ಬೆಂಗಳೂರು ಪೊಲೀಸ್ ಆಯುಕ್ತರ ಸುದ್ದಿಗೋಷ್ಠಿ
ಬೆಂಗಳೂರು ಪೊಲೀಸ್ ಆಯುಕ್ತರ ಸುದ್ದಿಗೋಷ್ಠಿ 
ರಾಜ್ಯ

Rowdy Sheeter Arrest: ಸುಲಿಗೆ, ದರೋಡೆ ಸಹಿತ 42 ಪ್ರಕರಣದಲ್ಲಿ ಬೇಕಾಗಿದ್ದ ರೌಡಿ ಶೀಟರ್‌ 'ಅಜೀಜ್ ಆಸೀಫ್' ಬಂಧನ

Srinivasamurthy VN

ಬೆಂಗಳೂರು: ಮಹತ್ವದ ಕಾರ್ಯಾಚರಣೆಯಲ್ಲಿ ಸುಲಿಗೆ, ದರೋಡೆ ಸಹಿತ 42 ಪ್ರಕರಣಗಳಲ್ಲಿ ಬೇಕಾಗಿದ್ದ ನಟೋರಿಯಸ್ ರೌಡಿ ಶೀಟರ್ ಓರ್ವನನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಸುಲಿಗೆ, ಕಳ್ಳತನ ಸೇರಿದಂತೆ 42 ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಬಾಣಸವಾಡಿ ಪೊಲೀಸ್ ಠಾಣೆಯ ರೌಡಿಶೀಟರ್ 'ಅಜೀಜ್ ಆಸೀಫ್' ನನ್ನು ಮಂಗಳವಾರ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

2015ರಿಂದ ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 36, ತುಮಕೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 07 ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಆರೋಪಿ ಆಸೀಫ್ ವಿರುದ್ಧ 2 ಪ್ರಕರಣಗಳು ದಾಖಲಾಗಿದ್ದವು. ಕರ್ನಾಟಕ ಮಾತ್ರವಲ್ಲದೇ ಈತನ ವಿರುದ್ಧ ಗೋವಾ ರಾಜ್ಯದಲ್ಲಿಯೂ ಪ್ರಕರಣಗಳು ದಾಖಲಾಗಿದ್ದವು. ಇದೀಗ ಕೊನೆಗೂ ರೌಡಿಶೀಟರ್ 'ಅಜೀಜ್ ಆಸೀಫ್' ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದು, ಆತನನ್ನು ತೀವ್ರ ವಿಚಾರಣೆ ಮಾಡಲಾಗುತ್ತಿದೆ.

ಬಂಧಿತನ ಬಳಿ ವಿವಿಧ ಕಂಪನಿಯ ಒಟ್ಟು 12 ಮೊಬೈಲ್ ಪೋನ್‌ಗಳು, 4 ಚಿನ್ನದ ಕಾಸಿನ ತಾಳಿಗಳು, 1 ಮಾಂಗಲ್ಯ 2 ಚಿನ್ನದ ಗುಂಡುಗಳು, ಕೊಳವೆ ಆಕಾರದ ಗುಂಡುಗಳಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ವಿರುದ್ಧ ಬಾಕಿ ಇರುವ ಜಾಮೀನು ರಹಿತ ವಾರಂಟ್​​ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸಿರುವುದಾಗಿ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ತಿಳಿಸಿದ್ದಾರೆ.

ಹತ್ತಾರು ಪ್ರಕರಣಗಳು?

ಭಾರತಿನಗರ ಹಾಗೂ ಯಲಹಂಕ ಪೊಲೀಸ್ ಠಾಣೆಯಲ್ಲಿ ತಲಾ 1 ಕಳವು ಪ್ರಕರಣ ಮತ್ತು ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ 2 ರಾಬರಿ ಪ್ರಕರಣ, ತುಮಕೂರು ಜಿಲ್ಲೆಯ ತಿಲಕ್‌ನಗರ ಪೊಲೀಸ್ ಠಾಣೆಯಲ್ಲಿ 1 ದ್ವಿ-ಚಕ್ರ ವಾಹನ ಕಳವು ಪ್ರಕರಣ ಮತ್ತು ತುಮಕೂರು ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ 2 ರಾಬರಿ ಪ್ರಕರಣಗಳು ಪ್ರಸ್ತುತ ತನಿಖಾ ಹಂತದಲ್ಲಿದ್ದವು.

ಆದರೂ ಸಹ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿ ವಿರುದ್ಧ ಜಾಮೀನು ರಹಿತ ವಾರಂಟ್​ ಜಾರಿಯಾಗಿತ್ತು. ಆರೋಪಿಯ ಕುರಿತು ಮಾಹಿತಿ ಸಂಗ್ರಹಿಸಿದ್ದ ಸಿಸಿಬಿ ಪೊಲೀಸರು ಭಾರತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ಮ್ ಸ್ಟ್ರಾಂಗ್​ ರಸ್ತೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

SCROLL FOR NEXT