ಸಮೃದ್ದಿ ಮಂಜುನಾಥ್ 
ರಾಜ್ಯ

ಜೆಡಿಎಸ್ ಶಾಸಕರ ಭವಿಷ್ಯ ಬೇಕೋ? ಕುಟುಂಬದ ರೇವಣ್ಣ -ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ: ಸಮೃದ್ಧಿ ಮಂಜುನಾಥ್

ಜೆಡಿಎಸ್ ನ 19 ಶಾಸಕರ ಭವಿಷ್ಯ ಬೇಕೋ? ತಮ್ಮ ಕುಟುಂಬದ ರೇವಣ್ಣ ಹಾಗೂ ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ ಎಂದು ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಆಗ್ರಹಿಸಿದ್ದಾರೆ.

ಬೆಂಗಳೂರು: ಜೆಡಿಎಸ್ ನ 19 ಶಾಸಕರ ಭವಿಷ್ಯ ಬೇಕೋ? ತಮ್ಮ ಕುಟುಂಬದ ರೇವಣ್ಣ ಹಾಗೂ ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ ಎಂದು ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಆಗ್ರಹಿಸಿದ್ದಾರೆ.

ಈ ಸಂಬಂಧ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, 'ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂಥ ಕೆಲಸ ಮಾಡಿದವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕು' ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ 'ಹಾಸನದ ಲೀಲೆಗಳು' ಮಾಧ್ಯಮಗಳಲ್ಲಿ ಪ್ರಜ್ವಲಿಸುತ್ತಿರುವುದು ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿ ರಾಜ್ಯದಲ್ಲೆಡೆ ಮುಜುಗರಕ್ಕೆ ಒಳಗಾಗಿರುವುದಲ್ಲದೆ ಹೊರಗಡೆ ಪಕ್ಷದ ಹೆಸರು ಹೇಳಲು ಸಹ ಹೇಸಿಗೆ ಎನಿಸುವಂಥ ಸ್ಥಿತಿಗೆ ತಲುಪಿದೆ' ಎಂದಿದ್ದಾರೆ‌.

ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದ ದಯನೀಯ ಪರಿಸ್ಥಿತಿ ಮೊದಲ ಬಾರಿ ಶಾಸಕನಾಗಿರುವ ನನಗೆ ಬಂದಿದೆ. ಈ ಕಷ್ಟಕರ ಸನ್ನಿವೇಶಗಳು ಎದುರಾಗುತ್ತಿದ್ದರೆ, ಸಾಮಾನ್ಯ ಕಾರ್ಯಕರ್ತರ ಪರಿಸ್ಥಿತಿ ಯೋಚಿಸಿ' ಎಂದು ಪ್ರಶ್ನಿಸಿದ್ದಾರೆ.

ಪಕ್ಷದ ವರಿಷ್ಠ, ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ರಾಜ್ಯ ಅಧ್ಯಕ್ಷ ಎಚ್.ಡಿ.ಕುಮಾರಣ್ಣ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕಾದ ಸಮಯ ಇದಾಗಿದೆ' ಎಂದು ಹೇಳಿದ್ದಾರೆ. ಆರೋಪ ಸ್ಥಾನದಲ್ಲಿರುವ ರೇವಣ್ಣ ಮತ್ತು ಪ್ರಜ್ವಲ್ ಅವರನ್ನು 24ಗಂಟೆಗಳಲ್ಲಿ ಪಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಸಿದ್ಧಾಂತಗಳನ್ನು ಉಳಿಸಿ ಕಾರ್ಯಕರ್ತರನ್ನು, ನಮ್ಮನ್ನು ಮುಜುಗರದಿಂದ ಪಾರು ಮಾಡಿ' ಎಂದು ಕೋರಿದ್ದಾರೆ.

ತಮ್ಮ ತೀರ್ಮಾನದ ಮೇಲೆ ಪಕ್ಷದ ಮುಂದಿನ ಭವಿಷ್ಯವಿದೆಯೆಂಬುದು ಮತ್ತೊಮ್ಮೆ ತಿಳಿಸಲು ಬಯಸುತ್ತೇನೆ' ಎಂದು ಗರಂ ಆಗಿದ್ದಾರೆ.

ಅಲ್ಲದೆ, ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಪತ್ರ ಬರೆದು ಪ್ರಜ್ವಲ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಒತ್ತಾಯಿಸಿದ್ದಾರೆ. ಅವರನ್ನು ಪಕ್ಷದಿಂದ ಉಚ್ಛಾಟಿಸುವುದರಿಂದ ಪಕ್ಷವನ್ನು ಮತ್ತಷ್ಟು ಮುಜುಗರದಿಂದ ಪಾರು ಮಾಡಿದಂತಾಗುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT