ಮೃತ ಸಿಬ್ಬಂದಿ ಯಶೋದಾ 
ರಾಜ್ಯ

ಚಿತ್ರದುರ್ಗ: ಮತಗಟ್ಟೆಯಲ್ಲೇ ಕರ್ತವ್ಯ ನಿರತ ಮಹಿಳಾ ಸಿಬ್ಬಂದಿ ಸಾವು

ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಲೋ ಬಿಪಿಯಿಂದ ಮೃತಪಟ್ಟಿದ್ದಾರೆ.

ಚಿತ್ರದುರ್ಗ: ಲೋಕಸಭೆ ಚುನಾವಣೆಗೆ ರಾಜ್ಯದ್ಯಂತ ಬಿರುಸಿನ ಮತದಾನ ನಡೆಯುತ್ತಿದೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದೆ. ಅಲ್ಲಲ್ಲಿ ಕೆಲವು ಸಣ್ಣಪುಟ್ಟ ಘಟನೆಗಳನ್ನು ಹೊರತು ಪಡಿಸಿದರೆ ಬಹುತೇಕ ಶಾಂತಿಯುತ ಮತದಾನವಾಗಿದೆ.

ಈ ನಡುವೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಲೋ ಬಿಪಿಯಿಂದ ಮೃತಪಟ್ಟಿದ್ದಾರೆ. ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋಧಮ್ಮ (55) ಮೃತ ಮಹಿಳಾ ಸಿಬ್ಬಂದಿ.

ಯಶೋದಮ್ಮ ಅವರು ಲೋ ಬಿಪಿಯಿಂದಾಗಿ ಅಸ್ವಸ್ಥಗೊಂಡಿದ್ದರು. ಇವರನ್ನು ಕೂಡಲೆ ಚಳ್ಳಕೆರೆ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು, ಆದರೆ ದಾರಿ ಮಧ್ಯದಲ್ಲೇ ಮೃತಪಟ್ಟರು. ಚಳ್ಳಕೆರೆ ಆಸ್ಪತ್ರೆಗೆ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel