ಸಾಂದರ್ಭಿಕ ಚಿತ್ರ 
ರಾಜ್ಯ

ಚಾಮರಾಜನಗರದ ಇಂಡಿಗನತ್ತ ಮತಗಟ್ಟೆ: ಮರು ಮತದಾನ ಪ್ರಗತಿಯಲ್ಲಿ

ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹನೂರಿನ ಇಂಡಿಗನಾಥ ಮತಗಟ್ಟೆಯಲ್ಲಿ ಸೋಮವಾರ ವ್ಯಾಪಕ ಭದ್ರತಾ ವ್ಯವಸ್ಥೆಗಳ ನಡುವೆ ಮರು ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ.

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹನೂರಿನ ಇಂಡಿಗನಾಥ ಮತಗಟ್ಟೆಯಲ್ಲಿ ಸೋಮವಾರ ವ್ಯಾಪಕ ಭದ್ರತಾ ವ್ಯವಸ್ಥೆಗಳ ನಡುವೆ ಮರು ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ.

ಚಾಮರಾಜನಗರ ಜಿಲ್ಲೆಯ ಇಂಡಿಗನಾಥ ಗ್ರಾಮದ ಮತಗಟ್ಟೆಯಲ್ಲಿ ಎಪ್ರಿಲ್ 26ರಂದು ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ಧ್ವಂಸಗೊಳಿಸಲಾಗಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮರು ಮತದಾನಕ್ಕೆ ಆದೇಶಿಸಿತ್ತು. ಜಿಲ್ಲಾಡಳಿತದ ಪ್ರಕಾರ, ಸಮರ್ಪಕ ಮೂಲಸೌಕರ್ಯ ಅಭಿವೃದ್ಧಿಯ ಕೊರತೆಯನ್ನು ಮುಂದಿಟ್ಟು ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ಈ ಹಿಂದೆ ನಿರ್ಧರಿಸಿದ್ದರು. ಆದರೆ, ಸ್ಥಳೀಯ ಅಧಿಕಾರಿಗಳ ಭರವಸೆ ಮತ್ತು ಪ್ರಯತ್ನದ ನಂತರ ಮತದಾನ ನಡೆಯುತ್ತಿದೆ.

ಏಪ್ರಿಲ್ 26 ರಂದು ಒಂದು ಗುಂಪು ಮತದಾನ ಮಾಡಲು ಬಯಸಿದ್ದರೆ, ಇನ್ನೊಂದು ಗುಂಪು ಬಹಿಷ್ಕಾರಕ್ಕೆ ಉತ್ಸುಕವಾಗಿತ್ತು, ಇದು ಅವರ ನಡುವೆ ಘರ್ಷಣೆಗೆ ಕಾರಣವಾಗಿ ಇವಿಎಂಗಳನ್ನು ಹಾನಿಗೊಳಿಸಿದರು ಮತ್ತು ಕಲ್ಲು ತೂರಾಟದಲ್ಲಿ ತೊಡಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಾಮರಾಜನಗರ ಕ್ಷೇತ್ರದ ಚುನಾವಣಾಧಿಕಾರಿ ಮತ್ತು ಸಾಮಾನ್ಯ ವೀಕ್ಷಕರು ಸಲ್ಲಿಸಿದ ವರದಿಗಳ ಆಧಾರದ ಮೇಲೆ ಮತ್ತು ಎಲ್ಲಾ ವಸ್ತುಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು, ಹನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 146ರಲ್ಲಿ ಶುಕ್ರವಾರ ನಡೆದ ಮತದಾನವನ್ನು ಶುಕ್ರವಾರ ಅನೂರ್ಜಿತವಾಗಿತ್ತುಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿರುವ ಇಸಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT