ಬತ್ತಿದ ಕಾವೇರಿ ನದಿಯ ಜಲಾನಯನ ಪ್ರದೇಶ - ಟ್ಯಾಂಕರ್‌ 
ರಾಜ್ಯ

ಉಗಮ ಸ್ಥಾನದಲ್ಲೆ ಬರಿದಾದ ಕಾವೇರಿ; ಕೊಡಗಿನಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ!

ಕಾವೇರಿ ನದಿ ಸಂಪೂರ್ಣವಾಗಿ ಬತ್ತಿ ಹೋದ ದೃಶ್ಯಗಳು ಇಲ್ಲಿನ ನಿವಾಸಿಗಳಿಗೆ ಆತಂಕ ಉಂಟು ಮಾಡಿದ್ದು, ಕುಡಿಯುವ ನೀರು ಪೂರೈಕೆಗಾಗಿ ಅಧಿಕಾರಿಗಳು ಬೋರ್‌ವೆಲ್‌ನಿಂದ ನೀರು ಪಡೆಯಬೇಕಾದ ಅನಿವಾರ್ಯತೆ ಎದುರಾಗಿದೆ.

ಮಡಿಕೇರಿ: ಜೀವನದಿ ಕಾವೇರಿ ಉಗಮ ಸ್ಥಾನ ಕೊಡಗಿನಲ್ಲೇ ಬರಿದಾಗಿದ್ದು, ನದಿ ಪಾತ್ರದ ಹಳ್ಳಿಗಳಲ್ಲಿ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಕುಶಾಲನಗರದಾದ್ಯಂತ ಕಾವೇರಿ ನದಿ ಬತ್ತಿ ಹೋಗಿದ್ದರಿಂದ ಎಕರೆಗಟ್ಟಲೆ ಭೂಮಿ ಬರಡಾಗಿದೆ.

ಸಾಮಾನ್ಯವಾಗಿ ನದಿಯಡಿಯಲ್ಲಿ ಮುಳುಗಿರುತ್ತಿದ್ದ ಬಂಡೆಯ ತುಣುಕುಗಳು ಈಗ ಕಾಣಿಸುತ್ತಿದ್ದು, ಇದು ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಬಿಕ್ಕಟ್ಟಿನ ಬಗ್ಗೆ ಸುಳಿವು ನೀಡುತ್ತಿದೆ. ಅಮೃತ್ 2.0 ರ ಮಹಾ ಯೋಜನೆಯ ಮೂಲಕ ಕುಶಾಲನಗರದಾದ್ಯಂತ ನೀರಿನ ಬಿಕ್ಕಟ್ಟನ್ನು ಕೊನೆಗೊಳಿಸುವ ಭರವಸೆ ನೀಡಿದ್ದರೂ, ಪೈಪ್‌ಲೈನ್ ಪೂರೈಕೆಯನ್ನು ಸಕ್ರಿಯಗೊಳಿಸಲು ನದಿಯಲ್ಲಿ ನೀರೇ ಇಲ್ಲ.

ಕಾವೇರಿ ನದಿ ಸಂಪೂರ್ಣವಾಗಿ ಬತ್ತಿ ಹೋದ ದೃಶ್ಯಗಳು ಇಲ್ಲಿನ ನಿವಾಸಿಗಳಿಗೆ ಆತಂಕ ಉಂಟು ಮಾಡಿದ್ದು, ಕುಡಿಯುವ ನೀರು ಪೂರೈಕೆಗಾಗಿ ಅಧಿಕಾರಿಗಳು ಬೋರ್‌ವೆಲ್‌ನಿಂದ ನೀರು ಪಡೆಯಬೇಕಾದ ಅನಿವಾರ್ಯತೆ ಎದುರಾಗಿದೆ.

ಕುಶಾಲನಗರದಲ್ಲಿ ಈ ವರ್ಷ ಶೇ.50ಕ್ಕಿಂತ ಕಡಿಮೆ ಮಳೆಯಾಗಿದ್ದು, ನೀರಿನ ಸಮಸ್ಯೆ ಉತ್ತುಂಗದಲ್ಲಿದೆ. ಈ ವರ್ಷದ ಮಾರ್ಚ್ ಆರಂಭದಲ್ಲಿ, ಕುಶಾಲನಗರ ಪುರಸಭೆಯಾದ್ಯಂತ 32,000 ಕ್ಕೂ ಹೆಚ್ಚು ಜನಸಂಖ್ಯೆಗೆ ಪೈಪ್‌ಲೈನ್ ನೀರು ಸರಬರಾಜು ಮಾಡಲು ಬೈಚನಹಳ್ಳಿ ಬಳಿ ನೀರೆತ್ತುವ ಯಂತ್ರಾಗಾರ ಬಳಿ ನದಿಯಿಂದ ನೀರು ದೊರೆಯದೆ ನೀರು ಸರಬರಾಜು ಮಂಡಳಿಯಿಂದ ನೀರು ಪೂರೈಕೆ ಸ್ಥಗಿತಗೊಂಡಿದೆ. ಹೀಗಾಗಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.

'ಹತ್ತು ವರ್ಷಗಳ ಹಿಂದೆ ಸ್ಥಳೀಯ ಅಧಿಕಾರಿಗಳು ಹಾರಂಗಿ ಜಲಾಶಯದಿಂದ ಕುಶಾಲನಗರಕ್ಕೆ 80 ಕೋಟಿ ರೂ.ವೆಚ್ಚದಲ್ಲಿ ಕುಡಿಯುವ ನೀರು ತರಲು ಯೋಜನೆ ರೂಪಿಸಿದ್ದರು. ಕುಶಾಲನಗರ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಿ ಮಂಡಿಸಲಾಯಿತು. ಆದರೆ, ಈ ಯೋಜನೆ ಕಾರ್ಯರೂಪಕ್ಕೆ ಬರಲೇ ಇಲ್ಲ’ ಎಂದು ಕುಶಾಲನಗರದ ನಿವಾಸಿ ಹಾಗೂ ರೈತ ಕೆ.ಎಸ್.ಮೂರ್ತಿ ನೆನಪಿಸಿಕೊಂಡರು.

ಕುಶಾಲನಗರದಲ್ಲಿ ಕಾವೇರಿ ನದಿಗೆ ನೀರಿನ ಅಭಾವ ತಲೆದೋರಿದ್ದು, ಇದೀಗ ಪುರಸಭೆಯವರು ಕೊಳವೆಬಾವಿಗಳ ಮೊರೆ ಹೋಗಿದ್ದಾರೆ. ಟಿಎಂಸಿ ಮಿತಿಯಲ್ಲಿ ಐದು ಕೊಳವೆ ಬಾವಿಗಳಿದ್ದು, ಎಲ್ಲ ಮನೆಗಳಿಗೆ ಐದು ಟ್ಯಾಂಕರ್‌ಗಳ ಮೂಲಕ ಪ್ರತಿದಿನ 3 ಲಕ್ಷ ಲೀಟರ್‌ ನೀರು ಪೂರೈಸಲಾಗುತ್ತಿದೆ ಎಂದು ಕುಶಾಲನಗರ ವಿಭಾಗದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎಇಇ ಆನಂದ್‌ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT