ಬೆಂಗಳೂರು: ಮಂಗಳವಾರ ಬೆಂಗಳೂರಿನ ಹೊರವಲಯದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಯಲ್ಲಿ ಒಂಟಿಯಾಗಿದ್ದ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮನೆ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕಿ ಪೋಷಕರು ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಆಕೆ ಒಂಟಿಯಾಗಿರುವುದನ್ನು ಗಮನಿಸಿದ ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ಕುಟುಂಬವು ಒಂದು ತಿಂಗಳ ಹಿಂದೆ ಆ ಮನೆಯಲ್ಲಿ ಬಾಡಿಗೆಗೆ ಇರಲು ಬಂದಿತ್ತು.
ಸಂತ್ರಸ್ತೆಯನ್ನು ನೆಲಮಂಗಲ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸರು ಆರೋಪಿ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.