ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿರುವ ಮಹಿಳೆ. 
ರಾಜ್ಯ

ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿ ವಾಲ್’ಪೇಪರ್’ನಲ್ಲಿ ಸಿಎಂ ಫೋಟೋ ಹಾಕಿದ ಮಹಿಳೆ; ಸಾರ್ಥಕವಾಯ್ತು ಎಂದ ಸಿದ್ದರಾಮಯ್ಯ

ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು ಮಹಿಳೆಯೊಬ್ಬರು ಮೊಬೈಲ್‌ ಖರೀದಿಸಿದ್ದು, ವಾಲ್‌ಪೇಪರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪೋಟೋ ಹಾಕಿಕೊಂಡು ಸಂತಸ ವ್ಯಕ್ತಪಡಿಸಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ಥಕತೆಯ ಮನೋಭಾವ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು ಮಹಿಳೆಯೊಬ್ಬರು ಮೊಬೈಲ್‌ ಖರೀದಿಸಿದ್ದು, ವಾಲ್‌ಪೇಪರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪೋಟೋ ಹಾಕಿಕೊಂಡು ಸಂತಸ ವ್ಯಕ್ತಪಡಿಸಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ಥಕತೆಯ ಮನೋಭಾವ ವ್ಯಕ್ತಪಡಿಸಿದ್ದಾರೆ.

ಹಾವೇರಿ ಕಾಂಗ್ರೆಸ್‌ ಸಮಾವೇಶದಲ್ಲಿ ಮಹಿಳೆಯೊಬ್ಬರು ತಾವು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣ ಕೂಡಿಟ್ಟು ಮೊಬೈಲ್ ಖರೀದಿ ಮಾಡಿರುವುದಾಗಿ ಹೇಳಿಕೊಂಡಿದ್ದು, ಮೊಬೈಲ್ ವಾಲ್ ಪೇಪರ್ ನಲ್ಲಿ ಸಿಎಂ ಹಾಕಿಕೊಂಡಿರುವುದನ್ನು ತೋರಿಸಿದ್ದಾರೆ.

ಈ ಕುರಿತ ಫೋಟೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಸಾರ್ಥಕತೆಯ ಮನೋಭಾವ ವ್ಯಕ್ತಪಡಿಸಿದ್ದಾರೆ.

ಹಾವೇರಿ ಜಿಲ್ಲೆಯ ನಿವಾಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯೊಬ್ಬರು ಪ್ರತಿ ತಿಂಗಳ ಹಣವನ್ನು ಕೂಡಿಟ್ಟು ತಮ್ಮ ಇಷ್ಟದ ಮೊಬೈಲ್ ಖರೀದಿಸಿ, ನನ್ನ ಫೋಟೋವನ್ನು ವಾಲ್ ಪೇಪರ್‌ನಲ್ಲಿರಿ ಸಂಭ್ರಮಿಸಿದ್ದಾರೆ. ಮೊನ್ನೆ ಹಾವೇರಿಯಲ್ಲಿ ನಡೆದ ಸಮಾವೇಶಕ್ಕೆ ಹೊಸ ಮೊಬೈಲ್‌ನೊಂದಿಗೆ ಬಂದಾಗ ಅವರ ಖುಷಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗೃಹಲಕ್ಷ್ಮಿ ಯೋಜನೆ ಬಡವರ ಮನೆಯ ಹಸಿವು ನೀಗಿಸುತ್ತಿರುವುದು ಮಾತ್ರವಲ್ಲ, ನಾಡಿನ ಲಕ್ಷಾಂತರ ತಾಯಂದಿರು, ಅಕ್ಕತಂಗಿಯರ ಕನಸುಗಳನ್ನು ನನಸಾಗಿಸಿದೆ. ಕೆಲವರು ಟಿ.ವಿ ಖರೀದಿಸಿದರೆ, ಮತ್ತೆ ಕೆಲವರು ಮೊಬೈಲ್, ಫ್ರಿಡ್ಜ್, ಬಟ್ಟೆಬರೆ ಹೀಗೆ ತಿಂಗಳ ಹಣ ಕೂಡಿಟ್ಟು ಇಷ್ಟದ ವಸ್ತು ಖರೀದಿಸುತ್ತಿದ್ದಾರೆ. ಬಡಜನರ ಬದುಕಿಗೆ ನೆರವಾಗಬೇಕು, ನೊಂದವರ ಬಾಳಲ್ಲಿ ನೆಮ್ಮದಿ ಮೂಡಿಸಬೇಕು ಎಂಬ ತನ್ನ ಉದ್ದೇಶವನ್ನು ಗೃಹಲಕ್ಷ್ಮಿ ಯೋಜನೆ ಈಡೇರಿಸುತ್ತಿದೆ. ಯೋಜನೆ ಜಾರಿಗೆಕೊಟ್ಟ ನನ್ನಲ್ಲಿ ಸಾರ್ಥಕಭಾವ ಮೂಡಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT