ಮತದಾನ (ಸಾಂದರ್ಭಿಕ ಚಿತ್ರ) 
ರಾಜ್ಯ

Lok Sabha Election 2024: ಮೊದಲ ಹಂತದ ಮತದಾನ; ಏಪ್ರಿಲ್‌ 26ರಂದು ಸಾರ್ವತ್ರಿಕ ರಜೆ ಘೋಷಣೆ

ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮತದಾನ ನಡೆಯುವ ಏಪ್ರಿಲ್ 26ರಂದು ರಾಜ್ಯ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಿದೆ.

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮತದಾನ ನಡೆಯುವ ಏಪ್ರಿಲ್ 26ರಂದು ರಾಜ್ಯ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಿದೆ.

ಮೊದಲ ಹಂತದ ಮತದಾನ (Voting in Karnataka) ಇದೇ ಏಪ್ರಿಲ್ 2ರಂದು ನಡೆಯಲಿದ್ದು, ಅಂದು ಎಲ್ಲ ಕಾರ್ಮಿಕರು, ಅರ್ಹ ಮತದಾರರು (Labour Voters) ಮತದಾನ ಮಾಡುವ ಸಲುವಾಗಿ ಸಾರ್ವತ್ರಿಕ ರಜೆ (General holiday for voting) ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಕಾರ್ಮಿಕ ಆಯುಕ್ತರು ಆದೇಶವನ್ನು ಹೊರಡಿಸಿದ್ದು, ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆ ದಿನಾಂಕವನ್ನು 2024ರ ಮಾರ್ಚ್‌ 16ರಂದು ಘೋಷಿಸಿದ್ದು, ಅದರಂತೆ ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗದಿಯಾಗಿರುತ್ತದೆ ಎಂದು ಹೇಳಿದೆ.

ಏಪ್ರಿಲ್‌ 26ರ ಶುಕ್ರವಾರ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಹಾಗೂ ಮೇ 07ರ ಮಂಗಳವಾರ ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಮಿಕರು ಸಹ ಮತದಾನ ಮಾಡಬೇಕಿದೆ. ಹಾಗಾಗಿ ಅಂದು ಕಾರ್ಮಿಕರಿಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಮತದಾನ ದಿನ ಎಲ್ಲರಿಗೂ ಪಾವತಿ ಸಹಿತ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಆದೇಶದಲ್ಲೇನಿದೆ?

ಸದರಿ ದಿನಾಂಕದಂದು ಮತದಾನ ನಡೆಯಲಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ ಮತದಾರರಾಗಿರುವ ಎಲ್ಲ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಪ್ರಕಾರ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕಾಗುತ್ತದೆ.

ಆದ್ದರಿಂದ, ಮತದಾನ ನಡೆಯಲಿರುವ ಕ್ಷೇತ್ರದಲ್ಲಿ ಅರ್ಹರಿರುವ ಎಲ್ಲ ಕಾರ್ಮಿಕ ಮತದಾರರಿಗೆ ಏಪ್ರಿಲ್‌ 26ರಂದು ವೇತನ ಸಹಿತ ರಜೆ ನೀಡಿ, ಎಲ್ಲ ಅರ್ಹ ಕಾರ್ಮಿಕರು ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುವು ಮಾಡಿಕೊಡಲು ಸೂಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT