ಸಂಗ್ರಹ ಚಿತ್ರ PTI
ರಾಜ್ಯ

ಮಂಗಳೂರು: ಅನಾರೋಗ್ಯದ ನಡುವೆಯೂ ಮತಚಲಾಯಿಸಿ ಕೊನೆಯುಸಿರೆಳೆದ ನಿವೃತ್ತ ಯೋಧ

ಬಂಟ್ವಾಳದ ವಗ್ಗ ನಿವಾಸಿ 85 ವರ್ಷದ ಮಾಧವ ಪ್ರಭು ಅವರು ಅನಾರೋಗ್ಯದ ನಡುವೆಯೂ ತಮ್ಮ ನಾಗರಿಕ ಕರ್ತವ್ಯದಲ್ಲಿ ಅಚಲ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ.

ಮಂಗಳೂರು: ಬಂಟ್ವಾಳದ ವಗ್ಗ ನಿವಾಸಿ 85 ವರ್ಷದ ಮಾಧವ ಪ್ರಭು ಅವರು ಅನಾರೋಗ್ಯದ ನಡುವೆಯೂ ತಮ್ಮ ನಾಗರಿಕ ಕರ್ತವ್ಯದಲ್ಲಿ ಅಚಲ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸೇನಾಧಿಕಾರಿ ಹಾಗೂ ಮಲೇರಿಯಾ ನಿರ್ಮೂಲನಾ ವಿಭಾಗದ ಇನ್ಸ್‌ಪೆಕ್ಟರ್ ಪ್ರಭು ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ತಮ್ಮ ಅನಾರೋಗ್ಯದ ನಡುವೆ, ಪ್ರಭು ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ನಿರ್ಧರಿಸಿದ್ದರು. ವಿಶೇಷವಾಗಿ 85 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಮನೆ ಮತದಾನದ ಅವಕಾಶವನ್ನು ಒದಗಿಸಲಾಗಿದೆ. ಇದರ ಪ್ರಯೋಜನ ಪಡೆದ ಪ್ರಭು ಅವರು ಮನೆಯಲ್ಲೇ ಮತದಾನ ಮಾಡಿದ್ದರು.

ವೈದ್ಯರ ಅನುಮತಿ ಪಡೆದ ಅವರು ನಿನ್ನೆ ನಾಗರಿಕ ಕರ್ತವ್ಯ ಪೂರೈಸಲು ಸ್ವಲ್ಪ ಸಮಯದವರೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಇಂದು ಆಸ್ಪತ್ರೆಗೆ ದಾಖಲಾದ ನಂತರ ಪ್ರಭು ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಮೃತಪಟ್ಟಿದ್ದಾರೆ. ಅವರು ಪತ್ನಿ, ಇಬ್ಬರು ಪುತ್ರಿಯರು, ಪುತ್ರನನ್ನು ಅಗಲಿದ್ದಾರೆ.

ಪ್ರಭು ಅವರ ಜೀವನವು ಸಮರ್ಪಣೆ ಮತ್ತು ಸೇವೆಯನ್ನು ಬಿಂಬಿಸುತ್ತದೆ. ಸೇನೆ ಜೀವನ ನಂತರ ಮಲೇರಿಯಾ ನಿರ್ಮೂಲನಾ ಇಲಾಖೆಯಲ್ಲಿ ಕೆಲಸ ಮತ್ತು ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಸಮುದಾಯ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!