ಬರಿದಾದ ಕಾವೇರಿ ಒಡಲು (ಸಂಗ್ರಹ ಚಿತ್ರ)  online desk
ರಾಜ್ಯ

ರಾಜ್ಯದಲ್ಲಿ ಬರದ ನಡುವೆ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ!

ರಾಜ್ಯದಲ್ಲಿ ಬೇಸಿಗೆ ತೀವ್ರಗೊಂಡು ಬರ ಎದುರಾಗಿರುವಾಗ ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ.

ನವದೆಹಲಿ: ರಾಜ್ಯದಲ್ಲಿ ಬೇಸಿಗೆ ತೀವ್ರಗೊಂಡು ಬರ ಎದುರಾಗಿರುವಾಗ ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ.

2.5 ಟಿಎಂಸಿ ನೀರು ಹರಿಸುವಂತೆ ತಮಿಳುನಾಡು ಆಗ್ರಹಿಸಿದೆ. "ನಮಗೆ ಈ ತಿಂಗಳು ಬರಬೇಕಿರುವ 2.5 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಒತ್ತಾಯಿಸಿದೆ.

ಅಷ್ಟೇ ಅಲ್ಲದೇ ಕರ್ನಾಟಕಕ್ಕೆ ಕುಡಿಯುವುದಕ್ಕೆ 0.5 ಟಿಎಂಸಿ ನೀರು ಸಾಕು, ಕುಡಿಯುವ ನೀರಿನ ನೆಪ ಹೇಳಿ ನೀರು ಬಿಡುಗಡೆಗೆ ನಿರಾಕರಿಸಬಾರದೆಂದು ಸಭೆಯಲ್ಲಿ ವಾದಿಸಿದೆ.

‘ಮಳೆಯ ಕೊರತೆ ಕಾರಣ ನೀಡಿ ಕರ್ನಾಟಕ ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡಿಲ್ಲ, ನಿಗಧಿತ ಪ್ರಮಾಣದ ನೀರು ಹರಿಸಿಲ್ಲ. ಫೆ.1 ರಿಂದ ಏಪ್ರಿಲ್ 28 ವರೆಗೂ ಪರಿಸರಕ್ಕೆ 7.33 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ, ಕರ್ನಾಟಕ 5.31 ಟಿಎಂಸಿ ನೀರು ಮಾತ್ರ ಹರಿಸಿದೆ ಇದರಲ್ಲೂ 2.016 ಟಿಎಂಸಿ ಬಾಕಿ ಉಳಿಸಿಕೊಂಡಿದೆ. ಮೆಟ್ಟೂರಿನಲ್ಲಿ 20 ಟಿಎಂಸಿಯಷ್ಟು ನೀರಿದೆ. ಕುಡಿಯಲು ಮತ್ತು ಪರಿಸರಕ್ಕೆ ಬಳಸಲಾಗುತ್ತಿದೆ. ಬಾಕಿ ಉಳಿಸಿಕೊಂಡ ಪರಿಸರ ಬಳಕೆ ನೀರು ಬಿಡುಗಡೆ ಮಾಡಬೇಕು ಎಂದು ತಮಿಳುನಾಡು ಅಧಿಕಾರಿಗಳು ಬೇಡಿಕೆ ಮುಂದಿಟ್ಟಿದ್ದಾರೆ.

ತಮಿಳುನಾಡಿನ ವಾದಕ್ಕೆ ಕರ್ನಾಟಕ ತೀವ್ರ ವಿರೋಧ ವ್ಯಕ್ತಪಡಿಸಿದೆ. ‘ರಾಜ್ಯದಲ್ಲಿ ಭೀಕರ ಬರದಿಂದ ಕುಡಿಯುವ ನೀರಿನ ಸಮಸ್ಯೆಯಾಗಿದೆ. ನೀರು ಹರಿಸಲು ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲವೆಂದು ವಾದ ಮಂಡಿಸಿದೆ. ರಾಜ್ಯಗಳ ವಾದ ಆಲಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿ, ಮೇ 16ಕ್ಕೆ ಮತ್ತೊಂದು ಸುತ್ತಿನ ಸಭೆ ನಡೆಸಲು ತೀರ್ಮಾನ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!

ಬರದಿಂದ ರೈತರು ಕಂಗಾಲಾಗಿದ್ದರೂ ಸಿಎಂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್'ನದ್ದೇ ಚಿಂತೆ: HDK ವ್ಯಂಗ್ಯ