ನೈಸ್ ರಸ್ತೆ 
ರಾಜ್ಯ

ಬೆಂಗಳೂರು: ನೈಸ್ ರಸ್ತೆಯಲ್ಲಿ ವಾಹನಗಳಿಗೆ ವೇಗದ ಮಿತಿ ನಿಗದಿ!

ಚಾಲಕನ ಆಸನದ ಜೊತೆಗೆ (M1 ವರ್ಗದ ವಾಹನಗಳು) ಹೆಚ್ಚುವರಿಯಾಗಿ ಎಂಟು ಆಸನಗಳನ್ನು ಒಳಗೊಂಡಿರುವ ಪ್ರಯಾಣಿಕರ ಸಾಗಣೆಗೆ ಬಳಸುವ ವಾಹನಗಳಿಗೆ ವೇಗದ ಮಿತಿಯನ್ನು ಗಂಟೆಗೆ 120 ಕಿ.ಮೀ. ಎಂದು ನಿಗದಿಪಡಿಸಲಾಗಿದೆ.

ಬೆಂಗಳೂರು: ನೈಸ್ ರಸ್ತೆಯಲ್ಲಿ ವಾಹನ ಚಾಲಕರ ಅಜಾಗರೂಕತೆ, ನಿರ್ಲಕ್ಷ್ಯ ಮತ್ತು ಅತಿವೇಗದಿಂದ ಹಲವಾರು ಗಂಭೀರ ಮತ್ತು ಮಾರಣಾಂತಿಕ ಅಪಘಾತಗಳು ಸಂಭವಿಸಿರುವುದರಿಂದ ರಸ್ತೆ ಬಳಕೆದಾರರ ಸುರಕ್ಷತೆಯ ಹಿತದೃಷ್ಟಿಯಿಂದ ವೇಗದ ಮಿತಿಯನ್ನು ನಿಗದಿಪಡಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಬೆಂಗಳೂರು ಸಂಚಾರಿ ಪೊಲೀಸರ ಪ್ರಕಾರ, ಚಾಲಕನ ಆಸನದ ಜೊತೆಗೆ (M1 ವರ್ಗದ ವಾಹನಗಳು) ಹೆಚ್ಚುವರಿಯಾಗಿ ಎಂಟು ಆಸನಗಳನ್ನು ಒಳಗೊಂಡಿರುವ ಪ್ರಯಾಣಿಕರ ಸಾಗಣೆಗೆ ಬಳಸುವ ವಾಹನಗಳಿಗೆ ವೇಗದ ಮಿತಿಯನ್ನು ಗಂಟೆಗೆ 120 ಕಿ.ಮೀ. ಎಂದು ನಿಗದಿಪಡಿಸಲಾಗಿದೆ.

ಚಾಲಕನ ಆಸನದ ಜೊತೆಗೆ ಒಂಬತ್ತು ಅಥವಾ ಅದಕ್ಕಿಂತ ಹೆಚ್ಚಿನ ಆಸನಗಳನ್ನು ಹೊಂದಿರುವ ಮೋಟಾರು ವಾಹನಗಳಿಗೆ ಗಂಟೆಗೆ 100 ಕಿ.ಮೀ ಮತ್ತು ಸರಕು ಸಾಗಣೆಗೆ ಬಳಸುವ ಮೋಟಾರ್‌ಸೈಕಲ್‌ಗಳು ಮತ್ತು ವಾಹನಗಳ ವೇಗದ ಮಿತಿಯನ್ನು ಗಂಟೆಗೆ 80 ಕಿಮೀ ಎಂದು ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದರು.

ಇದಲ್ಲದೇ ನೈಸ್ ರಸ್ತೆಯಲ್ಲಿ ಎಲ್ಲಾ ದಿನ ರಾತ್ರಿ 10 ರಿಂದ ಬೆಳಗಿನ ಜಾವ 5 ಗಂಟೆಯವರೆಗೆ ದ್ವಿಚಕ್ರ ವಾಹನಗಳನ್ನು ಬಳಸದಂತೆ ಪೊಲೀಸರು ನಿರ್ಬಂಧ ಹೇರಿದ್ದು, ಆಗಸ್ಟ್ 2 ರಿಂದ ಈ ನಿರ್ಬಂಧಗಳು ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್