ಸಂಗ್ರಹ ಚಿತ್ರ 
ರಾಜ್ಯ

ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನ: ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರಿಂದ ಸಂತಾಪ

ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಹೃದಯಾಘಾತದಿಂದ ಸೋಮವಾರ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಬೆಂಗಳೂರು: ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಹೃದಯಾಘಾತದಿಂದ ಸೋಮವಾರ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿಯವರು, ಚಾಮರಾಜನಗರದ ಹಿರಿಯ ನಾಯಕ ಹಾಗೂ ಸಂಸದರಾದ ಶ್ರೀ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನ ಅತೀವ್ರ ನೋವು ತಂದಿದೆ. ಶ್ರೀನಿವಾಸ್ ಪ್ರಸಾದ್ ಅವರು ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದರು, ಬಡವರು, ದೀನದಲಿತರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರು ತಮ್ಮ ವಿವಿಧ ಸಮಾಜ ಸೇವೆಗಾಗಿ ಬಹಳ ಜನಪ್ರಿಯರಾಗಿದ್ದರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೋಸ್ಟ್ ಮಾಡಿ, ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ.

ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ.

ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವನ್ನು ಉಳಿಸಿಕೊಂಡಿದ್ದೆವು. ಇತ್ತೀಚೆಗಷ್ಟೇ ನಾನು ಭೇಟಿಯಾಗಿದ್ದ ಸಂದರ್ಭದಲ್ಲಿ ನಾವು ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡೆವು. ಆಗ ಗೆಲುವಾಗಿದ್ದ ಪ್ರಸಾದ್ ಇಷ್ಟು ಶೀಘ್ರ ನಮ್ಮನ್ನು ಅಗಲಿ ಹೋಗುತ್ತಾರೆ ಎಂಬ ನಿರೀಕ್ಷೆಯೇ ಇರಲಿಲ್ಲ.

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರವಾದ ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆಂದು ಹೇಳಿದ್ದಾರೆ,

ಹೆಚ್'ಡಿ.ದೇವೇಗೌಡ ಅವರು ಪೋಸ್ಟ್ ಮಾಡಿ, ಮಾಜಿ ಕೇಂದ್ರ ಸಚಿವರು ಹಾಗೂ ಚಾಮರಾಜನಗರದ ಲೋಕಸಭಾ ಕ್ಷೇತ್ರದ ಸದಸ್ಯರಾದ ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ವಾರ್ತೆ ಕೇಳಿ ಬಹಳ ದುಃಖವಾಗಿದೆ. ಅವರ ಅಗಲಿಕೆ ರಾಜಕೀಯಕ್ಕೆ‌ ತುಂಬಲಾರದ ನಷ್ಟ. ಅವರ ಅಗಲಿಕೆ ಭರಿಸುವ ಶಕ್ತಿಯನ್ನು ಕುಟುಂಬವರಿಗೆ ಮತ್ತು ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿಯವರು ಪೋಸ್ಟ್ ಮಾಡಿ, ಸರಳತೆ ಸಜ್ಜನಿಕೆಯ ಪ್ರಾಮಾಣಿಕ ರಾಜಕಾರಣಿ ಹಾಗೂ ಕೇಂದ್ರದ ಮಾಜಿ ಸಚಿವರು ಆಗಿದ್ದ ಶ್ರೀ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನ ನನಗೆ ನೋವುಂಟು ಮಾಡಿದೆ. ತಮ್ಮ ಜೀವಿತಾವಧಿಯಲ್ಲಿ 14 ಚುನಾವಣೆಗಳನ್ನು ಎದುರಿಸಿದ್ದ ಅವರ ರಾಜಕೀಯ ಜೀವನ ಮಾದರಿಯ ಹಾದಿ. ಆರು ಅವಧಿಗೆ ಸಂಸದರಾಗಿ, ಎರಡು ಅವಧಿಗೆ ಶಾಸಕರಾಗಿ ಅನನ್ಯ ಸೇವೆ ಸಲ್ಲಿಸಿರುವ ಶ್ರೀ ಪ್ರಸಾದ್ ಅವರು; 27 ವರ್ಷಗಳ ಸುದೀರ್ಘ ಸಂಸತ್ ಸದಸ್ಯರಾಗಿ 7 ಪ್ರಧಾನಿಗಳನ್ನು ಕಂಡಿದ್ದರು. ಅವರು ಅಪರೂಪದಲ್ಲಿ ಅಪರೂಪದ ಜನನಾಯಕರಾಗಿದ್ದರು. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆ ಭಗವಂತ ಕರುಣಿಸಲಿ ಹಾಗೂ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.

ಯಡಿಯೂರಪ್ಪ ಅವರು ಪೋಸ್ಟ್ ಮಾಡಿ, ಹಿರಿಯ ನಾಯಕರು, ಚಾಮರಾಜನಗರ ಕ್ಷೇತ್ರದ ಸಂಸದರು, ಆತ್ಮೀಯರಾದ ಶ್ರೀ ವಿ.ಶ್ರೀನಿವಾಸ್ ಪ್ರಸಾದ್ ವಿಧಿವಶರಾದ ಸುದ್ದಿ ದಿಗ್ಭ್ರಮೆ ಮೂಡಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ಅವರನ್ನು ಭೇಟಿಯಾಗಿದ್ದು, ಈಗ ಅವರು ನಮ್ಮೊಂದಿಗೆ ಇಲ್ಲ ಎನ್ನುವುದನ್ನು ನಂಬಲಾಗುತ್ತಿಲ್ಲ. ರಾಜ್ಯ ಹಾಗೂ ದೇಶದ‌ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅವರು ಪ್ರಭಾವಿ ದಲಿತ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ನಾಡು ಒಬ್ಬ ಹಿರಿಯ ನೇತಾರರನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಅವರ ಕುಟುಂಬ, ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT