ಸಂಗ್ರಹ ಚಿತ್ರ 
ರಾಜ್ಯ

ಕನ್ನಡಿಗರ ತೆರಿಗೆ ಹಣದಲ್ಲಿ ವಿಶೇಷ ವಿಮಾನಗಳಲ್ಲಿ ಸುರ್ಜೇವಾಲಾ ಟ್ರಿಪ್: ಪೋಸ್ಟ್ ಮೂಲಕ ಕಿಡಿಕಾರಿದ ಬಿಜೆಪಿ

ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಗಿದ ಬೆನ್ನಲ್ಲೇ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿ ಶುರುವಾಗಿದೆ. ಕನ್ನಡಿಗರ ತೆರಿಗೆ ಹಣದಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ವಿಶೇಷ ವಿಮಾನಗಳಲ್ಲಿ ಓಡಾಡುತ್ತಿದ್ದಾರೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಗಿದ ಬೆನ್ನಲ್ಲೇ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿ ಶುರುವಾಗಿದೆ. ಕನ್ನಡಿಗರ ತೆರಿಗೆ ಹಣದಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ವಿಶೇಷ ವಿಮಾನಗಳಲ್ಲಿ ಓಡಾಡುತ್ತಿದ್ದಾರೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಎಕ್ಸ್ ನಲ್ಲಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಕನ್ನಡಿಗರಿಗೆ ಬರ ಪರಿಹಾರ, ಅಭಿವೃದ್ಧಿಗೆ ಅನುದಾನ ಕೊಡಲು ಖಜಾನೆ ಖಾಲಿ ಮಾಡಿ ಹಣವಿಲ್ಲ ಎಂದು ಕೂತಿರುವ ಸರ್ಕಾರ, ಕಲೆಕ್ಷನ್‌ ಏಜೆಂಟ್ ಸುರ್ಜೇವಾಲಾ ಅವರ ಚುನಾವಣಾ ಪ್ರಚಾರಕ್ಕೆ ಸುತ್ತಾಡಲು ಸ್ಪೆಷಲ್ ಫ್ಲೈಟ್‌ಗಳ ವ್ಯವಸ್ಥೆಯನ್ನೇ ಮಾಡಿದೆ. #ATMSarkara ಕೊಟ್ಟು ಕಳಿಸುವ ಲೂಟಿ ಹಣವನ್ನು ಚುನಾವಣೆಗಾಗಿ ದೇಶದ ತುಂಬಾ ತೆಗೆದುಕೊಂಡು ಹೋಗಿ ಹಂಚುವ ಜವಾಬ್ದಾರಿಯನ್ನೂ ನೀಡಲಾಗಿದೆಯೇ?

ಕನ್ನಡಿಗರು ಕುಡಿಯಲು ಹನಿ ನೀರಿಲ್ಲದೆ ಸತ್ತರೂ @siddaramaiah ಸರ್ಕಾರಕ್ಕೆ ಚಿಂತೆ ಇಲ್ಲ. ಆದರೆ, ಹೈಕಮಾಂಡ್ ಹೇಳಿದಂತೆ ಕೇಳಿಕೊಂಡು ಕಪ್ಪ ಕಾಣಿಕೆ ಸಲ್ಲಿಸುತ್ತಾ ಅವರ ಸೇವೆ ಮಾಡುತ್ತಾ ಕುರ್ಚಿ ಉಳಿಸಿಕೊಳ್ಳುವುದೇ ಸಿದ್ದರಾಮಯ್ಯ ಅವರ ಗುರಿ! ಎಂದು ಬಿಜೆಪಿ ಪ್ರಶ್ನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹೊಸ ಮುಖಗಳ ನಿರೀಕ್ಷೆ ಹುಸಿ; ಡಿಕೆಶಿ ಸಂಪುಟದಲ್ಲಿ ಹಿರಿಯರ ಪ್ರಾಬಲ್ಯ, ಅನುಭವಿಗಳಿಗೆ ಮಣೆ ಹಾಕಿದ ಹೈಕಮಾಂಡ್..!

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿದ್ದುಗೆ ಯಾವುದೇ ಅಸಮಾಧಾನವಿಲ್ಲ, ತಮಿಳುನಾಡಿಗೆ ಕಾನೂನು ಮೂಲಕವೇ ಉತ್ತರ- ಸಿಎಂ ಡಿಕೆ ಶಿವಕುಮಾರ್

ಸಚಿವ ಸಂಪುಟದಲ್ಲಿ ಬೆಂಗಳೂರು ಮೇಲುಗೈ; ಯಾದಗಿರಿ ಸೇರಿ 8 ಜಿಲ್ಲೆಗಳಿಗೆ ಸಿಗಲಿಲ್ಲ ಪ್ರಾತಿನಿಧ್ಯ..!

ಡಿಕೆಶಿ ಸಂಪುಟದಲ್ಲಿ ಹೊಸ ತಲೆಮಾರಿಗೆ ಅವಕಾಶ; 7 ಶಾಸಕರಿಗೆ ಸಚಿವ ಸ್ಥಾನ, ಮೊದಲ ಬಾರಿಗೆ ಅಧಿಕಾರದ ಗದ್ದುಗೆ ಏರಿದ ನಾಯಕರು ಯಾರು?

ಕಾವೇರಿ ನೀರು ಹಂಚಿಕೆ: ತಮಿಳುನಾಡು ಅರ್ಜಿಯನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ