ನಗರ ಪೊಲೀಸ್ ಆಯುಕ್ತರು  
ರಾಜ್ಯ

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಬೆಂಗಳೂರಿನಲ್ಲಿ ಅವಕಾಶವಿಲ್ಲ: ಪೊಲೀಸ್ ಆಯುಕ್ತ ಬಿ ದಯಾನಂದ್

ನಗರದಲ್ಲಿ ಪ್ರತಿಭಟನೆಗೆ, ರ‍್ಯಾಲಿಗೆ, ಪಾದಯಾತ್ರೆಗೆ ಅನುಮತಿ ಇಲ್ಲ. ಹೈಕೋರ್ಟ್ ಆದೇಶದ ಅನ್ವಯ ಅನುಮತಿ ಇಲ್ಲ. ಆದರೂ ಪೂರಕವಾಗಿ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳುತ್ತೇವೆ.

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಳೆ ಶನಿವಾರದಿಂದ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಬಗ್ಗೆ ನಮ್ಮ ಬಳಿ ಬಂದು ಯಾರೂ ವಿನಂತಿ ಮಾಡಿಕೊಂಡಿಲ್ಲ. ಬೆಂಗಳೂರು ನಗರದಲ್ಲಿ ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ನಗರ ಪೊಲಿಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.

ಪಾದಯಾತ್ರೆ ಎಲ್ಲಿಂದ, ಯಾವ ರೀತಿ ಆರಂಭಿಸುತ್ತಾರೆ ಎಂಬ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ. ನಗರದಲ್ಲಿ ಪ್ರತಿಭಟನೆಗೆ, ರ‍್ಯಾಲಿಗೆ, ಪಾದಯಾತ್ರೆಗೆ ಅನುಮತಿ ಇಲ್ಲ. ಹೈಕೋರ್ಟ್ ಆದೇಶದ ಅನ್ವಯ ಅನುಮತಿ ಇಲ್ಲ. ಆದರೂ ಪೂರಕವಾಗಿ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳುತ್ತೇವೆ. ನನ್ನ ಮಟ್ಟದಲ್ಲಿ ಯಾರೂ ಬಂದು ಇದುವರೆಗೆ ಅನುಮತಿ ಕೇಳಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಜೆಡಿಎಸ್ ಪಾದಯಾತ್ರೆಗೆ ನಾವು ಅನುಮತಿ ನೀಡುವುದಿಲ್ಲ. ಅವರು ಮಾಡುವುದಿದ್ದರೆ ಮಾಡಿಕೊಳ್ಳಲಿ, ಅದರ ಬಗ್ಗೆ ನಮ್ಮ ತಕರಾರಿಲ್ಲ. ಆದರೆ, ಅಧಿಕೃತವಾಗಿ ಪೊಲೀಸ್ ಇಲಾಖೆಯಿಂದ ನಾವು ಅನುಮತಿ ನೀಡುವುದಿಲ್ಲ ಎಂದು ಗೃಹ ಸಚಿವರು ಹೇಳಿದ್ದರು. ಇದೀಗ ನಗರ ಪೊಲೀಸ್ ಆಯುಕ್ತರೂ ಅದೇ ರೀತಿ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಹೇಳುವುದೇನು: ಪೂರ್ವ ನಿಗದಿಯಂತೆ ನಾಳೆ ಶನಿವಾರ ಮೈಸೂರಿಗೆ ಪಾದಯಾತ್ರೆ ಆರಂಭವಾಗಲಿದೆ. ಸಣ್ಣಪುಟ್ಟ ಗೊಂದಲ ಇದ್ದರೂ ಪಾದಯಾತ್ರೆ ನಡೆಯಲಿದೆ. ಶನಿವಾರ ಬೆಳಗ್ಗೆ 8.30ಕ್ಕೆ‌ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಆರಂಭಗೊಳ್ಳಲಿದೆ. ಕುಮಾರಸ್ವಾಮಿಯೇ ಪಾದಯಾತ್ರೆಗೆ ಚಾಲನೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: Quad ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು Quad ಮಹತ್ವದ ತೀರ್ಮಾನ; ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

SCROLL FOR NEXT