ತೇಜಸ್ವಿ ಸೂರ್ಯ 
ರಾಜ್ಯ

Loksabha Election 2024: ಧರ್ಮದ ಆಧಾರದಲ್ಲಿ ಮತ ಯಾಚನೆ; ಬಿಜೆಪಿ ಸಂಸದ Tejasvi Surya ವಿರುದ್ಧ ಪ್ರಕರಣ ದಾಖಲು!

ಧರ್ಮದ ಆಧಾರದ ಮೇಲೆ ಮತಯಾಚಿಸಿದ ಆರೋಪದಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗ ಗುರುವಾರ ಪ್ರಕರಣ ದಾಖಲಿಸಿಕೊಂಡಿದೆ.

ಬೆಂಗಳೂರು: ಧರ್ಮದ ಆಧಾರದ ಮೇಲೆ ಮತಯಾಚಿಸಿದ ಆರೋಪದಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗ ಗುರುವಾರ ಪ್ರಕರಣ ದಾಖಲಿಸಿಕೊಂಡಿದೆ.

ಲೋಕಸಭೆ ಚುನಾವಣೆಯ 2ನೇ ಹಂತದ ಮತದಾನ ನಡೆಯುತ್ತಿದ್ದು, ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಇಂದು ಬೆಂಗಳೂರಿನಲ್ಲಿ ಮತದಾನ ಮಾಡಿದ ಸಂಸದ ತೇಜಸ್ವಿ ಸೂರ್ಯ, ಹೆಚ್ಚೆಚ್ಚು ಸಂಖ್ಯೆಯಲ್ಲಿ ಮತದಾರರು ಮತಗಟ್ಟೆಗಳಿಗೆ ಬಂದು ಮತದಾನ ಮಾಡುವಂತೆ ಕೋರಿದ್ದರು.

ಆದರೆ ಇದರ ನಡುವೆಯೇ ಅವರು ಧರ್ಮದ ಆಧಾರದಲ್ಲಿ ಮತಯಾಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಧರ್ಮದ (religion) ಆಧಾರದಲ್ಲಿ ಮತಯಾಚನೆ ಮಾಡಿದ ಆರೋಪ ಮೇರೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧ ಚುನಾವಣಾ ಆಯೋಗ ದೂರು ದಾಖಲಿಸಿದೆ. ಜನ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್ 123(3)ರ ಅಡಿ ಪ್ರಕರಣ ದಾಖಲಾಗಿದೆ.

ಧರ್ಮದ ಆಧಾರದಲ್ಲಿ ಮತಯಾಚನೆ ಮತ್ತು ಈ ಕುರಿತು ವಿಡಿಯೊವೊಂದನ್ನು ಎಕ್ಸ್‌ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡ ಹಿನ್ನೆಲೆಯಲ್ಲಿ ಜಯನಗರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್‌ 123(3) ಅಡಿ ಪ್ರಕರಣ ದಾಖಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಪೋಸ್ಟ್ ನಲ್ಲೇನಿತ್ತು?

ಮತದಾನಕ್ಕೆ ಒಂದು ದಿನ ಮೊದಲು ಅಂದರೆ ಏಪ್ರಿಲ್ 25 ರಂದು ತೇಜಸ್ವಿ ಸೂರ್ಯ ತಮ್ಮ ಎಕ್ಸ್‌ನಲ್ಲಿ ಅಯೋಧ್ಯೆಯ (Ayodhya) ಬಾಲ ರಾಮನ ಹಣೆಗೆ ಸೂರ್ಯ ಸ್ಪರ್ಶಿಸುವ ವಿಡಿಯೋವನ್ನು ಅಪ್ಲೋಡ್‌ ಮಾಡಿ, ರಾಮ ನವಮಿಯಂದು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಮೇಲೆ ಭವ್ಯವಾದ ಸೂರ್ಯ ತಿಲಕವನ್ನು ವೀಕ್ಷಿಸಲು ನಮ್ಮ ಪೀಳಿಗೆಯು ಆಶೀರ್ವದಿಸಲ್ಪಟ್ಟಿದೆ.

ಸುಮಾರು 500 ವರ್ಷಗಳ ಕಾಯುವಿಕೆ ಮತ್ತು ಕೋಟಿಗಟ್ಟಲೆ ಭಾರತೀಯರ ಆಶಯವನ್ನು ಪ್ರಧಾನಿ ಈಡೇರಿಸಿದ್ದಾರೆ. ಭಾರತೀಯತೆ ಉಳಿಯಲು ಬಿಜೆಪಿಗೆ ಮತ ನೀಡಿ ಎಂದು ಬರೆದುಕೊಂಡಿದ್ದರು.

ಸೌಮ್ಯರೆಡ್ಡಿ vs ತೇಜಸ್ವಿ ಸೂರ್ಯ

ಅಂದಹಾಗೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಈ ಬಾರಿಯೂ ಸಹ ತೇಜಸ್ವಿ ಸೂರ್ಯ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದು, ಇವರ ವಿರುದ್ಧವಾಗಿ ಕಾಂಗ್ರೆಸ್​ನಿಂದ ಸಚಿವ ರಾಮಲಿಂಗರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಸ್ಪರ್ಧೆ ಮಾಡಿದ್ದಾರೆ. ಇಂದು ಮತದಾನ ಮುಗಿದಿದ್ದು, ಇಬ್ಬರು ಭವಿಷ್ಯ ಮತಯಂತ್ರ ಸೇರಿದೆ. ಇನ್ನು ಯಾರು ಗೆಲ್ಲಲಿದ್ದಾರೆ ಎನ್ನುವುದು ಜೂನ್​ 4ರಂದು ತಿಳಿಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು