು ಮೃತಪಟ್ಟಿದ್ದಾರೆ. ಮೃತರನ್ನು ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳು ಎಂದು ಗುರುತಿಸಲಾಗಿದೆ.

ಪ್ರವಾಸಕ್ಕೆಂದು ಒಟ್ಟು 8 ಮಂದಿ ತಂಡ ತೆರಳಿತ್ತು. ಆ ಪೈಕಿ ಇಬ್ಬರು ಮಹಿಳೆಯರು ನೀರಿಗೆ ಇಳಿದಿರಲಿಲ್ಲ ಎನ್ನಲಾಗುತ್ತಿದೆ. ಸದ್ಯ ಕಾಳಿ ನದಿಯಿಂದ ಆರು ಮೃತದೇಹಗಳನ್ನು ಹೊರತೆಗೆಯಲಾಗಿದೆ. ದಾಂಡೇಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video