ಐಟಿ ಇಲಾಖೆ
ಐಟಿ ಇಲಾಖೆ  
ರಾಜ್ಯ

ಕಲಬುರಗಿ: ಐಟಿ ಅಧಿಕಾರಿಗಳ ದಾಳಿ, 2 ಕೋಟಿ ರೂ. ನಗದು ಜಪ್ತಿ, ಕಾಂಗ್ರೆಸ್ ಮಾಜಿ ಮೇಯರ್ ಕಾರು ವಶ

Sumana Upadhyaya

ಕಲಬುರಗಿ: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕರ್ನಾಟಕದ ಹಲವಡೆ ಐಟಿ ಇಲಾಖೆ ಅಧಿಕಾರಿಗಳ ದಾಳಿ ಮುಂದುವರಿದಿದೆ. ಇಂದು ಶನಿವಾರ ಕಲಬುರಗಿಯ ರೈಲು ನಿಲ್ದಾಣದ ಬಳಿ ದಾಳಿ ನಡೆಸಿದ ಐಟಿ ಅಧಕಾರಿಗಳು ಎರಡು ಕೋಟಿ ರೂಪಾಯಿ ನಗದು ಜಪ್ತಿ ಮಾಡಿದ್ದಾರೆ.

ವ್ಯಕ್ತಿಯೊಬ್ಬರು ರೈಲಿನಿಂದ ಇಳಿದು ಕಾರನ್ನು ಏರಿ ಹೊರಡುವ ಸಂದರ್ಭದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೇ ವೇಳೆ ಎರಡು ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. ಸದ್ಯ ನಗದು ಮತ್ತು ಕಾರನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಕಾಂಗ್ರೆಸ್ ಪಕ್ಷದ ಮಾಜಿ ಮೇಯರ್ ಒಬ್ಬರಿಗೆ ಸೇರಿದ ಕಾರು ಇದು ಎಂದು ಹೇಳಲಾಗಿದೆ.

ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕ ವ್ಯಾಪ್ತಿಯ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯಲಿದೆ. ಹಿನ್ನೆಲೆಯಲ್ಲಿ ಇಂದು ನಡೆದಿರುವ ಐಟಿ ದಾಳಿ, ಮಹತ್ವದ್ದಾಗಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಆಪ್ತರ ಮನೆ ಮೇಲೆ ಐಟಿ ಅಧಿಕಾರಿಗಳು ಮೊನ್ನೆ ದಾಳಿ ನಡೆಸಿದ ವೇಳೆ ಅಪಾರ ಪ್ರಮಾಣದ ನಗದು ಪತ್ತೆಯಾಗಿತ್ತು. ಈ ಪ್ರಕರಣ ಸಂಬಂಧ ಸುಧಾಕರ್ ಮೇಲೆ ಇದೀಗ ಎಫ್ಐರ್ ದಾಖಲಿಸಲಾಗಿದೆ.

SCROLL FOR NEXT