ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

BBMP ಕಚೇರಿಯಲ್ಲಿ ಅಗ್ನಿ ಅವಘಡ; ಕೆಲ ದಾಖಲೆಗಳು ಸುಟ್ಟು ಭಸ್ಮ

ಶಾರ್ಟ್​ ಸರ್ಕ್ಯೂಟ್​ನಿಂದ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ಸಂಗ್ರಹ ಚಿತ್ರ
Manjula VN
Updated On : 2 Aug 2024, 6:04 pm

ಬೆಂಗಳೂರು: ಬ್ಯಾಟರಾಯನಪುರ ಬಳಿಯ ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ ಕಂಪ್ಯೂಟರ್, ಕೆಲ ದಾಖಲೆಗಳು ಸುಟ್ಟು ಭಸ್ಮವಾಗಿದೆ.

ಶಾರ್ಟ್​ ಸರ್ಕ್ಯೂಟ್​ನಿಂದ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ಇಂದು (ಶುಕ್ರವಾರ) ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement

Advertisement

Also Read

ಬಿಬಿಎಂಪಿ ಕಸದ ಲಾರಿ ಡಿಕ್ಕಿಗೆ ಇಬ್ಬರು ಟೆಕ್ಕಿಗಳು ಬಲಿ ಪ್ರಕರಣ: ಚಾಲಕ ಬಂಧನ

ಕಳೆದ ವರ್ಷ 2023 ಆಗಸ್ಟ್​ 11 ರಂದು ಬಿಬಿಎಂಪಿ ಮುಖ್ಯ ಕಚೇರಿಯ ಬಿಬಿಎಂಪಿ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿ, ಬರೋಬ್ಬರಿ 9 ಮಂದಿ ಗಾಯಗೊಂಡಿದ್ದರು.

ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಹಿನ್ನೆಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ 9 ಮಂದಿಯನ್ನು ಪೊಲೀಸ್ ವಾಹನದಲ್ಲಿಯೇ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement