ಪ್ರಭು ಹಾಗೂ ನವ್ಯ 
ರಾಜ್ಯ

ಚಿಕ್ಕಬಳ್ಳಾಪುರ: ರೈಲಿಗೆ ತಲೆಕೊಟ್ಟು ಅಣ್ಣ ತಂಗಿ ಆತ್ಮಹತ್ಯೆ

ಬೆಂಗಳೂರಿನಿಂದ ಚಿಕ್ಕಬಳ್ಳಾಪುರ - ಶಿಡ್ಲಘಟ್ಟ ಮಾರ್ಗವಾಗಿ ಕೋಲಾರಕ್ಕೆ ತೆರಳುತ್ತಿದ್ದ ರೈಲಿಗೆ ರಾತ್ರಿ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ರೈಲಿಗೆ ತಲೆ ಕೊಟ್ಟು ಅಣ್ಣ ಹಾಗೂ ತಂಗಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಶುಕ್ರವಾರ ನಡೆದಿದೆ.

ಬೆಂಗಳೂರಿನಿಂದ ಚಿಕ್ಕಬಳ್ಳಾಪುರ - ಶಿಡ್ಲಘಟ್ಟ ಮಾರ್ಗವಾಗಿ ಕೋಲಾರಕ್ಕೆ ತೆರಳುತ್ತಿದ್ದ ರೈಲಿಗೆ ರಾತ್ರಿ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಬೆಳಗ್ಗೆ ರೈಲ್ವೆ ಹಳಿ ಮೇಲೆ ಅಣ್ಣ, ತಂಗಿಯ ರುಂಡ ಬೇರೆ, ಬೇರೆಯಾಗಿರುವ ಶವ ಪತ್ತೆಯಾಗಿದೆ.

ಮೃತರನ್ನು ಪ್ರಭು(25) ಹಾಗೂ ನವ್ಯ(23) ಎಂದು ಗುರುತಿಸಲಾಗಿದೆ. ಇವರು ಅಣ್ಣ, ತಂಗಿಯಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ ಪ್ರೇಮನಗರ ನಿವಾಸಿಗಳು ಎನ್ನಲಾಗಿದೆ.

ಇತ್ತೀಚೆಗೆ ಪ್ರಭು ಹಾಗೂ ನವ್ಯ ಅವರ ತಾಯಿ ತೀರಿಕೊಂಡಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದ ಅಣ್ಣ, ತಂಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ರೈಲ್ವೆ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!