ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕುಮಾರ್ ರಾಥೋಡ್  
ರಾಜ್ಯ

ಗಂಗಾವತಿ: ಬಾರ್ ನಲ್ಲಿ ಕುಳಿತು ಜೈಶ್ರೀರಾಮ್ ಎಂದು ಕೂಗಿದವನ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

ಕೊಪ್ಪಳ: ಜೈಶ್ರೀರಾಮ್ ಎಂದು ಕೂಗಿದ ಯುವಕನ ವಿರುದ್ಧ ಹಲ್ಲೆ ನಡೆದು ತೀವ್ರ ಗಾಯಗೊಂಡು ಚಿಕಿತ್ಸೆಗೆ ಆಸ್ಪತ್ರೆಗೆ ಸೇರಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕಳೆದ ರಾತ್ರಿ ನಡೆದಿದೆ.

ಬೆಂಗಳೂರಿನಲ್ಲಿ ಮೊನ್ನೆ ರಾಮ ನವಮಿ ದಿನ ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲೇ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕೂಡ ಅಂಥದ್ದೇ ಘಟನೆ ವರದಿಯಾಗಿದೆ. ಗಂಗಾವತಿಯ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ಯುವಕನ ಮೇಲೆ ಸುಮಾರು 20 ಮಂದಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ ಎಂದು ಹೇಳಲಾಗಿದೆ.

ನಡೆದ ಘಟನೆಯೇನು?: ಗಂಗಾವತಿಯ ಶ್ರೀರಾಮನಗರದ ಸನ್​ ಶೈನ್ ಬಾರ್​ನಲ್ಲಿ ನಿನ್ನೆ ಮಂಗಳವಾರ ರಾತ್ರಿ ಮದ್ಯ ಸೇವನೆಯ ವೇಳೆ ಕುಮಾರ್ ರಾಠೋಡ್ ಎಂಬಾತ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ. ಇದನ್ನು ಕೇಳಿಸಿಕೊಂಡ ಅಲ್ಲಿದ್ದ ಯುವಕರು ಏಕಾಏಕಿ ಒಳಗೆ ನುಗ್ಗಿ ಬಂದು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಗಾಯಾಳು ಕುಮಾರ್ ರಾಠೋಡ್​ ನನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT