ಐಶ್ವರ್ಯಾ 
ರಾಜ್ಯ

ರಾಜಕೀಯ ಪ್ರವೇಶದ ಬಗ್ಗೆ ಊಹಾಪೂಹ: ಡಿಕೆ ಶಿವಕುಮಾರ್‌ ಪುತ್ರಿ ಐಶ್ವರ್ಯಾ ಸ್ಪಷ್ಟನೆ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಡಿಕೆಎಸ್ ಹೆಗಡೆ ಸೇರುತ್ತಾರೆಯೇ ಎಂಬುದಕ್ಕೆ ಸ್ಪಷ್ಟ ಉತ್ತರ ಲಭಿಸಿದೆ. ರಾಜಕೀಯ ಸೇರ್ಪಡೆ ಬಗ್ಗೆ ಐಶ್ವರ್ಯಾ ಅವರೇ ಉತ್ತರ ನೀಡಿದ್ದಾರೆ.

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಡಿಕೆಎಸ್ ಹೆಗಡೆ ಅವರು ರಾಜಕೀಯಕ್ಕೆ ಬರುವುದನ್ನು ಶುಕ್ರವಾರ ತಳ್ಳಿಹಾಕಿದ್ದು, ಶಿಕ್ಷಣ ತಜ್ಞೆಯಾಗಿ ತಮ್ಮ ಪಾತ್ರ ನನಗೆ ಖುಷಿ ತಂದಿದೆ ಎಂದಿದ್ದಾರೆ.

ತಮ್ಮ ತಂದೆಯ ಹಾದಿಯನ್ನು ಅನುಸರಿಸಿ ರಾಜಕೀಯಕ್ಕೆ ಪ್ರವೇಶಿಸುವಿರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, 'ನಾನು ಶಿಕ್ಷಣತಜ್ಞೆಯಾಗಿದ್ದು, ಈ ಕೆಲಸ ಮಾಡುವುದರಿಂದ ನನಗೆ ತುಂಬಾ ಸಂತೋಷವಾಗಿದೆ. ಭಾರತವನ್ನು ಹೆಮ್ಮೆ ಪಡುವಂತೆ ಮಾಡಲು ಪ್ರತಿಯೊಬ್ಬರೂ ವಿಭಿನ್ನ ಕ್ಷೇತ್ರಗಳಲ್ಲಿ ಕೆಲಸ ಮಾಡಬೇಕು ಎಂದು ನಾನು ಭಾವಿಸುತ್ತೇನೆ. ನಾನು ಇಂದು ಶಿಕ್ಷಣದ ಅಗತ್ಯವಿರುವ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ. ಶಿಕ್ಷಣವನ್ನು ನೀಡುವುದು ಬಹಳ ಮುಖ್ಯ ಏಕೆಂದರೆ ವಿದ್ಯಾವಂತರು ನಾಳೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಾರೆ ಮತ್ತು ಅದು ದೇಶಕ್ಕೆ ಬದಲಾವಣೆಯನ್ನು ತರುತ್ತದೆ' ಎಂದು ಅವರು ಹೇಳಿದರು.

ಐಶ್ವರ್ಯಾ ಅವರು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ರಾಷ್ಟ್ರೀಯ ಶಿಕ್ಷಣ ಪ್ರತಿಷ್ಠಾನದಲ್ಲಿ ಟ್ರಸ್ಟಿ-ಕಾರ್ಯದರ್ಶಿಯಾಗಿದ್ದಾರೆ. ಡಿಕೆ ಶಿವಕುಮಾರ್ ಅವರು ಅಧ್ಯಕ್ಷರಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಐಶ್ವರ್ಯಾ ಅವರು ನಾಲ್ಕನೇ ಅವಧಿಗೆ ಮರು ಆಯ್ಕೆ ಬಯಸಿರುವ ತಮ್ಮ ಚಿಕ್ಕಪ್ಪ ಡಿಕೆ ಸುರೇಶ್ ಪರ ಪ್ರಚಾರ ನಡೆಸಿದ್ದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 'ನನಗೆ ಕಾಂಗ್ರೆಸ್ ಬಗ್ಗೆ ತಿಳಿದಿಲ್ಲ. ಆದರೆ, ನಾನು ಜೂನ್ 4 ರಂದು ನನ್ನ ಚಿಕ್ಕಪ್ಪನೊಂದಿಗೆ ವಿಜಯಶಾಲಿ, ಹೆಮ್ಮೆಯ ಸಂಸದನಾಗಿರುವುದನ್ನು ಆಚರಿಸುತ್ತೇನೆ ಎಂದು ನನಗೆ ತುಂಬಾ ವಿಶ್ವಾಸವಿದೆ' ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel