ರಾಜ್ಯ

ರಾಜ್ಯದಲ್ಲಿ PM ಪ್ರಚಾರ, MP ಪ್ರಜ್ವಲ್ ರೇವಣ್ಣ ವಿರುದ್ಧ FIR, ಹಕ್ಕಿಜ್ವರ ಭೀತಿ, ಗಡಿಭಾಗದಲ್ಲಿ ನಿಗಾ: ಈ ದಿನದ ಸುದ್ದಿ ಮುಖ್ಯಾಂಶಗಳು-28-04-2024

ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮೇ 7 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಪ್ರಚಾರದ ಕಾವು ಬಿರುಸುಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಜ್ಯದ ನಾಲ್ಕು ಕಡೆಗಳಲ್ಲಿ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡರು.

ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮೇ 7 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಪ್ರಚಾರದ ಕಾವು ಬಿರುಸುಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಜ್ಯದ ನಾಲ್ಕು ಕಡೆಗಳಲ್ಲಿ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡರು.

ಬೆಳಗಾವಿ ಸೇರಿದಂತೆ ನಾಲ್ಕು ಕಡೆ ಮೋದಿ ಭರ್ಜರಿ ಪ್ರಚಾರ

ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮೇ 7 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಪ್ರಚಾರದ ಕಾವು ಬಿರುಸುಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಜ್ಯದ ನಾಲ್ಕು ಕಡೆಗಳಲ್ಲಿ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡರು. ಮೊದಲಿಗೆ ಬೆಳಗಾವಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಮೇಲೆ ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಅಪಮಾನ ಮಾಡಲಾಯಿತು. ಚಿಕ್ಕೋಡಿಯಲ್ಲಿ ಜೈನ ಮುನಿಯ ಹತ್ಯೆಯಾಯಿತು. ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಕೊಲೆಯಾಯಿತು. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಗೊಂಡಿತು. ಈ ಸ್ಫೋಟವನ್ನು ಕಾಂಗ್ರೆಸ್​ ಸಿಲೆಂಡರ್ ಬ್ಲಾಸ್ಟ್​ ಎಂದಿತು. ಕಾಂಗ್ರೆಸ್ ಮತಕ್ಕಾಗಿ ತುಷ್ಟೀಕರಣ ರಾಜಕೀಯ ಮಾಡುತ್ತಿದೆ. ಇದರಿಂದ ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಬರಬಾದ್​ ಆಗಲಿದೆ.

ದೇಶವಿರೋಧಿ ಪಿಎಫ್​ಐ ಸಂಘಟನೆ ಕಾಂಗ್ರೆಸ್​ಗೆ ಬೆಂಬಲ ನೀಡಿದೆ ಎಂದು ಕಿಡಿಕಾರಿದರು. ​ ನಂತರ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಮಾತನಾಡಿದ ಮೋದಿ,ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಇಡೀ ರಾಷ್ಟ್ರ ಆತಂಕಗೊಂಡಿದೆ. ಕಾಂಗ್ರೆಸ್ ಸರ್ಕಾರ ಹತಾಶೆಯಿಂದ ರಾಜ್ಯವನ್ನು ಹಾಳು ಮಾಡುತ್ತಿದೆ ಎಂದು ಟೀಕಿಸಿದರು. ಬಳಿಕ ದಾವಣಗೆರೆ ಹಾಗೂ ಹೊಸಪೇಟೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ಪ್ರಧಾನಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಲೈಂಗಿಕ ದೌರ್ಜನ್ಯ ಆರೋಪ: MP ಪ್ರಜ್ವಲ್ ರೇವಣ್ಣ ವಿರುದ್ಧ FIR

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ಮಹಿಳೆಯೊಬ್ಬರು ನೀಡಿದ ದೂರು ಆಧರಿಸಿ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 354A, 354D, 506, 509 ರ ಅಡಿ ಪ್ರಕರಣ ದಾಖಲಾಗಿದೆ. ಪ್ರಕರಣವು ಗಂಭೀರ ಸ್ವರೂಪ ಪಡೆದಿದ್ದು, ಶೀಘ್ರವೇ ತನಿಖಾ ತಂಡ ಪ್ರಜ್ವಲ್ ಅವರ ಹುಡುಕಾಟಕ್ಕೆ ಮುಂದಾಗಲಿದೆ ಎನ್ನಲಾಗುತ್ತಿದೆ.

ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹಾಸನ ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಗರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸಿ ಅಧಿಕಾರಿಗಳನ್ನು ನೇಮಿಸಿದೆ. ಇಂದು ಸರ್ಕಾರ ಹೊರಡಿಸಿರುವ ವಿಶೇಷ ನಡಾವಳಿಯಲ್ಲಿ ಐಪಿಎಸ್‌ ಅಧಿಕಾರಿಗಳಾದ ಬಿ. ಕೆ . ಸಿಂಗ್, ಸುಮನ್‌ ಡಿ. ಪನ್ಸೇಕರ್‌ ಮತ್ತು ಸೀಮಾ ಲಾಟ್ಕರ್‌ ಅವರನ್ನು ತನಿಖೆಗೆ ನೇಮಿಸಿರುವುದಾಗಿ ತಿಳಿಸಿದೆ. ಪ್ರಜ್ವಲ್ ರೇವಣ್ಣ ಅವರು ಸಾವಿರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಮಹಿಳಾ ಸದಸ್ಯರು ಮತ್ತು ಮಹಿಳಾ ಪರ ಸಂಘಟನೆ ಸದಸ್ಯರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಉಪ್ಪು ತಿಂದವರು ನೀರು ಕುಡಿಯಲೇಬೇಕು- ಕುಮಾರಸ್ವಾಮಿ

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಭಾರೀ ಸದ್ದು ಮಾಡುತ್ತಿದೆ. ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳು ಪ್ರತಿಕ್ರಿಯೆ ಕೇಳಿದಾಗ ಜೆಡಿಎಸ್ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು, ತಪ್ಪು ಮಾಡಿದ್ದರೆ ಈ ನೆಲದ ಕಾನೂನು ಎಲ್ಲರಿಗೂ ಒಂದೇ ಶಿಕ್ಷೆಯಾಗುತ್ತದೆ.ಸರ್ಕಾರ ತನಿಖೆಗೆ ವಹಿಸಿದೆ, ತನಿಖೆಯಾಗಿ ವಾಸ್ತವಾಂಶ ಹೊರಬರಲಿ ಎಂದರು. ನಾನಾಗಲಿ ದೇವೇಗೌಡರಾಗಲಿ ಯಾವತ್ತಿಗೂ ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಂತ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಯಾರಾದರೂ ಕಷ್ಟ ಹೇಳಿಕೊಂಡು ಬಂದರೆ ಅವರ ಕಷ್ಟ ಪರಿಹರಿಸಿ ಕಳುಹಿಸಿದ್ದೇವೆ. ನಾವಂತೂ ನಮ್ಮ ಸಾರ್ವಜನಿಕ ಜೀವನದಲ್ಲಿ ಮಹಿಳೆಯರಿಗೆ ಅತ್ಯಂತ ಹೆಚ್ಚಿನ ಗೌರವ ನೀಡಿಕೊಂಡು ಬಂದಿದ್ದೇವೆ ಎಂದರು.ಈ ಮಧ್ಯೆ ಪ್ರಕರಣವನ್ನು ಈಗಾಗಲೇ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಆರಂಭಿಸಿರುವುದನ್ನು ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಸ್ವಾಗತಿಸಿದ್ದಾರೆ.

ಹಕ್ಕಿಜ್ವರ ಭೀತಿ: ಗಡಿಭಾಗಗಳಲ್ಲಿ ಕಟ್ಟೆಚ್ಚರ

ನೆರೆಯ ಕೇರಳ ರಾಜ್ಯದಲ್ಲಿ ಹಕ್ಕಿಜ್ವರ ಭೀತಿ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಅರುಣ್ ಕುಮಾರ್ ಶೆಟ್ಟಿ ಮಾತನಾಡಿ, ಹಕ್ಕಿಜ್ವರ ಹರಡದಂತೆ ಸುಳ್ಯದ ಜಾಲ್ಸೂರು, ಬಂಟ್ವಾಳದ ಸಾರಡ್ಕ, ಉಳ್ಳಾಲದ ತಲಪಾಡಿ ಚೆಕ್ ಪೋಸ್ಟ್ ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಹೇಳಿದ್ದಾರೆ. ಆಲಪ್ಪುಳ ಸುಮಾರು 400 ಕಿಲೊಮೀಟರ್ ದೂರದಲ್ಲಿದ್ದು, ಯಾರೂ ಆತಂಕಕ್ಕೆ ಒಳಗಾಗಬೇಕಾದ ಅಗತ್ಯವಿಲ್ಲ. ಕೇರಳ ಗಡಿಭಾಗ ಸುಳ್ಯದ ಜಾಲ್ಸೂರು, ಬಂಟ್ವಾಳದ ಸಾರಡ್ಕ, ಉಳ್ಳಾಲದ ತಲಪಾಡಿಯಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ.ಜಿಲ್ಲೆಯಲ್ಲಿ ಇದುವರೆಗೆ ಹಕ್ಕಿಜ್ವರದ ಯಾವ ಲಕ್ಷಣವೂ ಕಂಡುಬಂದಿಲ್ಲ. ಆದರೂ ಇಲಾಖೆ ಜಾಗರೂಕವಾಗಿದೆ. ಈ ಸೋಂಕು ಮನುಷ್ಯನಿಂದ ಮನುಷ್ಯನಿಗೆ ಹರಡುವುದಿಲ್ಲ. ಹಕ್ಕಿಗಳಿಂದ ಮಾತ್ರ ಹರಡುತ್ತದೆ. ಆದ್ದರಿಂದ ಯಾರೂ ಗಾಬರಿಯಾಗಬೇಕಾದ ಅಗತ್ಯವಿಲ್ಲ ಎದು ಅವರು ಹೇಳಿದರು.

ಬಾರ್ ನಲ್ಲಿ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಇಬ್ಬರ ಬಂಧನ

ಆನೇಕಲ್‌ನ ಬಾರ್‌ವೊಂದರಲ್ಲಿ ಸ್ನೇಹಿತನಿಗೆ ಮದ್ಯ ಕುಡಿಸಿ ಬೆಂಕಿ ಹಚ್ಚಿದ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಲಾಗಿದೆ. ಸಂತ್ರಸ್ತನನ್ನು ಕೆ ನಾಗೇಶ್ ಎಂದು ಗುರುತಿಸಲಾಗಿದ್ದು, ಬಾರ್‌ನಲ್ಲಿ ಮದ್ಯಪಾನ ಮಾಡುವಾಗ ಕ್ಷುಲ್ಲಕ ವಿಷಯಕ್ಕೆ ತನ್ನ ಮೂವರು ಸ್ನೇಹಿತರೊಂದಿಗೆ ಜಗಳವಾಡಿದ್ದಾನೆ ಎಂದು ವರದಿಯಾಗಿದೆ. ಮಾತಿನ ಚಕಮಕಿಯಲ್ಲಿ ಆರೋಪಿಗಳು ನಾಗೇಶ್ ಮೇಲೆ ಟೇಬಲ್ ಮೇಲಿದ್ದ ಮದ್ಯ ಎರಚಿ, ಸಿಗರೇಟಿನಿಂದ ಬೆಂಕಿ ಹಚ್ಚಿದ್ದಾರೆ. ಬಾರ್‌ಗೆ ಬೆಂಕಿ ಹೊತ್ತಿಕೊಳ್ಳುವ ಮುನ್ನ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಈಮಧ್ಯೆ, ನಾಗೇಶ್ ಅವರನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅವರಿಗೆ ಶೇ 30 ರಷ್ಟು ಸುಟ್ಟ ಗಾಯಗಳಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT