ರೈಲ್ವೆ ಟಿಕೆಟ್ ಖರೀದಿಗೆ ಕಾದು ಕುಳಿತಿರುವ ಜನರು  
ರಾಜ್ಯ

ಟಿಕೆಟ್ ಕಾಯ್ದಿರಿಸಿದ ಬೋಗಿಗಳಲ್ಲಿ ಪ್ರಯಾಣಿಕರ ದಟ್ಟಣೆ: ವಿಶೇಷ ತಂಡ ರಚಿಸಿದ ರೈಲ್ವೆ ಇಲಾಖೆ

ರೈಲುಗಳಲ್ಲಿ ಟಿಕೆಟ್ ಕಾಯ್ದಿರಿಸಿದ ಬೋಗಿಗಳಲ್ಲಿ ಒತ್ತಡ ನಿಭಾಯಿಸಲು ವಾಣಿಜ್ಯ ವಿಭಾಗದ ಸಿಬ್ಬಂದಿ ಮತ್ತು ರೈಲ್ವೆ ರಕ್ಷಣಾ ಪಡೆ ಪೊಲೀಸರನ್ನು ಒಳಗೊಂಡ ವಿಶೇಷ ತಂಡಗಳನ್ನು ರಚಿಸಲಾಗಿದೆಚ

ಬೆಂಗಳೂರು: ದೇಶಾದ್ಯಂತ ರೈಲುಗಳಲ್ಲಿ ಕಾಯ್ದಿರಿಸಿದ ಬೋಗಿಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ರೈಲ್ವೆ ಇಲಾಖೆ ಮತ್ತು ಬೆಂಗಳೂರು ನಗರದ ಪ್ರಮುಖ ನಿಲ್ದಾಣಗಳಲ್ಲಿನ ವಾಸ್ತವ ಪರಿಸ್ಥಿತಿಗಳ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಇತ್ತೀಚೆಗೆ ವ್ಯಕ್ತವಾಗಿರುವ ಪ್ರತಿಕ್ರಿಯೆಗಳಿಂದ ಎಚ್ಚೆತ್ತು ವಿಶೇಷ ತಂಡ ರಚಿಸಿದೆ.

ದೂರದ ಊರುಗಳಿಗೆ ಪ್ರಯಾಣ ಮಾಡುವ ರೈಲುಗಳಲ್ಲಿ ಭಾರೀ ಜನಸಂದಣಿಯನ್ನು ನಿರ್ವಹಿಸಲು ವಿಶೇಷ ತಂಡಗಳನ್ನು ರಚಿಸಲು ರೈಲ್ವೆ ಇಲಾಖೆಯನ್ನು ಈ ಘಟನೆ ಪ್ರೇರೇಪಿಸಿದೆ. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ನಿಲ್ದಾಣ, ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್, ಯಶವಂತಪುರ ಮತ್ತು ಯಲಹಂಕ ರೈಲು ನಿಲ್ದಾಣಗಳಲ್ಲಿ ಇಂತಹ ತಂಡಗಳು ಕಾರ್ಯನಿರ್ವಹಿಸುತ್ತಿವೆ.

ಸಾಮಾನ್ಯವಾಗಿ ಬೇಸಿಗೆ ರಜೆಯಲ್ಲಿ ರೈಲುಗಳಲ್ಲಿ ಪ್ರಯಾಣಿಕರ ಒತ್ತಡ ಹೆಚ್ಚಾಗಿರುತ್ತದೆ. ಈ ವರ್ಷ ಸಾರ್ವತ್ರಿಕ ಚುನಾವಣೆ ಮತ್ತು ಬೆಂಗಳೂರಿನಲ್ಲಿ ವಲಸಿಗರು ಮತದಾನ ಮಾಡಲು ಹೆಚ್ಚಾಗಿ ಪ್ರಯಾಣಿಸುತ್ತಿರುವುದರಿಂದ ಹಾಗೂ ಅನೇಕ ಭಾಗಗಳಲ್ಲಿ ಮದುವೆ ಮತ್ತು ಇನ್ನಿತರ ಶುಭ ಸಮಾರಂಭಗಳು ಇರುವುದರಿಂದ ಜನಸಂದಣಿ ಹೆಚ್ಚಾಗಿದೆ.

ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೇಶ್ ಮೋಹನ್ TNIE ಜೊತೆ ಮಾತನಾಡಿ, ರೈಲುಗಳಲ್ಲಿ ಟಿಕೆಟ್ ಕಾಯ್ದಿರಿಸಿದ ಬೋಗಿಗಳಲ್ಲಿ ಒತ್ತಡ ನಿಭಾಯಿಸಲು ವಾಣಿಜ್ಯ ವಿಭಾಗದ ಸಿಬ್ಬಂದಿ ಮತ್ತು ರೈಲ್ವೆ ರಕ್ಷಣಾ ಪಡೆ ಪೊಲೀಸರನ್ನು ಒಳಗೊಂಡ ವಿಶೇಷ ತಂಡಗಳನ್ನು ರಚಿಸಿದ್ದೇವೆ. ಪ್ರಯಾಣಿಕರ ಒತ್ತಡದಲ್ಲಿ ದೂರದ ಊರುಗಳಿಗೆ ಸಂಚರಿಸುವ ರೈಲುಗಳನ್ನು ಗುರುತಿಸಲಾಗಿದೆ. ಕಾಯ್ದಿರಿಸಿದ ಕೋಚ್‌ಗಳಲ್ಲಿ ಕಾಯ್ದಿರಿಸದ ಪ್ರಯಾಣಿಕರನ್ನು ಗುರುತಿಸಿ ಸಾಮಾನ್ಯ ಬೋಗಿಗಳಿಗೆ ಕಳುಹಿಸುವುದನ್ನು ನೋಡಿಕೊಳ್ಳುವುದು ತಂಡಗಳ ಪ್ರಮುಖ ಕೆಲಸವಾಗಿದೆ ಎಂದರು.

ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ, ಆಡಳಿತ ವಿಭಾಗದ ಪರೀಕ್ಷಿತ್ ಮೋಹನ್ ಪುರಿಯಾ, "ಟಿಕೆಟ್ ತಪಾಸಣೆಯ ಸಮಯದಲ್ಲಿ ತಂಡದ ಸದಸ್ಯರು ಟಿಟಿಇ ಜೊತೆಯಲ್ಲಿ, ಕಾಯ್ದಿರಿಸಿದ ಬೋಗಿಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುವ ಪ್ರಯಾಣಿಕರನ್ನು ಗುರುತಿಸಬಹುದು. ಬಿಹಾರ ಮತ್ತು ಉತ್ತರ ಪ್ರದೇಶ ಕಡೆಗೆ ಹೋಗುವ ರೈಲುಗಳು ಸಾಮಾನ್ಯವಾಗಿ ಪ್ರಯಾಣಿಕರಿಂದ ತುಂಬಿತುಳುಕುತ್ತವೆ. ಕಾಯ್ದಿರಿಸದ ಕೋಚ್ ಗರಿಷ್ಠ 200 ಪ್ರಯಾಣಿಕರನ್ನು ಹಿಡಿದಿಟ್ಟುಕೊಳ್ಳಬಹುದು. ಆದರೆ ನಾವು ಹೆಚ್ಚಿನ ಸಂಖ್ಯೆಯ ತೆರೆದ ಟಿಕೆಟ್‌ಗಳನ್ನು ಖರೀದಿಸುತ್ತೇವೆ. ನಾವು ಸಾಮಾನ್ಯ ಟಿಕೆಟ್ ನೀಡುವುದನ್ನು ನಿಲ್ಲಿಸಿದರೆ, ಸಾರ್ವಜನಿಕರು ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ.

ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಕೆ ಕೃಷ್ಣ ಚೈತನ್ಯ, ರೈಲು ನಿರ್ವಹಣೆ ಮತ್ತು ಟರ್ಮಿನಲ್ ನಿರ್ವಹಣೆ ಎಂಬ ಎರಡು ಅಂಶಗಳ ಮೇಲೆ ಕೇಂದ್ರೀಕರಿಸಲಾಗಿದೆ. ಹಾಸನ-ಸೋಲಾಪುರ ಎಕ್ಸ್‌ಪ್ರೆಸ್, ಉದ್ಯಾನ್ ಎಕ್ಸ್‌ಪ್ರೆಸ್, ಸಂಘಮಿತ್ರ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಕರ್ನಾಟಕ ಎಕ್ಸ್‌ಪ್ರೆಸ್ ಹತ್ತುವ ಪ್ರಯಾಣಿಕರನ್ನು ಸೂಕ್ಷ್ಮವಾಗಿ ಗಮನಿಸಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT