ಸಚಿವ ಸಂತೋಷ್ ಲಾಡ್ 
ರಾಜ್ಯ

ಕೇರಳ ಗುಡ್ಡ ಕುಸಿತ ದುರಂತ; ಕನ್ನಡಿಗರ ನೆರವಿಗೆ ವಯಾನಾಡಿಗೆ ತೆರಳಿದ ಸಚಿವ ಸಂತೋಷ್ ಲಾಡ್

ಭೂಕುಸಿತದಲ್ಲಿ ಚಾಮರಾಜನಗರದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ, 10 ಜನರನ್ನು ರಕ್ಷಿಸಲಾಗಿದೆ. ಒಡಿಶಾ ಮೂಲದ ಬೆಂಗಳೂರಿನ ವೈದ್ಯರೂ ಕೂಡ ಸಂಕಷ್ಟಕ್ಕೆ ಸಿಲುಕಿದ್ದರು. ಅವರನ್ನೂ ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದಾಗದಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರವು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ನೇಮಕ ಮಾಡಿದ್ದು, ರಾಜ್ಯದಿಂದ ಕೇರಳಕ್ಕೆ ಆಗಬೇಕಾದ ಸಹಾಯದ ನೇತೃತ್ವ ವಹಿಸಿದೆ.

ಸರ್ಕಾರದ ಸೂಚನೆ ಬೆನ್ನಲ್ಲೇ ಸಂತೋಷ್ ಲಾಡ್ ಅವರು ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳೊಂದಿಗೆ ಬುಧವಾರ ಮಧ್ಯಾಹ್ನ ವಯನಾಡಿಗೆ ಭೇಟಿ ನೀಡಿದ್ದು, ನೆರವಿನ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಭೂಕುಸಿತದಲ್ಲಿ ಚಾಮರಾಜನಗರದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ, 10 ಜನರನ್ನು ರಕ್ಷಿಸಲಾಗಿದೆ. ಒಡಿಶಾ ಮೂಲದ ಬೆಂಗಳೂರಿನ ವೈದ್ಯರೂ ಕೂಡ ಸಂಕಷ್ಟಕ್ಕೆ ಸಿಲುಕಿದ್ದರು. ಅವರನ್ನೂ ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ. ಕರ್ನಾಟಕದ ಇನ್ನೂ ಎಷ್ಟು ಜನರು ವಯನಾಡಿನಲ್ಲಿ ಸಿಲುಕಿಕೊಂಡಿದ್ದಾರೆ ಎಂಬುದು ತಿಳಿದಿಲ್ಲ. ಇಲ್ಲಿಯವರೆಗೆ ರಕ್ಷಣೆಗೊಳಗಾದ ಕರ್ನಾಟಕ ಮೂಲದವರು ವಯಾನಾಡಿನಲ್ಲಿ ಕಳೆದ ಕಳೆದ 30-40 ವರ್ಷಗಳಿಂದ ವಾಸವಿದ್ದರು ಎಂಬ ಮಾಹಿತಿ ಇದೆ ಎಂದು ಸಂತೋಷ್ ಲಾಡ್ ಅವರು ತಿಳಿಸಿದ್ದಾರೆ.

ಕೇರಳವು 50 ಫ್ರೀಜರ್ ಬಾಕ್ಸ್‌ಗಳನ್ನು ಕೇಳಿದೆ. ರಾಜ್ಯ ಸರ್ಕಾರ 30ಕ್ಕೆ ವ್ಯವಸ್ಥೆ ಮಾಡಿದೆ. ಇವುಗಳಉ ಬುಧವಾರ ರಾತ್ರಿ ವೇಳೆಗೆ ವಯನಾಡು ತಲುಪಬೇಕು ಎಂದು ಹೇಳಿದರು.

ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಜೊತೆಗೆ ಮಾತುಕತೆ ನಡೆಸಿದ್ದು, ಅಗತ್ಯ ನೆರವಿನ ಭರವಸೆ ನೀಡಿದ್ದಾರೆ.

ದೂರವಾಣಿ ಮೂಲಕ ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಪರಿಹಾರ ಕಾರ್ಯದಲ್ಲಿ ನಮ್ಮ ಸರ್ಕಾರ ನಿಮ್ಮೊಂದಿಗೆ ಕೈ ಜೋಡಿಸಲಿದೆ. ಅಗತ್ಯ ನೆರವು ಒದಗಿಸಲು ಸಿದ್ಧವಾಗಿದ್ದೇವೆ. ರಕ್ಷಣಾ ತಂಡಗಳು ಮತ್ತು ಸಾಮಗ್ರಿಗಳನ್ನು ಕಳುಹಿಸಲಾಗುತ್ತಿದೆ ಎಂದು ಭರವಸೆ ನೀಡಿ ಸಾಂತ್ವನ ಹೇಳಿದ್ದಾರೆ.

ಸದ್ಯ ಸಿಎಂ ಸೂಚನೆ ಮೇರೆಗೆ ವಯನಾಡ್‌ಗೆ ಆಗಮಿಸಿರುವ ಸಚಿವ ಸಂತೋಷ್ ಲಾಡ್ ಅವರು ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಿಎಂಗೆ ಸಂತೋಷ್ ಲಾಡ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT