ಅಂಗಾಂಗ ದಾನ 
ರಾಜ್ಯ

ಅಂಗಾಂಗ ದಾನ: ಕರ್ನಾಟಕಕ್ಕೆ ದೇಶದಲ್ಲೇ 2ನೇ ಸ್ಥಾನ

ಈ ವರ್ಷ ಜನವರಿ 26 ರಿಂದ ಆಗಸ್ಟ್ 14 ರವರೆಗೆ ಅಂಗಾಂಗ ದಾನ ಮಾಡಿದವರಿಗೆ ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಿಸಲು ಸರ್ಕಾರ ನಿರ್ಧರಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಅಂಗಾಂಗ ದಾನ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಅಂಗಾಂಗ ದಾನದಲ್ಲಿ ದೇಶದಲ್ಲಿಯೇ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.

2023ರಲ್ಲಿ ಅಂಗಾಂಗ ದಾನದಲ್ಲಿ ಕರ್ನಾಟಕ ಎರಡನೇ ಅತ್ಯುತ್ತಮ ರಾಜ್ಯ ಎಂಬ ಹೆಗ್ಗಳಿಕೆ ಪಡೆದಿದ್ದು ಕೇಂದ್ರ ಸರ್ಕಾರ ಈ ಪ್ರಶಸ್ತಿಯನ್ನು ಘೋಷಿಸಿತ್ತು. ರಾಜ್ಯದಲ್ಲಿ 178 ಜನ ಅಂಗಾಂಗ ದಾನ ಮಾಡಿದ್ದಾರೆ. ಅಂಗಾಂಗ ದಾನ ಕಾರ್ಯಕ್ರಮದಲ್ಲಿ ಕರ್ನಾಟಕ ಗಮನಾರ್ಹ ಸಾಧನೆ ಮಾಡಿದೆ. ಭಾರತದ ಎಲ್ಲಾ ಜಿಲ್ಲೆಗಳಲ್ಲಿ ಬಳ್ಳಾರಿ ಜಿಲ್ಲೆ ಅತಿ ಹೆಚ್ಚು ಅಂಗಾಂಗ ದಾನಕ್ಕೆ ವಾಗ್ದಾನ ಮಾಡಿರುವ ಜಿಲ್ಲೆಯಾಗಿದೆ.

ರಾಜ್ಯದಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಅಂಗಾಂಗ ದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆದಿದೆ. ‘ಆಯುಷ್ಮಾನ್ ಭವ’ ಆರೋಗ್ಯ ಮೇಳದಲ್ಲಿ ಅಂಗಾಂಗ ದಾನದ ಪ್ರತಿಜ್ಞೆ ಪಡೆಯುವಲ್ಲಿ ಕರ್ನಾಟಕ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.

ಅಂಗಾಂಗ ದಾನವನ್ನು ಮತ್ತಷ್ಟು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಅಂಗಾಂಗ ದಾನ ಮಾಡಿದ ಕುಟುಂಬದ ಸದಸ್ಯರನ್ನು ಗೌರವಿಸಲು ಆದೇಶ ಹೊರಡಿಸಿದೆ. ಜೊತೆಗೆ ಹೊಸ ನಿರ್ದೇಶನದ ಪ್ರಕಾರ, ಈ ವರ್ಷ ಜನವರಿ 26 ರಿಂದ ಆಗಸ್ಟ್ 14 ರವರೆಗೆ ಅಂಗಾಂಗ ದಾನ ಮಾಡಿದವರಿಗೆ ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಿಸಲು ಸರ್ಕಾರ ಮುಂದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT