ಅರ್ಜುನ್ ದೇವ್
ಅರ್ಜುನ್ ದೇವ್ 
ರಾಜ್ಯ

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

Shilpa D

ಬೆಂಗಳೂರು: ಹಿರಿಯ ಪತ್ರಕರ್ತ ಅರ್ಜುನ್ ದೇವ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ (ಏ.24) ನಿಧನರಾಗಿದ್ದಾರೆ.

ಅವರ ಹುಟ್ಟೂರಾದ ಕೋಲಾರ ಜಿಲ್ಲೆ ಚೌಡದೇವನಹಳ್ಳಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಅರ್ಜುನ್ ದೇವ ಅವರು 'ಪ್ರಜಾವಾಣಿ', ತಾಯಿನಾಡು, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ಸೂರ್ಯೋದಯ ಪತ್ರಿಕೆಯ ಸಂಪಾದಕರಾಗಿಯೂ ಕೆಲಸ ಮಾಡಿದ್ದರು. ಕರ್ನಾಟಕ ಮಾಧ್ಯಮ ಅಕಾಡೆಮಿ, ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರಿಗೆ ಇಬ್ಬರು ಪುತ್ರರಿದ್ದಾರೆ. ಅರ್ಜುನ್ ದೇವ ಅವರು ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ ವ್ಯಕ್ತಪಡಿಸಿದೆ.

ಅರ್ಜುನ್‌ ದೇವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. “ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಅರ್ಜುನ್ ದೇವ ಅವರ ನಿಧನದ ಸುದ್ದಿ ನೋವು ತಂದಿದೆ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

SCROLL FOR NEXT