ಸುಪ್ರೀಂಕೋರ್ಟ್, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜ್ಯ

SC, ST ಒಳ ಮೀಸಲಾತಿ: ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕ- ಸಿಎಂ ಸಿದ್ದರಾಮಯ್ಯ

ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಒಳಮೀಸಲಾತಿ ಅನುಷ್ಠಾನದ ಹಾದಿಯಲ್ಲಿನ ಮುಖ್ಯ ಅಡ್ಡಿಯೊಂದು ನಿವಾರಣೆಯಾಗಿದೆ.

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳಲ್ಲಿ ಅತಿ ಹಿಂದುಳಿದವರನ್ನು ಗುರುತಿಸಿ ಒಳಮೀಸಲಾತಿ ನೀಡುವ ರಾಜ್ಯ ಸರ್ಕಾರಗಳ ಅಧಿಕಾರವನ್ನು ಎತ್ತಿಹಿಡಿದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾದುದ್ದಾಗಿದ್ದು, ನ್ಯಾಯಾಲಯದ ಈ ತೀರ್ಪನ್ನು ಮುಕ್ತವಾಗಿ ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತು ಫೋಸ್ಟ್ ಮಾಡಿರುವ ಮುಖ್ಯಮಂತ್ರಿ, ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಒಳಮೀಸಲಾತಿ ಅನುಷ್ಠಾನದ ಹಾದಿಯಲ್ಲಿನ ಮುಖ್ಯ ಅಡ್ಡಿಯೊಂದು ನಿವಾರಣೆಯಾಗಿದೆ. ತೀರ್ಪಿನಲ್ಲಿರುವ ವಿವಾದಾತ್ಮಕ ಕೆನೆಪದರದ ಬಗೆಗಿನ ಅಂಶವೂ ಸೇರಿದಂತೆ ಇತರ ವಿಷಯಗಳ ಬಗ್ಗೆ ಪರಿಶಿಷ್ಟ ಜಾತಿಯ ನಾಯಕರು ಮತ್ತು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಬಗ್ಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಹಿಂದೆ ಕಾಂಗ್ರೆಸ್ ಪಕ್ಷದ ಸರ್ಕಾರವೇ ರಚಿಸಿದ್ದ ನ್ಯಾ.ಎ.ಜೆ.ಸದಾಶಿವ ಅವರ ಅಧ್ಯಕ್ಷತೆಯ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವುದಾಗಿ ನಾವು ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗೆ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

ಈ ನಡುವೆ ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಒಳಮೀಸಲಾತಿ ಬಗ್ಗೆ ಅವಸರದಲ್ಲಿ ತೀರ್ಮಾನ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಟ್ಟಿತ್ತು. ಪರಿಶಿಷ್ಟ ಜಾತಿಯೊಳಗಿನ ಮೀಸಲಾತಿಯನ್ನು ಸಂವಿಧಾನ ತಿದ್ದುಪಡಿಯ ಮೂಲಕ ಅನುಷ್ಠಾನಗೊಳಿಸಬಹುದು ಎಂದು ಕೇಂದ್ರ ಸರ್ಕಾರವೇ ರಚಿಸಿದ್ದ ಉಷಾ ಮೆಹ್ರಾ ಸಮಿತಿ ಸ್ಪಷ್ಟವಾಗಿ ತಿಳಿಸಿದ್ದರೂ ಕೇಂದ್ರ ಸರ್ಕಾರ ಇಲ್ಲಿಯವರೆಗೆ ತೀರ್ಮಾನ ಕೈಗೊಳ್ಳದೆ ಮೂಲೆಗೆ ಸರಿಸಿತ್ತು ಎಂದು ಟೀಕಿಸಿದ್ದಾರೆ.

ಈಗಿನ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ನ್ಯಾ.ಎ.ಜೆ.ಸದಾಶಿವ ಆಯೋಗದ ಶಿಫಾರಸುಗಳನ್ನು ಕೂಲಂಕಷವಾಗಿ ಅಧ್ಯಯನ ನಡೆಸಿ, ಅಗತ್ಯ ಬಿದ್ದರೆ ಇದಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆಗಳನ್ನು ಪರಿಗಣನೆಗೆ ತೆಗೆದುಕೊಂಡು ಸಮಾಲೋಚನೆ-ಸಂಧಾನದ ಮೂಲಕ ಒಳಮೀಸಲಾತಿ ಬಗ್ಗೆ ಸ್ಪಷ್ಟವಾದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಪೋಕ್ಸೋ ಕೇಸ್​ ಆರೋಪಿಯ ಭೀಭತ್ಸ ಕೃತ್ಯ: ಜಾಮೀನಿನ ಮೇಲೆ ಬಿಡುಗಡೆಯಾದ ಕೂಡಲೇ ಸಂತ್ರಸ್ತೆ ಸೇರಿ 6 ಮಂದಿಯ ಭೀಕರ ಹತ್ಯೆ!