ಮುರುಘಾ ಶ್ರೀ 
ರಾಜ್ಯ

ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರಿಗೆ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ರದ್ದು ಮಾಡಿದೆ.

ನವದೆಹಲಿ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರಿಗೆ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ರದ್ದು ಮಾಡಿದೆ. ಈ ಮೂಲಕ ಮತ್ತೆ ಸ್ವಾಮೀಜಿ ಜೈಲು ಸೇರಲಿದ್ದಾರೆ.

ಕೆಲ ತಿಂಗಳುಗಳ ಹಿಂದೆ ಕರ್ನಾಟಕ ಹೈಕೋರ್ಟ್‌, ಮುರುಘಾ ಶ್ರೀಗಳಿಗೆ ಷರತ್ತುಬದ್ಧ ಜಾಮೀಜು ನೀಡಿತ್ತು. ಆದರೆ ಆರೋಪಿ ಬಂಧನದಿಂದ ಹೊರಗಿದ್ದು, ಸಾಕ್ಷಗಳನ್ನು ನಾಶಪಡಿಸಬಹುದು ಎಂದು ಮಾಜಿ ಸಚಿವ ಎಚ್.ಏಕಾಂತಯ್ಯ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಶ್ರೀಗಳ ಜಾಮೀನು ರದ್ದು ಕೋರಿ ಏಕಾಂತಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಆರೋಪಿ ಮುರುಘಾ ಶ್ರೀಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಇನ್ನು 4 ತಿಂಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಶ್ರೀಗಳ ನ್ಯಾಯಾಂಗ ಬಂಧನದ ಅವಧಿಯನ್ನು ಇನ್ನೆರಡು ತಿಂಗಳ ಕಾಲ ವಿಸ್ತರಣೆ ಮಾಡಬಹುದು.

ಸುಪ್ರೀಂ ಕೋರ್ಟ್‌ ಆದೇಶದಂತೆ, ಮುರುಘಾ ಶ್ರೀಗಳು ಒಂದು ವಾರದೊಳಗೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥೆಯರು ಹಾಗೂ ಪೋಷಕರ ವಿಚಾರಣೆಗೆ ಮುಗಿಸುವವರೆಗೂ ಶ್ರೀಗಳು ಬಂಧನದಲ್ಲಿರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

2022 ಆಗಸ್ಟ್‌ 31 ರಂದು ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಸೆಪ್ಟೆಂಬರ್‌ 1ರಂದು ಶ್ರೀಗಳ ಬಂಧನವಾಗಿತ್ತು. ಸುಮಾರು 14 ತಿಂಗಳ ಕಾಲ ಜೈಲಿನಲ್ಲಿದ್ದ, ಶ್ರೀಗಳು 2023 ನವೆಂಬರ್ 16ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗೆ ಬಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚಿತ್ರದುರ್ಗದ ಮುರುಘಾ ಶ್ರೀಗೆ ಬಿಗ್ ರಿಲೀಫ್; ಪೋಕ್ಸೋ ಪ್ರಕರಣದಲ್ಲಿ ಖುಲಾಸೆಗೊಳಿಸಿ ಕೋರ್ಟ್ ತೀರ್ಪು

India vs South Africa: ತವರಿನಲ್ಲಿ ಮತ್ತೊಮ್ಮೆ ಭಾರತಕ್ಕೆ ವೈಟ್‌ವಾಶ್ ಮುಖಭಂಗ: ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿದ ಬವುಮಾ ಪಡೆ!

ಭಾರತ ಟೆಸ್ಟ್ ಕ್ರಿಕೆಟ್ ಇತಿಹಾಸದ ಹೀನಾಯ ಸೋಲು: ಟೀಂ ಇಂಡಿಯಾ ಕಳಪೆ ದಾಖಲೆಗಳ ಸುರಿಮಳೆ

2nd Test: ಆಫ್ರಿಕನ್ನರ ವಿರುದ್ಧ 408 ರನ್ ಬೃಹತ್ ಸೋಲು, ಭಾರತೀಯ ಕ್ರಿಕೆಟ್ ಇತಿಹಾಸದ ಅತ್ಯಂತ ಹೀನಾಯ ಪರಾಜಯ

‘ಭಾರತದ ಒಂದೇ ಜಿಲ್ಲೆಗೆ 2,20,000 H-1B ವೀಸಾ ಮಂಜೂರು’: ದೊಡ್ಡ ಪ್ರಮಾಣದ ಹಗರಣ, ಯುಎಸ್ ಅರ್ಥಶಾಸ್ತ್ರಜ್ಞ ಡಾ.ಡೇವ್ ಬ್ರಾಟ್ ಆರೋಪ

SCROLL FOR NEXT