ದ್ರೌಪದಮ್ಮ ಕರಗ ಮಹೋತ್ಸವ (ಸಾಂದರ್ಭಿಕ ಚಿತ್ರ) 
ರಾಜ್ಯ

ಬೆಂಗಳೂರಿನಲ್ಲಿಂದು ಐತಿಹಾಸಿಕ ಕರಗ ಮಹೋತ್ಸವ: ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ!

ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ ಸಂಭ್ರಮ ಆರಂಭವಾಗಿದ್ದು, ಮಂಗಳವಾರ ಐತಿಹಾಸಿಕ ಕರಗ ಶಕ್ತ್ಯೋತ್ಸವ ನಡೆಯಲಿದೆ. ಎ. ಜ್ಞಾನೇಂದ್ರ ಅವರು 14ನೇ ಬಾರಿ ಬೆಂಗಳೂರು ಕರಗ ಹೊರಲಿದ್ದಾರೆ. ಈ ಸಂಭ್ರಮದ ದಿನ ಭಾರಿ ಜನ ಸೇರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಗರದ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ ಸಂಭ್ರಮ ಆರಂಭವಾಗಿದ್ದು, ಮಂಗಳವಾರ ಐತಿಹಾಸಿಕ ಕರಗ ಶಕ್ತ್ಯೋತ್ಸವ ನಡೆಯಲಿದೆ. ಎ. ಜ್ಞಾನೇಂದ್ರ ಅವರು 14ನೇ ಬಾರಿ ಬೆಂಗಳೂರು ಕರಗ ಹೊರಲಿದ್ದಾರೆ. ಈ ಸಂಭ್ರಮದ ದಿನ ಭಾರಿ ಜನ ಸೇರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಗರದ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಏಪ್ರಿಲ್ 23 ರ ಬೆಳಗ್ಗೆ 6 ಗಂಟೆಯಿಂದ ಏಪ್ರಿಲ್ 24 ಬೆಳಗ್ಗೆ 10 ಗಂಟೆಯವರೆಗೆ ಬೆಂಗಳೂರು ನಗರದ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಪೊಲೀಸ್ ಆಯುಕ್ತ ದಯಾನಂದ ಆದೇಶ ನೀಡಿದ್ದಾರೆ.

ಸಿಟಿ ಮಾರ್ಕೆಟ್, ಕಲಾಸಿಪಾಳ್ಯಂ, ಕಾಟನ್‌ಪೇಟೆ ಮತ್ತು ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ನಿರ್ಬಂಧ ಜಾರಿಯಲ್ಲಿರಲಿದೆ.

ಬಾರ್‌ಗಳು, ವೈನ್ ಸ್ಟೋರ್‌ಗಳು, ಪಬ್‌ಗಳು ಮತ್ತು ಮದ್ಯ ಮಾರಾಟ ಮಾಡುವ ಇತರ ಸ್ಥಳಗಳಲ್ಲಿ ಮಾರಾಟ ನಿಷೇಧಿಸಿ ಆದೇಶಿಸಲಾಗಿದೆ. ಸಿಎಲ್ -4 (ಕ್ಲಬ್‌ಗಳು) ಮತ್ತು ಸಿಎಲ್ -6 ಎ ಪರವಾನಗಿಗಳನ್ನು ಹೊಂದಿರುವ ಸ್ಟಾರ್ ಹೋಟೆಲ್​ಗಳಿಗೆ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.

ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವದ ಮೆರವಣಿಗೆ ಇಂದು ರಾತ್ರಿಯಿಂದ ಆರಂಭವಾಗಲಿದೆ. ಮಧ್ಯರಾತ್ರಿ 2 ಗಂಟೆಯಿಂದ ಬೆಳಗ್ಗೆ 10 ಗಂಟೆಯವರೆಗೂ ಕರಗ ಮಹೋತ್ಸವದ ಮೆರವಣಿಗೆ ಸಾಗಲಿದೆ. ಅದ್ಧೂರಿಯಾಗಿ ಕರಗ ಆಚರಣೆಗೆ ಕರಗ ಸಮಿತಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಇಂದು ಬೆಳಗ್ಗೆಯಿಂದ ಕರಗದ ಶಾಸ್ತ್ರಗಳು ಆರಂಭವಾಗಿ ಮಧ್ಯರಾತ್ರಿವರೆಗೂ ನಡೆಯಲಿದ್ದು, ಶಾಸ್ತ್ರಗಳು ಮುಗಿದ ನಂತರ ಮಧ್ಯರಾತ್ರಿ 2 ಗಂಟೆಗೆ ಅಧಿಕೃತವಾಗಿ ಕರಗ ಶಕ್ತ್ಯೋತ್ಸವ ಆರಂಭವಾಗಲಿದೆ.

ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಆರಂಭವಾಗಿ ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಾಗಲಿದೆ. ನಂತರ ಕೆಆರ್ ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇಗುಲಕ್ಕೆ ಆಗಮಿಸಲಿದೆ. ಬಳಿಕ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ರಾಣಾಸಿಂಗ್​ಪೇಟೆ, ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ, ಬಳೆಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್​ಪಿ ರಸ್ತೆ ಮೂಲಕ ಸಾಗಿ ಅಣ್ಣಮ್ಮ ದೇಗುಲಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸಾಗಲಿದೆ. ಕಿಲ್ಲಾರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಅವೆನ್ಯೂ ರಸ್ತೆ ಕ್ರಾಸ್, ಆರ್.ಟಿ.ರಸ್ತೆ, ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಸುಣಕಲ್ ಪೇಟೆ ಮೂಲಕ ಬೆಳಗ್ಗೆ 6 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯ ಸೇರಲಿದೆ. ಹೀಗಾಗಿ ಈ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT