ಮೋಹಿನಿ ಗೌಡ-ಪ್ರಧಾನಿ ಭೇಟಿ 
ರಾಜ್ಯ

ಹಣ್ಣು ವ್ಯಾಪಾರಿ ಮೋಹಿನಿ ಗೌಡ ಭೇಟಿ ಮಾಡಿದ ಪ್ರಧಾನಿ: ಸ್ವಚ್ಛ ಭಾರತದೆಡೆಗಿನ ಕೆಲಸಕ್ಕೆ ಮೆಚ್ಚುಗೆ!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಶಿರಸಿಯಲ್ಲಿ ಹಣ್ಣು ವ್ಯಾಪಾರಿ ಮೋಹಿನಿ ಗೌಡ ಅವರನ್ನು ಭೇಟಿ ಮಾಡಿದ್ದಾರೆ.

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಶಿರಸಿಯಲ್ಲಿ ಹಣ್ಣು ವ್ಯಾಪಾರಿ ಮೋಹಿನಿ ಗೌಡ ಅವರನ್ನು ಭೇಟಿ ಮಾಡಿದ್ದಾರೆ. ಸ್ವಚ್ಛ ಭಾರತ ಅಭಿಯಾನದೆಡೆಗೆ ಮೋಹಿನಿ ಗೌಡ ಅವರ ಕೆಲಸಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಹೆಲಿಪ್ಯಾಡ್ ಗೆ ಆಗಮಿಸುತ್ತಿದ್ದಂತೆಯೇ ಪ್ರಧಾನಿ ಮೋದಿ ಮೋಹಿನಿ ಗೌಡ ಅವರನ್ನು ಭೇಟಿ ಮಾಡಿದ್ದಾರೆ.

ಮೋಹಿನಿ ಗೌಡ-ಪ್ರಧಾನಿ ಮೋದಿ ಭೇಟಿ ಫೋಟೋ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುತ್ತಿದೆ. ನೆಟಿಜನ್ ಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಅಂಕೋಲಾ ಬಸ್ ಸ್ಟ್ಯಾಂಡ್ ನಲ್ಲಿ ಮೋಹಿನಿ ಗೌಡ ಅವರು ಹಣ್ಣು ವ್ಯಾಪಾರಿಯಾಗಿದ್ದು, ಆಕೆ ಹಣ್ಣುಗಳನ್ನು ಎಲೆಗಳಲ್ಲಿ ಸುತ್ತಿ ಮಾರಾಟ ಮಾಡುವುದರಿಂದ ಖ್ಯಾತಿ ಪಡೆದುಕೊಂಡಿದ್ದರು. ಅಷ್ಟೇ ಅಲ್ಲದೇ ಆಕೆ ಯಾರಾದರೂ ಹಣ್ಣುಗಳನ್ನು ತಿಂದ ನಂತರ ಎಲೆಗಳನ್ನು ಎಸೆದರೆ, ಅವಳು ಅವುಗಳನ್ನು ಎತ್ತಿಕೊಂಡು ಕಸದ ತೊಟ್ಟಿಯಲ್ಲಿ ವಿಲೇವಾರಿ ಮಾಡುತ್ತಾರೆ.

ಪ್ರಸ್ತುತ ಕರ್ನಾಟಕದಲ್ಲಿ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ಮೋದಿ, ಸ್ವಚ್ಛ ಭಾರತ ಮಿಷನ್‌ನಲ್ಲಿ ಮೋಹಿನಿ ಗೌಡ ಅವರ ಕೊಡುಗೆಗಳನ್ನು ಪ್ರಶಂಸಿದರು.

"ಪ್ರಧಾನಿ ಮೋದಿಯವರ ಸ್ವಚ್ಛ ಭಾರತ ಅಭಿಯಾನದ ದೃಷ್ಟಿಗೆ ಜನರು ಕೊಡುಗೆ ನೀಡುವ ಇಂತಹ ಉದಾಹರಣೆಗಳು ಇತರರಿಗೆ ಪ್ರೇರಕ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತವೆ" ಎಂದು ಎಕ್ಸ್‌ನಲ್ಲಿ ಓರ್ವ ವ್ಯಕ್ತಿ ಬರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

SCROLL FOR NEXT