ಉದಯ್ ಗರುಡಾಚಾರ್ 
ರಾಜ್ಯ

ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ: ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಬಿಗ್​ ರಿಲೀಫ್, ಕೆಳ ಹಂತದ ಕೋರ್ಟ್‌ ವಿಧಿಸಿದ್ದ ಜೈಲು ಶಿಕ್ಷೆ ರದ್ದು!

ಸುಳ್ಳು ಚುನಾವಣಾ ಅಫಿಡವಿಟ್‌ ಸಲ್ಲಿಸಿದ ಆರೋಪದ ಮೇಲೆ ಚಿಕ್ಕಪೇಟೆ ಶಾಸಕ ಬಿ ಜಿ ಉದಯ್‌ ಗರುಡಾಚಾರ್‌ಗೆ ಎರಡು ತಿಂಗಳು ಸಾಧಾರಣಾ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ವಿಚಾರಣಾಧೀನ ನ್ಯಾಯಾಲಯ ಮಾಡಿದ್ದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಬೆಂಗಳೂರು: ಸುಳ್ಳು ಚುನಾವಣಾ ಅಫಿಡವಿಟ್‌ ಸಲ್ಲಿಸಿದ ಆರೋಪದ ಮೇಲೆ ಚಿಕ್ಕಪೇಟೆ ಶಾಸಕ ಬಿ ಜಿ ಉದಯ್‌ ಗರುಡಾಚಾರ್‌ಗೆ ಎರಡು ತಿಂಗಳು ಸಾಧಾರಣಾ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ವಿಚಾರಣಾಧೀನ ನ್ಯಾಯಾಲಯ ಮಾಡಿದ್ದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ವಿಚಾರಣಾಧೀನ ನ್ಯಾಯಾಲಯಗಳ ಆದೇಶ ಪ್ರಶ್ನಿಸಿ ಬಿ ಜಿ ಉದಯ್‌ ಗರುಡಾಚಾರ್‌ ಸಲ್ಲಿಸಿದ್ದ ಕ್ರಿಮಿನಲ್‌ ಮರು ಪರಿಶೀಲನಾ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ಏಕ ಸದಸ್ಯ ಪೀಠ ಪುರಸ್ಕರಿಸಿದೆ.

ಅಪರಾಧ ಪ್ರಕರಣ ಸಂಬಂಧ ದೋಷಾರೋಪ ಹೊರಿಸಿದ ಮತ್ತು ಆ ಸಂಬಂಧ ನ್ಯಾಯಾಲಯವು ಸಂಜ್ಞೇ ತೆಗೆದುಕೊಂಡ ಸಂದರ್ಭದಲ್ಲಿ ತಮ್ಮ ಮೇಲಿನ ಆರೋಪಗಳ ಕುರಿತ ಮಾಹಿತಿಯನ್ನು ಚುನಾವಣಾ ಕಣದಲ್ಲಿರುವ ಅಭ್ಯರ್ಥಿಯು ತಿಳಿಸಬೇಕಾಗುತ್ತದೆ. ಆ ಆರೋಪಗಳನ್ನು ಪರಿಗಣಿಸಬೇಕಾಗುತ್ತದೆ. ಆಗ ಅವರನ್ನು ಕ್ರಿಮಿನಲ್‌ ಪ್ರಕರಣದಲ್ಲಿ ಆರೋಪಿ ಎಂಬುದಾಗಿ ವ್ಯಾಖ್ಯಾನಿಸಬಹುದಾಗಿದೆ. ಎಫ್‌ಐಆರ್‌ ಅಥವಾ ಖಾಸಗಿ ದೂರು ದಾಖಲಾದ ಮಾತ್ರಕ್ಕೆ ಆರೋಪಿಯಾಗಿ ದೃಢಪಟ್ಟು, ಚುನಾವಣಾ ಪ್ರಮಾಣಪತ್ರದಲ್ಲಿ ಪ್ರಕರಣದ ಮಾಹಿತಿ ನೀಡಬೇಕು ಎಂದರ್ಥವಲ್ಲ ಎಂದು ಪೀಠ ಹೇಳಿದೆ.

ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಪ್ರಕರಣವೊಂದರ ಸಂಬಂಧ ದೂರು ದಾಖಲಾಗಿತ್ತು. ಆದರೆ, ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಆ ದೂರಿನ ಸಂಬಂಧ ಅರ್ಜಿದಾರರ ವಿರುದ್ಧ ದೋಷಾರೋಪಣೆ ಹೊರಿಸಲಾಗಿರಲಿಲ್ಲ. ವಿಚಾರಣಾಧೀನ ನ್ಯಾಯಾಲಯ ಸಂಜ್ಞೇ ತೆಗೆದುಕೊಂಡಿರಲಿಲ್ಲ. ಹೀಗಿದ್ದರೂ ಚುನಾವಣೆಗೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ ಅರ್ಜಿದಾರರು ತಮ್ಮ ಮೇಲಿನ ಕ್ರಿಮಿನಲ್‌ ಪ್ರಕರಣದ ಮಾಹಿತಿ ಮರೆ ಮಾಚಿದ್ದಾರೆ ಎಂದು ಹೇಳಿ ಅವರನ್ನು ದೋಷಿಯಾಗಿ ಪರಿಗಣಿಸಿದ ಹಾಗೂ ಶಿಕ್ಷೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯಗಳ ಕ್ರಮ ಸರಿಯಲ್ಲ ಎಂದು ಹೈಕೋರ್ಟ್‌ ಹೇಳಿದೆ.

ಪ್ರಕರಣದಲ್ಲಿ ಅವರಿಗೆ ಸಂಪೂರ್ಣವಾಗಿ ಕ್ಲೀನ್‌ ಚಿಟ್‌ ನೀಡಬೇಕಿದೆ. ಈ ಕ್ರಿಮಿನಲ್‌ ಪ್ರಕರಣಕ್ಕೆ ಸಂಬಂಧಿಸಿದ ಪ್ರಕ್ರಿಯೆಯಿಂದ ಅರ್ಜಿದಾರರು ಸಾಕಷ್ಟು ಯಾತನೆ, ಕಷ್ಟ ಅನುಭವಿಸಿದ್ದಾರೆ ಎಂದು ಹೇಳಿರುವ ಪೀಠವು ವಿಚಾರಣಾಧೀನ ನ್ಯಾಯಾಲಯದ ತೀರ್ಪನ್ನು ರದ್ದುಪಡಿಸಿದೆ. ಜೊತೆಗೆ ಆ ತೀರ್ಪು ಪ್ರಕಟವಾದ ನಂತರ ಅರ್ಜಿದಾರರು ದಂಡ ಮೊತ್ತವನ್ನು ಪಾವತಿ ಮಾಡಿದ್ದರೆ, ಅದನ್ನು ಕೂಡಲೇ ಹಿಂದಿರುಗಿಸಬೇಕು ಎಂದು ವಿಚಾರಣಾಧೀನ ನ್ಯಾಯಾಲಯಕ್ಕೆ ಆದೇಶಿಸಿದೆ.

ಶಾಸಕ ಉದಯ್ ಗರುಡಾಚಾರ್ 2018 ರ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಪೇಟೆ ಕ್ಷೇತ್ರದಿಂದ ಸ್ಪರ್ಧಿಸಿದ್ದಾಗ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ತಮ್ಮ ವಿರುದ್ಧದ ಕ್ರಿಮಿನಲ್‌ ಪ್ರಕರಣ ಹಾಗೂ ಪತ್ನಿಯ ಬ್ಯಾಂಕ್‌ ವಿವರಗಳನ್ನು ಬಹಿರಂಗ ಪಡಿಸಿಲ್ಲ ಎಂದು ಆರೋಪಿಸಿ ಎಚ್‌ ಜಿ ಪ್ರಶಾಂತ್‌ ಎಂಬುವರು ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ್ದ ನಗರದ 42ನೇ ಎಸಿಎಂಎಂ (ಜನ ಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಪ್ರಜಾಪ್ರತಿನಿಧಿ ಕಾಯಿದೆ ಅಡಿಯಲ್ಲಿ ಎರಡು ತಿಂಗಳ ಸಾಧಾರಣ ಜೈಲು ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿ 2022ರ ಅಕ್ಟೋಬರ್‌ 13ರಂದು ತೀರ್ಪು ನೀಡಿತ್ತು.

ಆ ಆದೇಶವನ್ನು ಪುರಸ್ಕರಿಸಿ 2023ರ ಸೆಪ್ಟೆಂಬರ್‌ 11ರಂದು ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯ ತೀರ್ಪು ನೀಡಿತ್ತು. ಈ ಎರಡು ಆದೇಶಗಳನ್ನು ರದ್ದುಪಡಿಸುವಂತೆ ಕೋರಿ ಉದಯ ಗರುಡಚಾರ್‌ ಅವರು ಹೈಕೋರ್ಟ್‌ಗೆ ಕ್ರಿಮಿನಲ್‌ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT