ಅಪಘಾತ 
ರಾಜ್ಯ

Accident: ಕಲಬುರಗಿಯಲ್ಲಿ ಭೀಕರ ಅಪಘಾತ: ಲಾರಿ- ಬೈಕ್‌ ಢಿಕ್ಕಿ; ಪತ್ನಿ ಎದುರೇ ಪ್ರಾಣಬಿಟ್ಟ ಪತಿ

ಕಲಬುರಗಿಯಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ- ಬೈಕ್‌ ಢಿಕ್ಕಿಯಾಗಿ ಓರ್ವ ವ್ಯಕ್ತಿ ಸಾವಪ್ಪಿದ್ದಾರೆ.

ಕಲಬುರಗಿ: ಕಲಬುರಗಿಯಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ- ಬೈಕ್‌ ಢಿಕ್ಕಿಯಾಗಿ ಓರ್ವ ವ್ಯಕ್ತಿ ಸಾವಪ್ಪಿದ್ದಾರೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಢೋಗಿ ನಾಲಾ ಬಳಿ‌ ಈ ಅಪಘಾತ ಸಂಭವಿಸಿದ್ದು, ಲಾರಿ ಮತ್ತು ಬೈಕ್ ನಡುವೆ ಅಪಘಾತ ನಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಬೈಕ್ ಸವಾರ ಅರ್ಜುನ್ ಎಂಬಾತ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅರ್ಜುನ್‌ ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದ ನಿವಾಸಿಯಾಗಿದ್ದಾರೆ. ಅರ್ಜುನ್‌ ತಮ್ಮ ಪತ್ನಿ ಜತೆಗೆ ಬೆಳಗಿನ ಜಾವ ಪುಣೆಯಿಂದ ಯಾದಗಿರಿ ಕಡೆ ಬೈಕ್ ಮೇಲೆ ಹೊರಟಿದ್ದರು.

ಈ ವೇಳೆ ವೇಗವಾಗಿ ಬಂದ ಲಾರಿಯು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ನಿಂದ ಎಗರಿ ಬಿದ್ದಾಗ ಅರ್ಜುನ್‌ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜತೆಯಲ್ಲಿದ್ದ ಅರ್ಜುನ್‌ ಪತ್ನಿಗೂ ಗಾಯವಾಗಿದ್ದು, ಪತಿ ಒದ್ದಾಡಿ ಸಾವನ್ನಪ್ಪಿದ್ದು ಕಂಡು ಆಘಾತಕ್ಕೆ ಒಳಗಾಗಿದ್ದಾರೆ.

ಕೂಡಲೇ ಸ್ಥಳಕ್ಕೆ ಓಡಿಬಂದ ಸ್ಥಳೀಯರು ಗಾಯಾಳು ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ನರೋಣಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಹಾಗೂ ಪುಡಿ ಪುಡಿಯಾಗಿದ್ದ ಬೈಕ್‌ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Vice President Election 2025: ನೂತನ ಉಪ ರಾಷ್ಟ್ರಪತಿಯಾಗಿ ಸಿ ಪಿ ರಾಧಾಕೃಷ್ಣನ್ ಆಯ್ಕೆ

ಮದ್ದೂರಿನಲ್ಲಿ ಕಲ್ಲು ತೂರಾಟ: ಶಾಂತಿ ಕದಡುವುದೇ ಬಿಜೆಪಿ ಉದ್ದೇಶ; ಜಾತಿ, ಧರ್ಮ, ಪಕ್ಷ ಲೆಕ್ಕಿಸದೆ ಕ್ರಮ; Video

Israel attacks: ದೋಹಾದಲ್ಲಿ 'ಹಮಾಸ್' ನಾಯಕರ ಮನೆ ಮೇಲೆ ಇಸ್ರೇಲ್ ವಾಯು ದಾಳಿ! ಹೇಡಿತನ ಎಂದ ಕತಾರ್!

ಮದ್ದೂರಿನಲ್ಲಿ ಕಲ್ಲು ತೂರಾಟ: ಲೈಟ್ ಆಫ್ ಮಾಡಿರುವುದು ಅನುಮಾನ ಮೂಡಿಸುತ್ತಿದೆ - IGP

Asia Cup 2025: "Kisne Bola?".. ಪತ್ರಕರ್ತನಿಗೆ Suryakumar Yadav ಖಡಕ್ ಉತ್ತರ, ಪಾಕ್ ಕ್ಯಾಪ್ಟನ್‌ಗೆ ಓಪನ್ ಚಾಲೆಂಜ್!

SCROLL FOR NEXT