ಮಲ್ಲಿಕಾರ್ಜುನ ಖರ್ಗೆ 
ರಾಜ್ಯ

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಚರ್ಚೆಗೆ ಬರುವಂತೆ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ!

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಅವರಿಗೆ ತಪ್ಪು ಮಾಹಿತಿಯನ್ನ ನೀಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಎಲ್ಲಾ ವರ್ಗದ ಜನರಿಗೆ ನ್ಯಾಯ ಒದಗಿಸುವುದಾಗಿದೆ. ಹೀಗಾಗಿ ನಿಮ್ಮ ಭೇಟಿಗೆ ಅವಕಾಶ ಸಿಕ್ಕರೆ, ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ತಿಳಿಸಿ ಹೇಳುತ್ತೇನೆ ಎಂದಿದ್ದಾರೆ.

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ಸಮಯ ಕೇಳಿದ್ದಾರೆ.

ಸುಮಾರು 2 ಪುಟಗಳ ಪತ್ರ ಬರೆದಿರುವ ಖರ್ಗೆ, ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಪ್ರಧಾನಿ ಮೋದಿ ನಿರಂತರ ವಾಗ್ದಾಳಿ ನಡೆಸುತ್ತಿದ್ದು, ಕಾಂಗ್ರೆಸ್ ಗ್ಯಾರಂಟಿಗಳನ್ನ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಅವರಿಗೆ ತಪ್ಪು ಮಾಹಿತಿಯನ್ನ ನೀಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಎಲ್ಲಾ ವರ್ಗದ ಜನರಿಗೆ ನ್ಯಾಯ ಒದಗಿಸುವುದಾಗಿದೆ. ಹೀಗಾಗಿ ನಿಮ್ಮ ಭೇಟಿಗೆ ಅವಕಾಶ ಸಿಕ್ಕರೆ, ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ತಿಳಿಸಿ ಹೇಳುತ್ತೇನೆ ಎಂದಿದ್ದಾರೆ.

ಯುವಕರು, ಮಹಿಳೆಯರು, ರೈತರು, ಕಾರ್ಮಿಕರು ಸೇರಿದಂತೆ ಜಾತಿ ಮತ್ತು ಸಮುದಾಯಗಳಲ್ಲಿ ಮೂಲೆ ಗುಂಪಾದವರಿಗೆ ನ್ಯಾಯ ಒದಗಿಸುವ ಗುರಿಯನ್ನು ಕಾಂಗ್ರೆಸ್ ಪ್ರಣಾಳಿಕೆ ಹೊಂದಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್‌ನ ‘ನ್ಯಾಯ ಪತ್ರ’ ಯುವಕರು, ಮಹಿಳೆಯರು, ರೈತರು, ಕಾರ್ಮಿಕರು ಮತ್ತು ಎಲ್ಲಾ ಜಾತಿಗಳು ಮತ್ತು ಸಮುದಾಯಗಳ ಅಂಚಿನಲ್ಲಿರುವ ಜನರಿಗೆ ನ್ಯಾಯ ಒದಗಿಸುವ ಗುರಿಯನ್ನು ಹೊಂದಿದೆ. ಕೋಮು ವಿಭಜನೆಯನ್ನು ಸೃಷ್ಟಿಸುವುದು ನಿಮಗೆ ಅಭ್ಯಾಸವಾಗಿದೆ. ನೀವು ಈ ರೀತಿ ಮಾತನಾಡುವ ಮೂಲಕ ಕುರ್ಚಿಯ ಘನತೆಯನ್ನು ಕಡಿಮೆ ಮಾಡುತ್ತಿದ್ದೀರಿ ಎಂದು ಅವರು ಹೇಳಿದರು. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಜನಗಣತಿ ನಡೆಸಿ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತಾರೆ. ಹಿಂದೂ ತಾಯಂದಿರು ಮತ್ತು ಸಹೋದರಿಯರ ಮಂಗಳ ಸೂತ್ರವನ್ನು ಸಹ ಬಿಡುವುದಿಲ್ಲ ಎಂಬ ಮೋದಿಯವರ ಹೇಳಿಕೆಯಿಂದ ಖರ್ಗೆ ಕೆರಳಿದ್ದಾರೆ.

ದೇಶದಲ್ಲಿ ಬಡವರು ಮತ್ತು ಹಿಂದುಳಿದ ಮಹಿಳೆಯರು ಎದುರಿಸುತ್ತಿರುವ ದೌರ್ಜನ್ಯಗಳಿಂದ ನೀವು ಮತ್ತು ನಿಮ್ಮ ಸರಕಾರ ಪದೇ ಪದೇ ವಿಮುಖರಾಗಿದ್ದೀರಿ. ಇಂದು ನೀವು ಅವರ ಮಂಗಳಸೂತ್ರದ ಬಗ್ಗೆ ಮಾತನಾಡುತ್ತೀರಿ. ನಿಮ್ಮ ಸರಕಾರ ಇದಕ್ಕೆ ಹೊಣೆಯಲ್ಲವೇ? ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು, ದಲಿತ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳು, ಅತ್ಯಾಚಾರಿಗಳಿಗೆ ಮಾಲೆ ಹಾಕುವುದು ನಿಮ್ಮ ಸರ್ಕಾರದ ಅಡಿಯಲ್ಲಿ, ನಡೆದಿದೆ. ನೀವು ಅವರ ಹೆಂಡತಿಯರನ್ನು ಮತ್ತು ಮಕ್ಕಳನ್ನು ಹೇಗೆ ರಕ್ಷಿಸುತ್ತಿರುವಿರಿ? ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿಯವರು ತಮ್ಮ ಇತ್ತೀಚಿನ ಭಾಷಣಗಳಲ್ಲಿ ಬಳಸಿದ ಭಾಷೆಯಿಂದ ನನಗೆ ಆಘಾತವಾಗಲೀ ಅಥವಾ ಆಶ್ಚರ್ಯವಾಗಲೀ ಆಗಿಲ್ಲ. ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಪ್ರದರ್ಶನವನ್ನು ನೋಡಿದ ನಂತರ ನೀವು ಮತ್ತು ನಿಮ್ಮ ಪಕ್ಷದ ಇತರ ನಾಯಕರು ಈ ರೀತಿ ಮಾತನಾಡಲು ಪ್ರಾರಂಭಿಸುತ್ತೀರಿ ಎಂದು ನಿರೀಕ್ಷಿಸಲಾಗಿತ್ತು ಎಂದು ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ.

ಕಾರ್ಮಿಕ ವರ್ಗ ಹೆಚ್ಚಿನ ತೆರಿಗೆ ಪಾವತಿ ಮಾಡಿದರೂ ನಿಮ್ಮ 'ಸೂಟ್-ಬೂಟ್ ಕಿ ಸರ್ಕಾರ್' ಕಾರ್ಪೊರೇಟ್‌ಗಳಿಗಾಗಿ ಕೆಲಸ ಮಾಡುತ್ತದೆ. ಬಡವರು ಉಪ್ಪು ಸಹಿತ ತಾವು ಖರೀದಿಸುವ ಎಲ್ಲ ಆಹಾರಗಳ ಮೇಲೆ ಜಿಎಸ್‌ಟಿ ಪಾವತಿಸುತ್ತಾರೆ. ಅದೇ ಶ್ರೀಮಂತ ದಣಿಗಳ ಜಿಎಸ್‌ಟಿ ಮರುಪಾವತಿಯಾಗುತ್ತದೆ. ನಾವು ಶ್ರೀಮಂತರು ಮತ್ತು ಬಡವರ ನಡುವಿನ ಅಸಮಾನತೆ ಬಗ್ಗೆ ಮಾತನಾಡಿದರೆ, ನೀವು ಅದನ್ನು ಹಿಂದೂ–ಮುಸ್ಲಿಮರಿಗೆ ಸಮೀಕರಿಸುತ್ತಿದ್ದೀರಿ’ ಎಂದು ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ.

ನಿಮ್ಮ ಸ್ವಾತಂತ್ರ್ಯಪೂರ್ವ ಮಿತ್ರರಾದ ಮುಸ್ಲಿಂ ಲೀಗ್ ಮತ್ತು ವಸಾಹತುಶಾಹಿ ಯಜಮಾನರನ್ನು(ಬ್ರಿಟಿಷರು) ನೀವು ಇನ್ನೂ ಮರೆತಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಕುಟುಕಿದ್ದಾರೆ. ಕಾಂಗ್ರೆಸ್ ಯಾವಾಗಲೂ ಬಡವರ ಸಬಲೀಕರಣಕ್ಕಾಗಿ ಸೇವೆ ಸಲ್ಲಿಸಿದೆ. ನೀವು ಬಡವರ ಸಂಪಾದನೆ ಮತ್ತು ಸಂಪತ್ತನ್ನು ಕಿತ್ತುಕೊಳ್ಳಲು ಆಡಳಿತ ನಡೆಸಿದ್ದೀರಿ. ಬ್ಯಾಂಕ್‌ಗಳಲ್ಲಿ ಬಡವರು ಠೇವಣಿ ಇಟ್ಟ ಹಣವನ್ನು ಶ್ರೀಮಂತರಿಗೆ ಸಾಲದ ರೂಪದಲ್ಲಿ ವರ್ಗಾಯಿಸಲು ನೋಟು ಅಮಾನ್ಯೀಕರಣವನ್ನು "ಸಂಘಟಿತ ಮತ್ತು ಕಾನೂನುಬದ್ಧ ಲೂಟಿ" ಆಗಿ ಬಳಸಿದ್ದು ನಿಮ್ಮ ಸರ್ಕಾರ.

2014 ರಿಂದ ನಿಮ್ಮ ಸರ್ಕಾರ ಮನ್ನಾ ಮಾಡಿರುವ ಲಕ್ಷ ಕೋಟಿ ಕಾರ್ಪೊರೇಟ್ ಸಾಲಗಳು ಬಡವರಿಂದ ಶ್ರೀಮಂತರಿಗೆ ಸಂಪತ್ತಿನ ವರ್ಗಾವಣೆಯಾಗಿದೆ. ನೀವು ಯಾವುದೇ ರೈತರ ಸಾಲ, ಕುಶಲಕರ್ಮಿಗಳ ಸಾಲ, ಎಂಎಸ್‌ಎಂಇ ಸಾಲ ಅಥವಾ ವಿದ್ಯಾರ್ಥಿಗಳ ಸಾಲವನ್ನು ಮನ್ನಾ ಮಾಡಿಲ್ಲ ಎಂದು ಖರ್ಗೆ ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT