ಅಪಘಾತಕ್ಕೀಡಾದ ಕೆಎಸ್ ಆರ್ ಟಿಸಿ ಬಸ್ 
ರಾಜ್ಯ

ತಿರುಪತಿಗೆ ಹೋಗುತ್ತಿದ್ದ KSRTC Bus Break Fail: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಕರ್ನಾಟಕದಿಂದ ಆಂಧ್ರ ಪ್ರದೇಶದ ತಿರುಪತಿಗೆ ಹೋಗುತ್ತಿದ್ದ ಕೆಎಸ್ ಆರ್ ಟಿಸಿ (KSRTC) ಬಸ್ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ನಲ್ಲಿದ್ದ ಪ್ರಯಾಣಿಕರ ಪ್ರಾಣ ಉಳಿದಿದೆ.

ತಿರುಪತಿ: ಕರ್ನಾಟಕದಿಂದ ಆಂಧ್ರ ಪ್ರದೇಶದ ತಿರುಪತಿಗೆ ಹೋಗುತ್ತಿದ್ದ ಕೆಎಸ್ ಆರ್ ಟಿಸಿ (KSRTC) ಬಸ್ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ನಲ್ಲಿದ್ದ ಪ್ರಯಾಣಿಕರ ಪ್ರಾಣ ಉಳಿದಿದೆ.

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಚಂದ್ರಗಿರಿ ಮಡಲಂ ಬಳಿಯ ಭಾಕರಪೇಟ್ ಘಾಟ್‌ನಲ್ಲಿ ತೆರುಳುತ್ತಿದ್ದ ಕಎಸ್‌ಆರ್‌ಟಿಸಿ ಬಸ್‌ ಬ್ರೇಕ್ ಫೈಲ್ಯೂರ್‌ ಆಗಿ ಬಂಡೆಗೆ ಡಿಕ್ಕಿ ಹೊಡೆದಿದೆ.

ಬಸ್ ನಲ್ಲಿದ್ದ ಚಾಲಕ ಸಮೀಪದ ಪ್ರಪಾತದಿಂದ ಬಸ್ ಅನ್ನು ತಪ್ಪಿಸುವ ಸಲುವಾಗಿ ಪಕ್ಕದಲ್ಲೇ ಇದ್ದ ಬಂಡೆಗೆ ಬಸ್ ಢಿಕ್ಕಿ ಹೊಡೆಸಿದ್ದು, ಇದರಿಂದ ಭಾರಿ ಪ್ರಮಾಣದ ಅನಾಹುತವೊಂದು ತಪ್ಪಿದೆ. ಒಂದು ವೇಳೆ ಬಸ್ ಪ್ರಪಾತಕ್ಕೆ ಉರುಳಿದ್ದ ದೊಡ್ಡ ಮಟ್ಟದ ಸಾವುನೋವು ಸಂಭವಿಸುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ.

ಚಾಲಕನ ಸಮಯಪ್ರಜ್ಞೆ

ಕೆಎಸ್‌ಆರ್‌ಟಿಸಿ ಬಸ್‌ ಚಾಲಕನ ಸಮಯಪ್ರಜ್ಞೆ ಮೇರೆ ಸಂಭಾವ್ಯ ದೊಡ್ಡ ಅನಾಹುತವೊಂದು ತಪ್ಪಿಸಿದ್ದಾರೆ. ಪ್ರಪಾತವನ್ನು ತಪ್ಪಿಸಿದ ಚಾಲಕ ಬಸ್‌ ಅನ್ನು ಬೆಟ್ಟದ ಬಂಡೆಗೆ ಗುದ್ದಿಸಿದ್ದಾರೆ. ಬಸ್‌ನಲ್ಲಿದ್ದ 43 ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ತಿರುಪತಿಯ ರೂಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್‌ ಮದನಪಲ್ಲಿ ಮಾರ್ಗವಾಗಿ ತಿರುಪತಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಬಿಟ್ಟರೆ ಯಾವುದೇ ಪ್ರಾಣ ಹಾನಿ ಆಗಿಲ್ಲ. ಕಂದಕ್ಕೆ ಬಸ್ ಬಿದ್ದಿದ್ದರೆ ಭಾರಿ ಆನಾಹುತ ಸಂಭವಿಸುತ್ತಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಚಂದ್ರಗಿರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಬಾಗೇಪಲ್ಲಿ ಡಿಪೋ ಮ್ಯಾನೇಜರ್ ಹಾಗೂ ಕೋಲಾರದ ಡಿಟಿಓ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಹೊರಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT