ಎಚ್ ಡಿ ರೇವಣ್ಣ 
ರಾಜ್ಯ

ನಾನೆಲ್ಲೂ ಓಡಿ ಹೋಗಿಲ್ಲ, ನನ್ನ ಹಾಗೂ ಪುತ್ರನ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ರಾಜಕೀಯ ಪ್ರೇರಿತ: ಎಚ್ ಡಿ ರೇವಣ್ಣ

ತಮ್ಮ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನಾಯಕ, ಶಾಸಕ ಎಚ್.ಡಿ. ರೇವಣ್ಣ ಅವರು ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು: ತಮ್ಮ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ, ಶಾಸಕ ಎಚ್.ಡಿ. ರೇವಣ್ಣ ಅವರು, ಇಂಥ ಆರೋಪಗಳು ದೇವೇಗೌಡರ ಕುಟುಂಬಕ್ಕೆ ಹೊಸದಲ್ಲ. ಇದೆಲ್ಲಾ ರಾಜಕೀಯ ಪ್ರೇರಿತ ಎಂದು ಸೋಮವಾರ ಹೇಳಿದ್ದಾರೆ.

ಇಂದು ನಗರದಲ್ಲಿ ತಮ್ಮ ಹಾಗೂ ಪುತ್ರ ಪ್ರಜ್ವಲ್ ವಿರುದ್ಧದ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ರೇವಣ್ಣ, ಸರ್ಕಾರ ಅವರದ್ದೇ ತನಿಖೆ ಮಾಡಲಿ. ಕಾನೂನಿನ ಪ್ರಕಾರ ಏನಿದೆಯೋ ಹಾಗೆ ಆಗಲಿ ಎಂದರು.

ಇದೇ ವೇಳೆ ತಮ್ಮ ಮಗ ಪ್ರಜ್ವಲ್ ನಾಪತ್ತೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ರೇವಣ್ಣ, ತಾವೆಲ್ಲೂ ಓಡಿ ಹೋಗಿಲ್ಲ. ಆತ ವಿಚಾರಣೆಗೆ ಕರೆದರೆ ಬರುತ್ತಾನೆ ಎಂದಿದ್ದಾರೆ.

ನಾನು ಎಲ್ಲೂ ಓಡಿ ಹೋಗಿಲ್ಲ. ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಿ. ನಾವು ಕಾನೂನು ರೀತಿ ಈ ಪ್ರಕರಣವನ್ನು ಎದುರಿಸುತ್ತೇವೆ. ಪ್ರಜ್ವಲ್ ವಿದೇಶಕ್ಕೆ ಹೋಗಬೇಕಿತ್ತು ಹೋಗಿದಾನೆ. ಕರೆದರೆ ಬರುತ್ತಾನೆ. ತನಿಖೆಗೆ ಕರೆದಾಗ ಪ್ರಜ್ವಲ್ ಬರ್ತಾನೆ ಎಂದು ಎಚ್.ಡಿ. ರೇವಣ್ಣ ಹೇಳಿದ್ದಾರೆ.

ದೆವೇಗೌಡರ ಕುಟುಂಬದ ವಿರುದ್ಧ ಆರೋಪಗಳು ಹೊಸದಲ್ಲ. ಮೊದಲಿಂದಲೂ ಇಂಥವನ್ನು ಎದುರಿಸಿದ್ದೇವೆ. ದೇವೇಗೌಡರ ಕುಟುಂಬದ ಮೇಲೆ ಲೋಕಾಯುಕ್ತ, ಸಿಐಡಿ ತನಿಖೆ ಇವೆಲ್ಲವನ್ನೂ ಎದುರಿಸಿದ್ದೇವೆ ಎಂದು ಹೊಳೆನರಸೀಪುರ ಶಾಸಕರಾದ ರೇವಣ್ಣ ತಿಳಿಸಿದ್ದಾರೆ.

ಕಳೆದ ವಾರ ಚುನಾವಣೆಗೆ ಮುನ್ನ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ಹಲವು ವಿಡಿಯೋಗಳಿದ್ದ ಪೆನ್ ಡ್ರೈವ್ ಬೆಳಕಿಗೆ ಬಂದಿತ್ತು. ನೂರಾರು ಮಹಿಳೆಯರ ಜೊತೆ ಪ್ರಜ್ವಲ್ ರಾಸಲೀಲೆ ನಡೆಸಿದ ವಿಡಿಯೋಗಳು ಇವು. ಕೆಲಸದ ಆಮಿಷ, ಇತ್ಯಾದಿ ವಿಚಾರಗಳಲ್ಲಿ ಮಹಿಳೆಯರನ್ನು ಲೈಂಗಿಕವಾಗಿ ಪ್ರಜ್ವಲ್ ರೇವಣ್ಣ ದುರುಪಯೋಗಪಡಿಸಿಕೊಂಡಿದ್ದಾರೆನ್ನಲಾಗಿದೆ.

ಎಚ್ ಡಿ ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯದ ಆರೋಪಗಳಿವೆ. ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ ಅಪ್ಪ ಮತ್ತು ಮಗ ಪ್ರಮುಖ ಆರೋಪಿಗಳಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ: ಇಬ್ಬರಿಗೆ ಗಾಯ, ಇರಾನ್ ರಾಯಭಾರಿಗೆ ಅಜರ್ ಬೈಜಾನ್ ಸಮನ್ಸ್!

T20 World Cup 2026: 2ನೇ ಸೆಮಿಫೈನಲ್ ಕದನ, ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಇಂಗ್ಲೆಂಡ್!

ಮೋದಿ ಟೀಕೆ, ಪದೇ ಪದೇ ಗ್ಯಾರಂಟಿಗಳ ಉಲ್ಲೇಖ ಸಿದ್ದರಾಮಯ್ಯ ಬಜೆಟ್‌ನ ಮುಖ್ಯಾಂಶಗಳು: ಆರ್ ಅಶೋಕ್

ನಿತೀಶ್ ಕುಮಾರ್​​​ಗೆ ರಾಷ್ಟ್ರ ರಾಜಕಾರಣಕ್ಕೆ ಸ್ವಾಗತ; ಬಿಹಾರ ಸಿಎಂ ಆಗಿ "ಅದ್ಭುತ" ಅವಧಿ: ಅಮಿತ್ ಶಾ

2025 ಆರ್ಥಿಕ ವರ್ಷದಲ್ಲಿ ಬರೋಬ್ಬರಿ 6,769 ಕೋಟಿ ರೂ. ಆದಾಯ ತೋರಿಸಿದ ಬಿಜೆಪಿ!

SCROLL FOR NEXT