ಪ್ರಿಯಾಂಕ್ ಖರ್ಗೆ 
ರಾಜ್ಯ

ಲೈಂಗಿಕ ಹಗರಣ ಪ್ರಕರಣ: ಪ್ರಜ್ವಲ್ ರೇವಣ್ಣ ದೇಶ ತೊರೆಯಲು ಬಿಜೆಪಿ ಸಹಾಯ ಮಾಡಿದೆ; ಪ್ರಿಯಾಂಕ್ ಖರ್ಗೆ

ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ದೇಶ ತೊರೆದಿದ್ದಾರೆ ಎಂಬ ವರದಿಗಳ ನಡುವೆ, ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಆಪಾದಿತ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಅವರನ್ನು ರಕ್ಷಿಸಿ ಬಿಜೆಪಿಯೇ ವಿದೇಶಕ್ಕೆ ಕಳಿಸಿದೆ ಎನ್ನಲಾಗುತ್ತಿದೆ. ಆರೋಪಿಯನ್ನು ರಕ್ಷಿಸುವುದು ಯಾವ ನ್ಯಾಯ ಎಂದು ಸೋಮವಾರ ಹೇಳಿದ್ದಾರೆ.

ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ದೇಶ ತೊರೆದಿದ್ದಾರೆ ಎಂಬ ವರದಿಗಳ ನಡುವೆ, ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಆಪಾದಿತ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಅವರನ್ನು ರಕ್ಷಿಸಿ ಬಿಜೆಪಿಯೇ ವಿದೇಶಕ್ಕೆ ಕಳಿಸಿದೆ ಎನ್ನಲಾಗುತ್ತಿದೆ. ಆರೋಪಿಯನ್ನು ರಕ್ಷಿಸುವುದು ಯಾವ ನ್ಯಾಯ ಎಂದು ಸೋಮವಾರ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ಹಿಂದಿನ ಮನೆಯ ಸಹಾಯಕರು ನೀಡಿದ ದೂರಿನ ಮೇರೆಗೆ ಭಾನುವಾರ ಲೈಂಗಿಕ ಕಿರುಕುಳ ಪ್ರಕರಣವನ್ನು ದಾಖಲಿಸಲಾಗಿದೆ.

ಎಎನ್‌ಐ ಜೊತೆ ಮಾತನಾಡಿದ ಪ್ರಿಯಾಂಕ್ ಖರ್ಗೆ, 'ಅವರು (ಬಿಜೆಪಿ) ಪ್ರಜ್ವಲ್ ರೇವಣ್ಣ ದೇಶದಿಂದ ಪಲಾಯನ ಮಾಡಿದ್ದಾರೆ ಎಂದು ಖಚಿತಪಡಿಸಿದ್ದಾರೆ. ಇಂದು, ವದಂತಿಗಳು ಹರಿದಾಡುತ್ತಿರುವಂತೆ ಅವರು ದೇಶವನ್ನು ತೊರೆದಿದ್ದರೆ, ಅವರು ಹೇಗೆ ದೇಶವನ್ನು ತೊರೆದರು? ಅದಕ್ಕೆ ಸಹಕರಿಸಿದವರು ಯಾರು? ಈ ನಿಟ್ಟಿನಲ್ಲಿ ಬಿಜೆಪಿಯನ್ನು ನಾನು ನೇರವಾಗಿ ದೂಷಿಸುತ್ತೇನೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ರೇವಣ್ಣ ಅವರನ್ನು ಮತ್ತೊಮ್ಮೆ ಕಣಕ್ಕಿಳಿಸಿದ್ದಕ್ಕಾಗಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ಈ ಬಗ್ಗೆ ಅವರ ಮೌನವನ್ನು ಪ್ರಶ್ನಿಸಿದರು.

'ಪ್ರಜ್ವಲ್ ರೇವಣ್ಣ ಅವರಿಂದ ಸಾವಿರಾರು ಮಹಿಳೆಯರು ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಾರೆ ಎಂಬ ಮಾಹಿತಿ ಇದೆ. ಅವರೆಲ್ಲ ಹಿಂದೂ ಮಹಿಳೆಯರೇ ಆಗಿದ್ದು, ಅವರಿಗೆ ನ್ಯಾಯ ಕೊಡಿಸಬೇಕು ಎಂದು ಬಿಜೆಪಿಯವರಿಗೆ ಅನಿಸುತ್ತಿಲ್ಲವೇ. ಜನವರಿಯಲ್ಲಿಯೇ ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪತ್ರ ಬರೆದು ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಬಗ್ಗೆ ತಿಳಿಸಿದ್ದರು. ಆದರೂ, ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ಕೊಡಲು ಮೋದಿ ಒಪ್ಪಿಕೊಂಡಿದ್ದು ಹೇಗೆ' ಎಂದು ಪ್ರಶ್ನಿಸಿದರು.

ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣದಲ್ಲಿ ಪ್ರತಿ ಜಿಲ್ಲೆ, ತಾಲ್ಲೂಕುಗಳಲ್ಲಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ನಾಯಕರು ಹಾಸನ ಘಟನೆಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ಕುಳಿತಿರುವುದು ಏಕೆ? ಹುಬ್ಬಳ್ಳಿ ನೇಹಾ ಕೊಲೆ ಸಮಯದಲ್ಲಿ ಮಾಡಿದಂತೆ ಬಿಜೆಪಿ ಏಕೆ ಪ್ರತಿಭಟನೆ ಮಾಡುತ್ತಿಲ್ಲ? ಎಂದರು.

ಎಫ್ಐಆರ್ ದಾಖಲಿಸದ ಕೂಡಲೇ ನಮ್ಮ ಸರ್ಕಾರ ಎಸ್ಐಟಿ ರಚಿಸಿದ್ದು, ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಿದೆ. ಆದರೆ, ಈ ವಿಚಾರದಲ್ಲಿ ಬಿಜೆಪಿಯವರು ಮೌನ ತಾಳಿರುವುದು ಬಹಳ ಆತಂಕಕಾರಿಯಾಗಿದೆ ಎಂದು ಹೇಳಿದರು.

ಇಂದು ಮುಂಜಾನೆ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಅವರು ಪಕ್ಷದ ಅಧ್ಯಕ್ಷ ಎಚ್‌ಡಿ ದೇವೇಗೌಡರಿಗೆ ಪತ್ರ ಬರೆದು ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕೆಂದು ಒತ್ತಾಯಿಸಿದರು.

ಎಚ್‌ಡಿ ದೇವೇಗೌಡರ ಮೊಮ್ಮಗನ ಉಚ್ಚಾಟನೆಯಿಂದ ಪಕ್ಷಕ್ಕಾಗುವ ಮತ್ತಷ್ಟು ಮುಜುಗರದಿಂದ ಪಾರು ಮಾಡಬಹುದು ಎಂದು ಕಂದಕೂರ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT